Yuvavahini

AUG 30, 2026 8.00 PM IST

ಯುವವಾಹಿನಿ (ರಿ) ಕೆಂಜಾರು–ಕರಂಬಾರು ಘಟಕ

8ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ

ಕೆಂಜಾರು–ಕರಂಬಾರು ಅಗಸ್ಟ್ 30 : ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ಆಶ್ರಯದಲ್ಲಿ 8ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ–2026 ಕಾರ್ಯಕ್ರಮವು ಆಗಸ್ಟ್ 30ರಂದು ಶ್ರೀ ದೇವಿ ಭಜನಾ ಮಂದಿರದಲ್ಲಿ ಸಂಭ್ರಮ ಹಾಗೂ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವು ಪ್ರತಿಮಾ ಪಾಲನ್ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮಕ್ಕೆ ಸ್ಥಳಾವಕಾಶ ಒದಗಿಸಿ ಸಹಕರಿಸಿದ ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷರಾದ ಮಿತ್ರದಾಸ್ ಅಮೀನ್ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿಯ ವಿವಿಧ ಕಾರ್ಯಕ್ರಮಗಳಿಗೆ ನಿರಂತರವಾಗಿ ಬೆಂಬಲ ಹಾಗೂ ಪ್ರೋತ್ಸಾಹ ನೀಡುತ್ತಿರುವ ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಹಕಾರವನ್ನು ಈ ಸಂದರ್ಭದಲ್ಲಿ ಕೃತಜ್ಞತೆಯಿಂದ ಸ್ಮರಿಸಲಾಯಿತು.

ಘಟಕದ ಅಧ್ಯಕ್ಷರಾದ ಪ್ರಿತೇಶ್ ಅರ್ಬಿ ಅವರು ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಸಭಿಕರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ 2ನೇ ಉಪಾಧ್ಯಕ್ಷರು, ಕೆಂಜಾರು–ಕರಂಬಾರು ಘಟಕವು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿರುವ ಶ್ರೀಕೃಷ್ಣ ವೇಷ ಸ್ಪರ್ಧೆಯ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿಯೂ ಘಟಕದ ವತಿಯಿಂದ ಇನ್ನಷ್ಟು ಸಮಾಜಮುಖಿ ಹಾಗೂ ಉತ್ತಮ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ ಕೇಂದ್ರ ಸಮಿತಿಯ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಹರ್ಷಿತಾ ಚೇತನ್ ಹಾಗೂ ಸಾಂಸ್ಕೃತಿಕ ನಿರ್ದೇಶಕರಾದ ಸೌಮ್ಯ ವಿನೋದ್ ಕರಂಬಾರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಪುಟಾಣಿ ಮಕ್ಕಳ ಕಣ್ಮನ ಸೆಳೆಯುವ ಮುದ್ದುಕೃಷ್ಣ ವೇಷ ಸ್ಪರ್ಧೆ ನಡೆಯಿತು. ಸ್ಪರ್ಧೆಗೆ ಸ್ವಾತಿ ಸಂಜೀವ ಪೂಜಾರಿ ಹಾಗೂ ನಿಖಿತಾ ಎಂ.ಕೆ. ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಒಟ್ಟು ನಾಲ್ಕು ವಿಭಾಗಗಳಲ್ಲಿ 30ಕ್ಕೂ ಅಧಿಕ ಪುಟಾಣಿ ಸ್ಪರ್ಧಿಗಳು ಉತ್ಸಾಹದಿಂದ ಭಾಗವಹಿಸಿದರು. ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಂದು ಮಗುವಿಗೂ ಪ್ರೋತ್ಸಾಹಕ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಘಟಕದ ಮಾಜಿ ಅಧ್ಯಕ್ಷರಾದ ವಿನೋದ್ ಅರ್ಬಿ ಹಾಗೂ ಜೀತೇಶ್ ನಿರೂಪಿಸಿದರು. ಘಟಕದ ಕಾರ್ಯದರ್ಶಿ ರಾಜೇಶ್ ಎಸ್. ಪೂಜಾರಿ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಘಟಕದ ಸಮಸ್ತ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಸಕ್ರಿಯವಾಗಿ ಕೈಜೋಡಿಸಿ ಸಹಕರಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!