Yuvavahini

AUG 28, 2026 8.00 PM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ‘ಗುರುತತ್ವವಾಹಿನಿ’ ಮಾಲಿಕೆ–75

“ಜ್ಞಾನದ ಬೆಳಕು ಜಗತ್ತಿನ ಬೆಳಕು” — ನಾರಾಯಣ ಗುರುಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಕುಸುಮಾಕರ ಕುಂಪಲ

ಸಜಿಪ, ಆಗಸ್ಟ್ 27 : “ಜ್ಞಾನದ ಬೆಳಕು ಜಗತ್ತಿನ ಬೆಳಕು” ಎಂದು ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಶಿಕ್ಷಣದ ಮೂಲಕ ಅಜ್ಞಾನ, ಅಂಧಕಾರ ಹಾಗೂ ಅಸಮಾನತೆಯನ್ನು ದೂರಮಾಡುವ ಮಾರ್ಗವನ್ನು ಸಮಾಜಕ್ಕೆ ತೋರಿಸಿಕೊಟ್ಟರು. ಜ್ಞಾನದಿಂದ ವ್ಯಕ್ತಿಯ ಉನ್ನತಿಯೊಂದಿಗೆ ಸಮಾಜದ ಪ್ರಗತಿಯೂ ಸಾಧ್ಯವಾಗುತ್ತದೆ. ಆದ್ದರಿಂದ ನಾರಾಯಣ ಗುರುಗಳ ಜ್ಞಾನ ಮತ್ತು ಸಮಾನತೆಯ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಯುವವಾಹಿನಿ (ರಿ.) ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಕುಸುಮಾಕರ ಕುಂಪಲ ತಿಳಿಸಿದರು.

ಅವರು ಸಜಿಪ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದಲ್ಲಿ ಆಗಸ್ಟ್ 27ರಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ‘ಗುರುತತ್ವವಾಹಿನಿ’ ಮಾಲಿಕೆ–75ರಲ್ಲಿ ಗುರುಸಂದೇಶ ನೀಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಕಾರ್ಯದರ್ಶಿ ಗೀತಾ ಜಗದೀಶ್, ಕೋಶಾಧಿಕಾರಿ ಪ್ರಜಿತ್ ಅಮೀನ್, ನಿರ್ದೇಶಕರಾದ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಯೋಗೀಶ್ ಪೂಜಾರಿ ಕಲ್ಲಡ್ಕ, ನವೀನ್ ಕಾರಜೆ, ಜಗನಾಥ್ ಕಲ್ಲಡ್ಕ, ಸುನೀತಾ ಮಾರ್ನಬೈಲು ಹಾಗೂ ಸದಸ್ಯರಾದ ಪ್ರಶಾಂತ್ ಏರಮಲೆ, ಯಶೋಧರ ಕಡಂಬಳಿಕೆ, ಯತೀಶ್ ಬೊಳ್ಳಾಯಿ, ಉದಯ್ ಮೇನಾಡ್, ಅಶ್ವಿನ್ ಕಾರಜೆ, ಚಿಂತನ್ ರಾಜ್, ಸುದೀಪ್ ರಾಯಿ, ಶೃಜನಿ, ಪ್ರಶಾಂತ್ ಪೂಜಾರಿ ಕೊಟ್ಟಾರಿಪಾಲು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ., ಜಗದೀಶ್ ಕಾರಜೆ, ನಾಗೇಶ್ ಪೊನ್ನೋಡಿ, ಶಿವಾನಂದ ಎಂ. ಹಾಗೂ ಸಜಿಪ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದ ಭಜನಾ ಅಧ್ಯಕ್ಷ ಪ್ರವೀಣ್ ಪೂಜಾರಿ, ಮಂದಿರದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ನಡೆದ ಭಜನಾ ಸಂಕೀರ್ತನೆಯಲ್ಲಿ ಪ್ರೇರಣಾ ದೇರಾಜೆ, ಸಾತ್ವಿಕ್ ದೇರಾಜೆ ಹಾಗೂ ಗಗನ್ ಕಂದೂರು ಸಂಗೀತ ಸೇವೆ ಸಲ್ಲಿಸಿದರು.

ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರ, ಸಜೀಪ ಮೂಡ–ಸುಭಾಷ್ ನಗರ ಇದರ ಅಧ್ಯಕ್ಷ ಮೋಹನ್ ದಾಸ್ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಧನ್ಯವಾದ ಅರ್ಪಿಸಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!