ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಆಗಸ್ಟ್ 28ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಗುರುಪೂಜೆ ಹಾಗೂ ಬ್ರಹ್ಮ ಬೈದರ್ಕಳ ದೇವರಿಗೆ ಹೂವಿನ ಪೂಜೆಯನ್ನು ಭಕ್ತಿಭಾವದಿಂದ ಸಮರ್ಪಿಸಲಾಯಿತು.

ಗುರುಜಯಂತಿಯ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಭಾಗವಹಿಸಿ ಗುರುಗಳ ಹಾಗೂ ದೈವದ ಆಶೀರ್ವಾದ ಪಡೆದರು. ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು.







