ಕಂಕನಾಡಿ : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಆಗಸ್ಟ್ 28ರಂದು ಘಟಕದ ಸಭಾಂಗಣದಲ್ಲಿ ಗುರುಪೂಜೆ ಹಾಗೂ ವರಮಹಾಲಕ್ಷ್ಮಿ ಪೂಜೆಯನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು.

ಘಟಕದ ಸದಸ್ಯರ ಭಜನೆಯೊಂದಿಗೆ ಶಾಸ್ತ್ರೋಕ್ತವಾಗಿ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಈ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರು, ಸರ್ವ ಸದಸ್ಯರು, ಬಂಧು–ಮಿತ್ರರು ಸೇರಿದಂತೆ ಹಲವರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಪೂಜಾ ಕಾರ್ಯಕ್ರಮದ ಬಳಿಕ ಎಲ್ಲರಿಗೂ ಅನ್ನಸಂತರ್ಪಣೆ ನೆರವೇರಿಸಲಾಯಿತು.


