Yuvavahini

AUG 24, 2026 2.00 PM IST

ಯುವವಾಹಿನಿ (ರಿ.) ಬೆಳ್ತಂಗಡಿ ಘಟಕ

ಸಾಂತ್ವನ ನಿಧಿ ಹಸ್ತಾಂತರಿಸಿ ಆರೋಗ್ಯ ವಿಚಾರಣೆ

ಧರ್ಮಸ್ಥಳ ಅಗಸ್ಟ್ 24: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಮಹಿಳಾ ನಿರ್ದೇಶಕರಾದ ಶ್ರೀಮತಿ ವೇದ ಪ್ರಭಾಕರ್ ಅವರ ಪತಿಯವರು ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ದಿನಾಂಕ 24.08.2026ರಂದು ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕ ನೆರವು ಹಾಗೂ ನೈತಿಕ ಸ್ಥೈರ್ಯ ನೀಡುವ ಉದ್ದೇಶದಿಂದ, ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ₹10,000/- (ಹತ್ತು ಸಾವಿರ ರೂಪಾಯಿ) ಸಾಂತ್ವನ ನಿಧಿಯನ್ನು ಘಟಕದ ಅಧ್ಯಕ್ಷರಾದ ಲೀಲಾವತಿ ಪಣಕಜೆ ಅವರು ಕುಟುಂಬದವರಿಗೆ ಹಸ್ತಾಂತರಿಸಿದರು. ಅಪಘಾತದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದೊಂದಿಗೆ ಯುವವಾಹಿನಿ ಪರಿವಾರ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಲಾಯಿತು. ಗಾಯಾಳು ಶೀಘ್ರ ಗುಣಮುಖರಾಗಿ ಸಂಪೂರ್ಣ ಆರೋಗ್ಯ ಹೊಂದಲಿ ಎಂದು ಹಾರೈಸಿ, ಕುಟುಂಬದವರಿಗೆ ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!