Yuvavahini

AUG 26, 2026 7.00 PM IST

ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಹಾಗೂ ಯುವವಾಹಿನಿ (ರಿ.) ಮಾಣಿ ಘಟಕದ ಆಶ್ರಯದಲ್ಲಿ ಯುವ ದಿಕ್ಸೂಚಿ–2026

ಯುವಕರ ಭವಿಷ್ಯಕ್ಕೆ ದಿಕ್ಕು ತೋರಿದ ‘ಯುವ ದಿಕ್ಸೂಚಿ–2026’

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರುಇದರ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಾಣಿ ಘಟಕದ ಆತಿಥ್ಯದಲ್ಲಿ, B.E.W.S. (R.), ಮಂಗಳೂರು ಹಾಗೂ ಭಾರತ್ ಸ್ಕೌಟ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಯುವ ದಿಕ್ಸೂಚಿ–2026 – ಕನಸುಗಳಿಗೆ ರೆಕ್ಕೆ, ಭವಿಷ್ಯಕ್ಕೆ ದಿಕ್ಕು” ಎಂಬ ಮೂರು ದಿನಗಳ IBPS ಬ್ಯಾಂಕಿಂಗ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಕಾರ್ಯಾಗಾರವು ಯಶಸ್ವಿಯಾಗಿ ಸಂಪನ್ನಗೊಂಡಿತು.

ಆಗಸ್ಟ್ 24ರಿಂದ 26ರವರೆಗೆ ಮಂಗಳೂರಿನ ಲಾಲ್‌ಬಾಗ್‌ನಲ್ಲಿರುವ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಆಗಸ್ಟ್ 24ರಂದು ಜಿಲ್ಲಾ ಕಾರ್ಯದರ್ಶಿ ಪ್ರತಿಮ್ ಕುಮಾರ್ ಕೆ.ಎಸ್. ಉದ್ಘಾಟಿಸಿದರು. ಮಾಣಿ ಘಟಕದ ಅಧ್ಯಕ್ಷರು ಗಣೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಮೂರು ದಿನಗಳ ತರಬೇತಿಯಲ್ಲಿ ಬೆಂಗಳೂರಿನ ಖ್ಯಾತ ಬ್ಯಾಂಕಿಂಗ್ ತರಬೇತುದಾರ ಹಾಗೂ ವೃತ್ತಿ ಮಾರ್ಗದರ್ಶಕರಾದ ಆರ್.ಕೆ. ಬಾಲಚಂದ್ರ ಚಿಕ್ಕಮಗಳೂರು ಅವರು Quantitative Aptitude, Reasoning, English, General Awareness ಹಾಗೂ Interview Skills ಸೇರಿದಂತೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಆಳವಾದ ಹಾಗೂ ಪ್ರಾಯೋಗಿಕ ತರಬೇತಿ ನೀಡಿದರು.

ವಿದ್ಯಾರ್ಥಿಗಳ ಅನಿಸಿಕೆ ಹಂಚಿಕೆ ವಿಶೇಷ ಆಕರ್ಷಣೆ

ಆಗಸ್ಟ್ 26ರಂದು ಸಂಜೆ ನಡೆದ ಸಮಾರೋಪ ಸಮಾರಂಭವು ವಿದ್ಯಾರ್ಥಿಗಳ ಅನಿಸಿಕೆ ಹಂಚಿಕೆಯ ಮೂಲಕ ವಿಶೇಷ ಗಮನ ಸೆಳೆಯಿತು. ಯಾವುದೇ ಔಪಚಾರಿಕ ಪ್ರಮಾಣಪತ್ರ ವಿತರಣೆ ನಡೆಸದೆ, ತರಬೇತಿಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ತಮ್ಮ ಅನುಭವ ಹಾಗೂ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಅವಕಾಶ ನೀಡಲಾಯಿತು.

