ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಗುರು ಜಯಂತಿಯ ಪ್ರಯುಕ್ತ ಆಗಸ್ಟ್ 28ರಂದು ‘ಗುರುನಮನ’ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಘಟಕದ ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗೌರವ ಸಲಹೆಗಾರರು, ಮಾಜಿ ಅಧ್ಯಕ್ಷರು, ನಿರ್ದೇಶಕರು, ಪದಾಧಿಕಾರಿಗಳು ಹಾಗೂ ಸದಸ್ಯರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಗುರು ಜಯಂತಿಯ ವಿಶೇಷ ಅಂಗವಾಗಿ ‘ಗುರು ಚಿಂತನ’ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿರುವ ಆನ್‌ಲೈನ್ ಭಾಷಣ ಸ್ಪರ್ಧೆಯ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಘಟಕದ ಪ್ರಧಾನ ಕಾರ್ಯದರ್ಶಿಯವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.


