Yuvavahini

AUG 29, 2026 8.00 PM IST

ಯುವವಾಹಿನಿ (ರಿ) ಕೊಲ್ಯ ಘಟಕ

ಜನಮಾನಸದಲ್ಲಿ ಅಚ್ಚಳಿಯದೆ ಉಳಿದ ‘ಸಾಂಸ್ಕೃತಿಕ ಸಂಜೆ’

ಕೊಲ್ಯ ಅಗಸ್ಟ್ 29 : ರೋಟರಿ ಸಮುದಾಯ ದಳ, ಕೊಲ್ಯ–ಸೋಮೇಶ್ವರದ ಆಶ್ರಯದಲ್ಲಿ, ರೋಟರಿ ಕ್ಲಬ್ ಮಂಗಳೂರು ಪೂರ್ವ, ಬಿಲ್ಲವ ಸೇವಾ ಸಮಾಜ ಟ್ರಸ್ಟ್, ಯುವವಾಹಿನಿ (ರಿ.) ಕೊಲ್ಯ ಘಟಕ ಹಾಗೂ ಜರ್ನಿ ಥಿಯೇಟರ್ ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ‘ಸಾಂಸ್ಕೃತಿಕ ಸಂಜೆ’ ಕಾರ್ಯಕ್ರಮವು ಆಗಸ್ಟ್ 29ರಂದು ಕೊಲ್ಯ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಸಂಭ್ರಮದಿಂದ ನಡೆಯಿತು.

ಕರ್ನಾಟಕ ರಾಜ್ಯೋತ್ಸವ ಹಾಗೂ ಶಾಂತಲಾ ನಾಟ್ಯ ಪುರಸ್ಕೃತ ನೃತ್ಯಗುರು ಉಳ್ಳಾಲ ಮೋಹನ್ ಕುಮಾರ್ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ಭಾರತೀಯ ನೃತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ಗುಣವನ್ನು ಯುವಕರು ಬೆಳೆಸಿಕೊಳ್ಳಬೇಕು. ರೋಟರಿ ಸಮುದಾಯ ದಳ ಹಾಗೂ ಯುವವಾಹಿನಿ ಸಂಸ್ಥೆಗಳು ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ” ಎಂದರು.

ಬಳಿಕ ಮಂಗಳೂರಿನ ನಾದ ನೃತ್ಯ ಸ್ಕೂಲ್ ಆಫ್ ಡ್ಯಾನ್ಸ್ ಅಂಡ್ ಕಲ್ಚರಲ್ ಟ್ರಸ್ಟ್ನ ಡಾ. ಬ್ರಾಹ್ಮರಿ ಶಿವಪ್ರಕಾಶ್ ಅವರ ನಿರ್ದೇಶನದಲ್ಲಿ ಕುಮಾರಿ ಚಿನ್ಮಯಿ ಕೋಟ್ಯಾನ್ ಅವರಿಂದ ಮನೋಜ್ಞ ಭರತನಾಟ್ಯ ಪ್ರದರ್ಶನ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಮಂಗಳೂರು ಪೂರ್ವದ ಮಾಜಿ ಅಧ್ಯಕ್ಷರಾದ ರೊ. ಆನಂದ ಶೆಟ್ಟಿ, ಕಾರ್ಯದರ್ಶಿ ರೊ. ಪ್ರಮೋದ್ ಪ್ರಭು, ಆರ್‌ಸಿಸಿ ಚೇರ್ಮನ್ ರೊ. ಗೋಪಾಲ ಶೆಟ್ಟಿ, ವೈಸ್ ಚೇರ್ಮನ್ ರೊ. ಜೈ ಕುಮಾರ್, ರೋಟರಿ ಸಮುದಾಯ ದಳ ಕೊಲ್ಯ–ಸೋಮೇಶ್ವರದ ಅಧ್ಯಕ್ಷರಾದ ಸೀತಾರಾಮ ಕರ್ಕೇರ, ಕಾರ್ಯದರ್ಶಿ ಜಯದೇವ್, ಆರ್‌ಸಿಸಿ ಜಿಲ್ಲಾ ಪ್ರತಿನಿಧಿ ಆನಂದ್ ಎಂ. ಹಾಗೂ ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷರಾದ ಜೀವನ್ ಕಾಸಿಂಬೆಟ್ಟು ಉಪಸ್ಥಿತರಿದ್ದರು.

ಅತಿಥಿಗಳ ಪ್ರತಿನಿಧಿಯಾಗಿ ಮಾತನಾಡಿದ ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷರಾದ ಜೀವನ್ ಕಾಸಿಂಬೆಟ್ಟು ಅವರು, “ಯುವವಾಹಿನಿ ಹಾಗೂ ರೋಟರಿ ಸಮುದಾಯ ದಳ ಹಲವು ವರ್ಷಗಳಿಂದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕೊಲ್ಯ ಪರಿಸರದಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿವೆ. ಬಿಲ್ಲವ ಸೇವಾ ಸಮಾಜದ ಆಶ್ರಯದಲ್ಲಿ ನಡೆಯುವ ಇಂತಹ ಕಾರ್ಯಕ್ರಮಗಳಿಗೆ ಸಮಾಜದ ಸರ್ವರೂ ಬೆಂಬಲವಾಗಿ ನಿಲ್ಲಬೇಕು” ಎಂದರು.

ಈ ಸಂದರ್ಭದಲ್ಲಿ ಪ್ರತಿವರ್ಷ ನೀಡಲಾಗುವ ರೋಟರಿ ಸಮುದಾಯ ಪುರಸ್ಕಾರವನ್ನು ಗಣನೀಯ ಸೇವೆ ಸಲ್ಲಿಸಿದ ರಕ್ಷಿತ್ ಜೆ. ಹಾಗೂ ಯುವವಾಹಿನಿ ಸದಸ್ಯರಾದ ಡಾ. ಅನ್ವಿತಾ ಎ. (ಪಿಟಿ) ಅವರಿಗೆ ನೀಡಿ ಗೌರವಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಾಲ್ವರು ವಿದ್ಯಾರ್ಥಿಗಳಿಗೆ ರೋಟರಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಬಳಿಕ ಮಂಗಳೂರಿನ ಜರ್ನಿ ಥಿಯೇಟರ್ ತಂಡದ ವತಿಯಿಂದ ಸುನಿಲ್ ಪಲ್ಲಮಜಲು ಅವರ ನಿರ್ದೇಶನದಲ್ಲಿ ‘ರಾಮಾಂಜನೇಯ ಕಾಳಗ’ ಯಕ್ಷಗಾನ ಪ್ರದರ್ಶನ ನಡೆಯಿತು. ಸುಮಾರು ಎರಡು ಗಂಟೆಗಳ ಕಾಲ ನಡೆದ ಯಕ್ಷಗಾನ ಪ್ರದರ್ಶನವು ಕಲಾಭಿಮಾನಿಗಳ ಮನಸೂರೆಗೊಂಡಿತು. ಯುವವಾಹಿನಿ (ರಿ.) ಕೊಲ್ಯ ಘಟಕದ ಮಾಜಿ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!