Yuvavahini

AUG 23, 2026 11.00 AM IST

ಯುವವಾಹಿನಿ ಅಂತರ್ ಘಟಕ ಭಜನಾ ಸ್ಪರ್ಧೆ ಉದ್ಘಾಟನೆ

ಮಾಧವ ಕೀರ್ತನೋತ್ಸವ–2026ಕ್ಕೆ ಭಕ್ತಿಭಾವದ ಚಾಲನೆ

ಮಂಗಳೂರು ಅಗಸ್ಟ್ 23 : ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಆತಿಥ್ಯದಲ್ಲಿ ಆಯೋಜಿಸಲಾದ ಅಂತರ್ ಘಟಕ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ–2026 “ರ ಉದ್ಘಾಟನಾ ಸಮಾರಂಭವು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಭಕ್ತಿಭಾವ ಹಾಗೂ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಕೇಂದ್ರ ಸಮಿತಿ ಹಾಗೂ ಪಣಂಬೂರು–ಕುಳಾಯಿ ಘಟಕದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಗಣ್ಯರನ್ನು ಗೌರವಪೂರ್ವಕವಾಗಿ ವೇದಿಕೆಗೆ ಆಹ್ವಾನಿಸಲಾಯಿತು.

ಹಂಶಿ ಹಾಗೂ ಸುಕ್ಷಿತಾ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಪಣಂಬೂರು–ಕುಳಾಯಿ ಘಟಕದ ಕಾರ್ಯದರ್ಶಿ ಸಂದೀಪ್ ಕೋಟ್ಯಾನ್ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಪ್ರತಿನಿಧಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಮಾತನಾಡಿ, ಯುವವಾಹಿನಿ ನಡೆದು ಬಂದ ಸೇವಾ ಪಥವನ್ನು ಸ್ಮರಿಸಿ, ಅಂತರ್ ಘಟಕ ಭಜನಾ ಸ್ಪರ್ಧೆಯ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಎಚ್. ಜೈರಾಜ್ ಸೋಮಸುಂದರಂ ಸಮಾರಂಭ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಭಜನೆಯ ಮೂಲಕ ಸಂಸ್ಕೃತಿ, ಆಧ್ಯಾತ್ಮಿಕತೆ ಹಾಗೂ ಸಾಮಾಜಿಕ ಒಗ್ಗಟ್ಟನ್ನು ಬೆಳೆಸುವ ಯುವವಾಹಿನಿಯ ಕಾರ್ಯವನ್ನು ಶ್ಲಾಘಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೋಕೇಶ್ ಆರ್. ಆಮೀನ್ ಮಾತನಾಡಿ, ಯುವಜನರಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಭಜನೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಯುವಜನರನ್ನು ಉತ್ತಮ ಚಿಂತನೆಗಳತ್ತ ಕೊಂಡೊಯ್ಯಬಹುದು ಎಂದು ತಿಳಿಸಿದರು. ಪಣಂಬೂರು–ಕುಳಾಯಿ ಘಟಕದ ಅಧ್ಯಕ್ಷ ಸುನೀಲ್ ಸಾಲ್ಯಾನ್ ಅಧ್ಯಕ್ಷೀಯ ಮಾತುಗಳನ್ನಾಡಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಶುಭ ಹಾರೈಸಿದರು.

ಪಣಂಬೂರು–ಕುಳಾಯಿ ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕ ಸಚಿನ್ ಜಿ. ಅಮೀನ್ ಧನ್ಯವಾದ ಸಮರ್ಪಿಸಿದರು. ಭಕ್ತಿಭಾವ, ಸಾಂಸ್ಕೃತಿಕ ಸೊಬಗು ಹಾಗೂ ಸಂಘಟನೆಯ ಒಗ್ಗಟ್ಟಿನೊಂದಿಗೆ ನಡೆದ “ಮಾಧವ ಕೀರ್ತನೋತ್ಸವ–2026”**ರ ಉದ್ಘಾಟನಾ ಸಮಾರಂಭವು ಯಶಸ್ವಿಯಾಗಿ ನೆರವೇರಿತು. ಬಳಿಕ ಅಂತರ್ ಘಟಕ ಭಜನಾ ಸ್ಪರ್ಧೆಯು ವಿವಿಧ ಘಟಕಗಳ ತಂಡಗಳ ಉತ್ಸಾಹಭರಿತ ಭಾಗವಹಿಸುವಿಕೆಯೊಂದಿಗೆ ಮುಂದುವರಿಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!