Yuvavahini

AUG 24, 2026 4.00 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ಉದ್ಯಮಶೀಲತೆಯ ಮೂಲಕ ಸ್ವಾವಲಂಬನೆ ಸಾಧ್ಯ: ಚಂದ್ರಿಕಾ ಎಸ್. ನಾಯಕ್

ಮಂಗಳೂರು: ಸಮಾಜದಲ್ಲಿ ವ್ಯವಸ್ಥಿತವಾಗಿ ಬದುಕಲು ಉದ್ಯೋಗದ ಅಗತ್ಯವಿದೆ. ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿಗಳಾಗಲು ಉತ್ತಮ ಅವಕಾಶಗಳು ದೊರೆತಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮದ ಉದ್ಘಾಟಕಿ ಚಂದ್ರಿಕಾ ಎಸ್. ನಾಯಕ್ ಹೇಳಿದರು. ಅವರು ಆ. 24ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಉರ್ವ ಸ್ಟೋರ್‌ನ ರಘು ಬಿಲ್ಡಿಂಗ್‌ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (CEDOK), ಮಂಗಳೂರು ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ CEDOK, ಮಂಗಳೂರು ಇದರ ಉಪನಿರ್ದೇಶಕ ಶಿವಾನಂದ ಯೆಲಿಗಾರ್ ಮಾತನಾಡಿ, ಸ್ವಾವಲಂಬನೆ ಹಾಗೂ ಸ್ವಂತ ಉದ್ಯೋಗದ ಪರಿಕಲ್ಪನೆಯನ್ನು ಉತ್ತೇಜಿಸುವ ಉದ್ದೇಶದಿಂದ ವರ್ಷದಲ್ಲಿ ಇಂತಹ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಸ್ವಂತ ಉದ್ಯೋಗದತ್ತ ಹೆಜ್ಜೆ ಇಡಬೇಕು ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಮಾತನಾಡಿ, ಉದ್ಯಮಿಯಾಗಲು ಆರ್ಥಿಕ ಸಂಪನ್ಮೂಲ ಎಷ್ಟು ಮುಖ್ಯವೋ, ಪ್ರತಿಭೆ, ಕೌಶಲ್ಯ ಮತ್ತು ಪರಿಶ್ರಮವೂ ಅಷ್ಟೇ ಅಗತ್ಯ. ಅಮೆಜಾನ್, ಇನ್ಫೋಸಿಸ್‌ನಂತಹ ಹಲವು ದೊಡ್ಡ ಸಂಸ್ಥೆಗಳು ಸಣ್ಣ ಮಟ್ಟದಿಂದ ಆರಂಭವಾಗಿ ಇಂದು ಬೃಹತ್ ಉದ್ಯಮಗಳಾಗಿ ಬೆಳೆದಿವೆ. ಸಮಯದ ಮಹತ್ವವನ್ನು ಅರಿತು ಉತ್ತಮ ಗುಣಮಟ್ಟದ ಉದ್ಯಮದಲ್ಲಿ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಯಶಸ್ವಿ ಉದ್ಯಮಿಗಳಾಗಬಹುದು ಎಂದು ಹೇಳಿದರು.

ಮತ್ತೋರ್ವ ಅತಿಥಿ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲದ ವ್ಯವಸ್ಥಾಪಕ ಜೀವನ್ ಕೊಲ್ಯ ಮಾತನಾಡಿ, ಯಶಸ್ವಿ ಉದ್ಯಮಿಯಾಗುವ ಮಾರ್ಗಗಳು, ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯುವ ವಿಧಾನ ಹಾಗೂ ಉದ್ಯಮದಲ್ಲಿ ಹಣಕಾಸು ನಿರ್ವಹಣೆ ಮತ್ತು ಮಾರುಕಟ್ಟೆಯ ಅಗತ್ಯತೆಗಳ ಕುರಿತು ಮಾಹಿತಿ ನೀಡಿದರು. ಇನ್ನೋರ್ವ ಅತಿಥಿ ಸವಿತಾ ಕೋಟ್ಯಾನ್ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಕಾರ್ಯದರ್ಶಿ ಉಷಾ, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕಿ ಸವಿತಾ ಕೋಟ್ಯಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು. CEDOK ಸಂಸ್ಥೆಯ ಪ್ರವೀಶಾ ಕುಕ್ಯಾನ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾ ಧನ್ಯವಾದ ಸಲ್ಲಿಸಿದರು.

ಹತ್ತು ದಿನಗಳ ಈ ತರಬೇತಿ ಕಾರ್ಯಾಗಾರವು ಉದ್ಯಮಶೀಲತೆಯ ಬಗ್ಗೆ ಅರಿವು ಮೂಡಿಸುವುದರೊಂದಿಗೆ, ಸ್ವಂತ ಉದ್ಯೋಗ ಆರಂಭಿಸಲು ಅಗತ್ಯವಾದ ಕೌಶಲ್ಯ, ಹಣಕಾಸು ನಿರ್ವಹಣೆ, ಸಾಲ ಸೌಲಭ್ಯ ಹಾಗೂ ಮಾರುಕಟ್ಟೆ ವ್ಯವಸ್ಥೆಯ ಕುರಿತು ಶಿಬಿರಾರ್ಥಿಗಳಿಗೆ ಪ್ರಾಯೋಗಿಕ ಮಾರ್ಗದರ್ಶನ ನೀಡುವ ಉದ್ದೇಶ ಹೊಂದಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!