Yuvavahini

AUG 23, 2026 8.00 PM IST

ಯುವವಾಹಿನಿ ಅಂತರ್ ಘಟಕ ಭಜನಾ ಸ್ಪರ್ಧೆ ಸಂಪನ್ನ

ಭಕ್ತಿ, ಸಂಗೀತ, ಸಂಸ್ಕೃತಿಯ ಸಮ್ಮಿಲನವಾದ “ಮಾಧವ ಕೀರ್ತನೋತ್ಸವ–2026”

ಮಂಗಳೂರು ಅಗಸ್ಟ್ 23 : ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಆತಿಥ್ಯದಲ್ಲಿ ನಡೆದ “ಮಾಧವ ಕೀರ್ತನೋತ್ಸವ–2026” ಅಂತರ್ ಘಟಕ ಭಜನಾ ಸ್ಪರ್ಧೆಯು ಅಗಸ್ಟ್ 23ರಂದು ಸಮಾರೋಪ ಸಮಾರಂಭವು ಸಂಜೆ 5.30ಕ್ಕೆ ಗಣ್ಯರು, ಕೇಂದ್ರ ಸಮಿತಿ ಹಾಗೂ ಘಟಕದ ಪದಾಧಿಕಾರಿಗಳು, ತೀರ್ಪುಗಾರರು, ಸ್ಪರ್ಧಾಳುಗಳು ಮತ್ತು ಭಕ್ತಾಭಿಮಾನಿಗಳ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಸ್ವಾಗತಿಸಿದರು. ಸುರೇಶ್ ಪೂಜಾರಿ ಪಣಂಬೂರು ಅವರು “ಮಾಧವ ಕೀರ್ತನೋತ್ಸವ”ದ ಪ್ರಸ್ತಾವನೆ ಮಂಡಿಸಿ, ಕಾರ್ಯಕ್ರಮದ ಉದ್ದೇಶ ಹಾಗೂ ಭಜನಾ ಪರಂಪರೆಯ ಮಹತ್ವವನ್ನು ವಿವರಿಸಿದರು.

ಈ ಸಂದರ್ಭದಲ್ಲಿ “ಮಾಧವ ಕೀರ್ತನೋತ್ಸವ ಪ್ರಶಸ್ತಿ”ಗೆ ಆಯ್ಕೆಯಾದ ವಿಜಯ ಕುಕ್ಯಾನ್ ಅವರನ್ನು ಗೌರವಿಸಲಾಯಿತು. ಪಣಂಬೂರು–ಕುಳಾಯಿ ಘಟಕದ ಮಾಜಿ ಅಧ್ಯಕ್ಷೆ ಮನೀಷಾ ರೂಪೇಶ್ ಅವರು ಸನ್ಮಾನಿತರ ಪರಿಚಯ ಮಾಡಿದರು. ಉದ್ಯಮಿ ಶೈಲೇಂದ್ರ ವೈ. ಸುವರ್ಣ ಅವರು ವಿಜಯ ಕುಕ್ಯಾನ್ ಅವರಿಗೆ ಪ್ರಶಸ್ತಿ ಪ್ರದಾನಿಸಿ ಗೌರವಿಸಿದರು. ಪ್ರಶಸ್ತಿ ಪುರಸ್ಕೃತ ವಿಜಯ ಕುಕ್ಯಾನ್ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಮುಖ್ಯ ಅತಿಥಿಗಳಾಗಿ ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಇದರ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಉದ್ಯಮಿ ಶೈಲೇಂದ್ರ ವೈ. ಸುವರ್ಣ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರ (ಪ್ರಭಾರ) ಮಿಥುನ್ ಭಾಗವಹಿಸಿ ಮಾತನಾಡಿ, ಯುವವಾಹಿನಿಯ ಸಾಂಸ್ಕೃತಿಕ ಚಟುವಟಿಕೆಗಳನ್ನು ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಧವ ಅಂಚನ್ ಅವರಿಗೆ ಗೌರವ ಅಭಿನಂದನೆ ಸಲ್ಲಿಸಲಾಯಿತು. ಭಜನಾ ಸ್ಪರ್ಧೆಯ ತೀರ್ಪುಗಾರರಾದ ಗುಣವತಿ ಸೋಮೇಶ್ವರ, ಸೋಮಶೇಖರ ಮಯ್ಯ ಹಾಗೂ ಶುಭಕರ್ ಶೆಟ್ಟಿಗಾರ್ ಅವರನ್ನು ಗೌರವಿಸಲಾಯಿತು. ಸತೀಶ್ ಕಿಲ್ಪಾಡಿ, ವಿದ್ಯಾ ರಾಕೇಶ್ ಹಾಗೂ ಸುಧಾ ಸುರೇಶ್ ತೀರ್ಪುಗಾರರ ಸಾಧನಾ ಪರಿಚಯವನ್ನು ಸಭೆಯ ಮುಂದಿಟ್ಟರು ತೀರ್ಪುಗಾರರ ಪರವಾಗಿ ಮಾತನಾಡಿದವರು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ತಂಡಗಳ ಉತ್ತಮ ಪ್ರದರ್ಶನವನ್ನು ಪ್ರಶಂಸಿಸಿದರು.

ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅಧ್ಯಕ್ಷೀಯ ಮಾತುಗಳನ್ನಾಡಿ, ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರನ್ನೂ ಅಭಿನಂದಿಸಿದರು.

22 ಘಟಕಗಳ ಭಾಗವಹಿಸುವಿಕೆ“ಮಾಧವ ಕೀರ್ತನೋತ್ಸವ–2026” ಅಂತರ್ ಘಟಕ ಭಜನಾ ಸ್ಪರ್ಧೆಯಲ್ಲಿ ಯುವವಾಹಿನಿಯ 22 ಘಟಕಗಳು ಭಾಗವಹಿಸಿದ್ದವು. ಭಕ್ತಿ, ಸಂಗೀತ ಹಾಗೂ ಸಾಂಸ್ಕೃತಿಕ ಸೊಬಗಿನಿಂದ ಕೂಡಿದ ಭಜನಾ ಪ್ರದರ್ಶನಗಳು ಪ್ರೇಕ್ಷಕರ ಗಮನ ಸೆಳೆದವು.

ಬಹುಮಾನ ವಿಜೇತರು
ಪ್ರಥಮ ಬಹುಮಾನ: ಬಂಟ್ವಾಳ ಘಟಕ
ದ್ವಿತೀಯ ಬಹುಮಾನ: ಗ್ರಾಮ ಚಾವಡಿ–ಕೊಣಾಜೆ ಘಟಕ
ತೃತೀಯ ಬಹುಮಾನ: ಸುರತ್ಕಲ್ ಘಟಕ

ತೀರ್ಪುಗಾರರ ಮೆಚ್ಚುಗೆ ಗಳಿಸಿದ ತಂಡಗಳು:

  • ಕಾರ್ಕಳ ಘಟಕ
  • ಕೂಳೂರು ಘಟಕ

ಅತ್ಯುತ್ತಮ ಶಿಸ್ತು ಪಾಲಿಸಿದ ತಂಡ: ಕಾರ್ಕಳ ಘಟಕ
ಉತ್ತಮ ಭಜಕ: ಕಡಬ ಘಟಕ
ಉತ್ತಮ ಭಜಕಿ: ಬಂಟ್ವಾಳ ಘಟಕ
ಅತ್ಯುತ್ತಮ ತಬಲ ವಾದನ: ಮೂಡುಬಿದ್ರೆ ಘಟಕ
ಅತ್ಯುತ್ತಮ ಹಾರ್ಮೋನಿಯಂ ವಾದನ: ಬಂಟ್ವಾಳ ಘಟಕ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಕಲೆ ಮತ್ತು ಸಾಹಿತ್ಯ ನಿರ್ದೇಶಕ ರಂಜನ್ ಕೆ. ಕೋಟ್ಯಾನ್ ಧನ್ಯವಾದ ಸಮರ್ಪಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಗಣ್ಯರು, ಕೇಂದ್ರ ಸಮಿತಿ ಹಾಗೂ ಘಟಕದ ಪದಾಧಿಕಾರಿಗಳು, ತೀರ್ಪುಗಾರರು, ಸ್ಪರ್ಧಾಳುಗಳು, ಪ್ರಾಯೋಜಕರು, ಕಾರ್ಯಕರ್ತರು ಹಾಗೂ ಸಹೃದಯರಿಗೆ ಕೃತಜ್ಞತೆ ಸಲ್ಲಿಸಿದರು. ಭಕ್ತಿ, ಸಂಗೀತ, ಸಂಸ್ಕೃತಿ ಹಾಗೂ ಸಂಘಟನೆಯ ಒಗ್ಗಟ್ಟಿನ ಸಮ್ಮಿಲನವಾಗಿ ಮೂಡಿಬಂದ “ಮಾಧವ ಕೀರ್ತನೋತ್ಸವ–2026” ಅಂತರ್ ಘಟಕ ಭಜನಾ ಸ್ಪರ್ಧೆಯು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!