Yuvavahini

AUG 27, 2026 2.00 PM IST

ಯುವವಾಹಿನಿ (ರಿ) ಗ್ರಾಮಚಾವಡಿ ಜೋಣಾಜೆ

ರಕ್ಷಾ ಬಂಧನ ಹಾಗೂ ಅಭಿನಂದನಾ ಕಾರ್ಯಕ್ರಮ

ಕೊಣಾಜೆ ಅಗಸ್ಟ್ 27 : ಯುವವಾಹಿನಿ (ರಿ.) ಗ್ರಾಮಚಾವಡಿ–ಕೊಣಾಜೆ ಘಟಕದ ವತಿಯಿಂದ ಆಗಸ್ಟ್ 27ರಂದು ಸಂಜೆ 6.30ಕ್ಕೆ ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ‘ರಕ್ಷಾ ಬಂಧನ’ ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ‘ಮಾಧವ ಕೀರ್ತನೋತ್ಸವ–2026’ ಅಂತರ್ ಘಟಕ ಭಜನಾ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದ ಘಟಕದ ಭಜನಾ ತಂಡದ ಸದಸ್ಯರನ್ನು ಅಭಿನಂದಿಸಲಾಯಿತು

ಘಟಕದ ಅಧ್ಯಕ್ಷರಾದ ಮುರಳೀಧರ ಕೊಣಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತೃ ಸಂಘದ ಅಧ್ಯಕ್ಷರಾದ ವಿಜೇತ್ ಪಜೀರು ಹಾಗೂ ಮಾತೃ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಬಬಿತಾ ಬಾಣಬೆಟ್ಟು ಉಪಸ್ಥಿತರಿದ್ದರು. ರಕ್ಷಾ ಬಂಧನದ ಮಹತ್ವದ ಕುರಿತು ಬೌದ್ಧಿಕ ನೀಡಲು ಪುಷ್ಪರಾಜ್ ಕೆರೆಬೈಲ್ ಉಪಸ್ಥಿತರಿದ್ದರು.

ಅಧ್ಯಕ್ಷರಾದ ಮುರಳೀಧರ ಕೊಣಾಜೆ ಅವರು ಮಾತನಾಡಿ ರಕ್ಷಾ ಬಂಧನದ ಮಹತ್ವವನ್ನು ವಿವರಿಸಿದರು. ಬಳಿಕ ಪುಷ್ಪರಾಜ್ ಕೆರೆಬೈಲ್ ಅವರು ರಕ್ಷಾ ಬಂಧನದ ಹಿನ್ನೆಲೆ, ಅದರ ಸಾಮಾಜಿಕ ಹಾಗೂ ಮಾನವೀಯ ಮೌಲ್ಯಗಳ ಕುರಿತು ನೀಡಿದ ಅರ್ಥಪೂರ್ಣ ಬೌದ್ಧಿಕವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ನಂತರ ಸದಸ್ಯರು ಪರಸ್ಪರ ರಕ್ಷೆ ಕಟ್ಟಿಕೊಳ್ಳುವ ಮೂಲಕ ಪ್ರೀತಿ, ವಿಶ್ವಾಸ ಹಾಗೂ ಸಹೋದರತ್ವದ ಭಾವನೆಗಳನ್ನು ಬೆಸೆದುಕೊಂಡರು. ಕಾರ್ಯಕ್ರಮವು ಸದಸ್ಯರ ನಡುವೆ ಆತ್ಮೀಯತೆ ಹಾಗೂ ಸಂಘಟನಾ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿತು.

ಘಟಕದ ಸಂಘಟನಾ ಕಾರ್ಯದರ್ಶಿ ಪ್ರವೀಣ್ ಇನೋಳಿ ಕಾರ್ಯಕ್ರಮ ನಿರೂಪಿಸಿದರು. ಒಂದನೇ ಉಪಾಧ್ಯಕ್ಷರಾದ ಅಜಿತ್ ಪಜೀರ್ ಧನ್ಯವಾದ ಸಮರ್ಪಿಸಿದರು. ಬಳಿಕ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!