ಉಡುಪಿ ಅಗಸ್ಟ್ 28 : ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ ಕಾರ್ಯಕ್ರಮವು ಆಗಸ್ಟ್ 28ರಂದು ಶುಕ್ರವಾರ ಘಟಕದ ಸಭಾಂಗಣದಲ್ಲಿ ಭಕ್ತಿಭಾವದಿಂದ ನಡೆಯಿತು.

ಗುರುಜಯಂತಿಯ ಅಂಗವಾಗಿ ಬೆಳಿಗ್ಗೆ 8 ಗಂಟೆಯಿಂದ ನಾರಾಯಣ ಗುರುತತ್ವ ಪ್ರಚಾರ ನಿರ್ದೇಶಕರಾದ ಶಾರದಾ ಉಮೇಶ್ ಅವರ ಮುತುವರ್ಜಿಯಲ್ಲಿ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಬಳಿಕ ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಸುವರ್ಣ ಅವರು ಗುರುಪೂಜೆ ನೆರವೇರಿಸಿ, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿದರು. ನಂತರ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಭಜನಾ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲಾ ಮಹಿಳಾ ಸದಸ್ಯರಿಗೆ ಪ್ರಸಾದ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಎಲ್ಲರಿಗೂ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಅಧ್ಯಕ್ಷರು ಮತ್ತು ಸದಸ್ಯರಿಗೆ ಘಟಕದ ಅಧ್ಯಕ್ಷರಾದ ವಿನೋದ್ ಮಂಚಿ ಕೃತಜ್ಞತೆ ಸಲ್ಲಿಸಿದರು. ಘಟಕದ ಕಾರ್ಯದರ್ಶಿ ವಿಕ್ಷಿತ್ ಧನ್ಯವಾದ ಸಮರ್ಪಿಸಿದರು. ಬಳಿಕ ಲಘು ಉಪಹಾರ ಹಾಗೂ ಪ್ರಸಾದ ವಿತರಿಸುವ ಮೂಲಕ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು.







