ಮಂಗಳೂರು ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಶಾಲಾ ಮಕ್ಕಳು ಹಾಗೂ ಅಂಗನವಾಡಿ ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಗುರುಜಯಂತಿಯನ್ನು ಆಚರಿಸಲಾಯಿತು.

ಆಗಸ್ಟ್ 28ರಂದು ಕೊಟ್ಟಾರದಲ್ಲಿರುವ ಸೇಂಟ್ ಪೀಟರ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಯ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಅನ್ನದಾನವು ಶ್ರೇಷ್ಠ ದಾನವಾಗಿದ್ದು, ಸಾಧ್ಯವಾದಷ್ಟು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಭಗವಂತನ ಸೇವೆ ಮಾಡಿದ ತೃಪ್ತಿ ದೊರೆಯುತ್ತದೆ ಎಂಬ ಆಶಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ, ಕಾರ್ಯದರ್ಶಿ ಉಷಾ ಕೆ., ದ್ವಿತೀಯ ಉಪಾಧ್ಯಕ್ಷ ಮಹೇಶ್ ಅಮೀನ್, ವ್ಯಕ್ತಿತ್ವ ವಿಕಸನ ನಿರ್ದೇಶಕ ಶ್ರೀಕಾಂತ್ ಅಂಚನ್ ಹಾಗೂ ಕಟ್ಟಡ ಸಮಿತಿಯ ನಿಕಟಪೂರ್ವ ಸಂಚಾಲಕ ಯೋಗೀಶ್ ಕುಮಾರ್ ಉಪಸ್ಥಿತರಿದ್ದರು.