ವಿದ್ಯಾರ್ಥಿಗಳು ಮಾತನಾಡಿ, ಮೂರು ದಿನಗಳ ತರಬೇತಿಯಿಂದ IBPS ಪರೀಕ್ಷೆಯ ಕುರಿತಿದ್ದ ಭಯ ನಿವಾರಣೆಯಾಗಿ ಆತ್ಮವಿಶ್ವಾಸ ಹೆಚ್ಚಾಗಿದೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ಪ್ರವೇಶಿಸಲು ಅಗತ್ಯವಾದ ನಿಖರ ಮಾರ್ಗದರ್ಶನ ದೊರೆತಿದ್ದು, ಕೇವಲ ಪುಸ್ತಕದ ಜ್ಞಾನವಲ್ಲದೆ ಪರೀಕ್ಷೆ ಎದುರಿಸುವ ತಂತ್ರಗಳನ್ನು ಕಲಿಯಲು ಸಾಧ್ಯವಾಯಿತು ಎಂದು ಅಭಿಪ್ರಾಯಪಟ್ಟರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಯುವವಾಹಿನಿ ಉಚಿತವಾಗಿ ಉತ್ತಮ ಗುಣಮಟ್ಟದ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದರು.

ವಿದ್ಯಾರ್ಥಿಗಳ ಅನಿಸಿಕೆಗಳಿಗೆ ಪ್ರತಿಕ್ರಿಯಿಸಿದ ತರಬೇತುದಾರ ಆರ್.ಕೆ. ಬಾಲಚಂದ್ರ ಅವರು, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿ, ನಿರಂತರ ಅಭ್ಯಾಸ ಮತ್ತು ಶಿಸ್ತುಬದ್ಧ ತಯಾರಿಯೇ ಯಶಸ್ಸಿನ ಪ್ರಮುಖ ಕೀಲಿಕೈ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರಿನ ಅಧ್ಯಕ್ಷರು ಅಶೋಕ್ ಕುಮಾರ್ ಪಡ್ಪು ಮಾತನಾಡಿ, ಯುವವಾಹಿನಿ ಕೇವಲ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸೀಮಿತವಾಗದೆ ಯುವಕರ ಉದ್ಯೋಗ ಹಾಗೂ ಭವಿಷ್ಯ ನಿರ್ಮಾಣದಲ್ಲೂ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉದ್ಯೋಗಾಧಾರಿತ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಸತತ 3 ದಿನಗಳಿಂದ ತರಬೇತಿಯನ್ನು ನೀಡಿದ ಆರ್.ಕೆ ಬಾಲಚಂದ್ರ ಚಿಕ್ಕಮಗಳೂರು ಹಾಗೂ ಕಾರ್ಯಕ್ರಮದ ಮಾರ್ಗದರ್ಶಕರಾದ ಸುರೇಶ್ ಪಣಂಬೂರು ರವರನ್ನು ಅಭಿನಂದಿಸಲಾಯಿತು.

ಸಮಾರೋಪ ಸಮಾರಂಭದಲ್ಲಿ ಆರ್.ಕೆ. ಬಾಲಚಂದ್ರ ಚಿಕ್ಕಮಗಳೂರು, B.E.W.S. (R.) ಮಂಗಳೂರಿನ ಗೌರವಾಧ್ಯಕ್ಷ ಶ್ರೀಧರ್ ಪೂಜಾರಿ, ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ,ಮಾಜಿ ನಿರ್ದೇಶಕರು, B.S.R.B, ಬೆಂಗಳೂರು ಹಾಗೂ ಕೆನರಾ ಬ್ಯಾಂಕಿನ ನಿವೃತ್ತ ಸೀನಿಯರ್ ಮ್ಯಾನೇಜರ್ ಏಮ್.ಕೆ ಸುಬ್ರಾಯ ಪ್ರಭು,ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಹರೀಶ್ ಬಾಕಿಲ ಹಾಗೂ ಮಾಣಿ ಘಟಕದ ಕಾರ್ಯದರ್ಶಿ ವಿಶ್ವನಾಥ ಪೂಜಾರಿ ಉಪಸ್ಥಿತರಿದ್ದರು.

ಯುವವಾಹಿನಿ (ರಿ.) ಮಾಣಿ ಘಟಕದ ಕಾರ್ಯದರ್ಶಿ ವಿಶ್ವನಾಥ ಪೂಜಾರಿ ಸ್ವಾಗತಿಸಿದರು,ಕೋಶಾಧಿಕಾರಿ ತ್ರಿವೇಣಿ ರಮೇಶ್ ಮುಜಾಲ ವಂದಿಸಿದರು ಹಾಗೂ ರಾಜೇಶ್ ಬಲ್ಯ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!