Yuvavahini

AUG 29, 2026 4.00 PM IST

ಯುವವಾಹಿನಿ ಶಕ್ತಿನಗರ ಘಟಕ

ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿ ಆಚರಣೆ

ಶಕ್ತಿನಗರ ಅಗಸ್ಟ್ 29 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿಯ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಹಾಗೂ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಸಹಯೋಗದಲ್ಲಿ ಆಗಸ್ಟ್ 29ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜನ್ಮ ಜಯಂತಿ ಮಹೋತ್ಸವ ಹಾಗೂ ಬೃಹತ್ ಶೋಭಾಯಾತ್ರೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗಣಹೋಮ ನೆರವೇರಿಸಿ ಮಂದಿರವನ್ನು ಶುದ್ಧೀಕರಿಸಲಾಯಿತು. ಬಳಿಕ ಗುರುಗಳ ಪಂಚಲೋಹದ ಮೂರ್ತಿಗೆ ವಿಶೇಷ ಅಭಿಷೇಕ ಹಾಗೂ ಗುರುಪೂಜೆ ನೆರವೇರಿಸಿ, ಪುಷ್ಪಾಲಂಕಾರ ಮಾಡಲಾಯಿತು.

ನಂತರ ಗುರುಗಳ ಮೂರ್ತಿಯನ್ನು ಮಂದಿರದ ಸದಸ್ಯೆ ಲೀಲಾವತಿ ಕಕ್ಕೆಬೆಟ್ಟು ಅವರ ಮನೆಯಲ್ಲಿ ಪ್ರತಿಷ್ಠಾಪಿಸಿ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಹಾಗೂ ಮಹಾಕಾಳಿ ಭಜನಾ ಮಂಡಳಿಯ ಭಜನಾ ತಂಡದಿಂದ ಭಜನೆ, ಸತ್ಸಂಗ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಗುರುಪೂಜೆಯ ಬಳಿಕ ಗುರುಗಳ ಮೂರ್ತಿಯನ್ನು ಭಕ್ತಿಭಾವದಿಂದ ಶೋಭಾಯಾತ್ರೆಗೆ ಕೊಂಡೊಯ್ಯಲಾಯಿತು.

ಚೆಂಡೆ, ತಾಳ ಹಾಗೂ ಮಕ್ಕಳ ಕುಣಿತ ಭಜನೆಯೊಂದಿಗೆ ಸಾಗಿದ ಬೃಹತ್ ಶೋಭಾಯಾತ್ರೆ ಕಕ್ಕೆಬೆಟ್ಟುವಿನಿಂದ ಮಹಾಕಾಳಿ, ಮುತ್ತಪ್ಪ ಗುಡಿ, ರಾಮಾಶಕ್ತಿ ಮಿಷನ್, ನಾಲ್ಯಪದವು ಶ್ರೀಕೃಷ್ಣ ಭಜನಾ ಮಂದಿರ ರಸ್ತೆಯ ಮೂಲಕ ಕುಂಟಲ್ಪಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ತಲುಪಿತು. ಜಾತಿ, ಮತ, ಧರ್ಮದ ಭೇದಭಾವಗಳನ್ನು ಮರೆತು ನೂರಾರು ಭಕ್ತರು ಶೋಭಾಯಾತ್ರೆಯಲ್ಲಿ ಭಾಗವಹಿಸಿ, “ಒಂದೇ ಜಾತಿ, ಒಂದೇ ಮತ” ಎಂಬ ಗುರು ಸಂದೇಶವನ್ನು ಘೋಷಣೆಗಳ ಮೂಲಕ ಸಾರಿದರು.

ಶೋಭಾಯಾತ್ರೆಯ ಬಳಿಕ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಜನಾ ಸೇವೆ ಸಲ್ಲಿಸಿದ ಶ್ರೀ ಚಂಡ ಚಾಮುಂಡೇಶ್ವರಿ ಭಜನಾ ಮಂಡಳಿ, ಬೊಲ್ಪುಗುಡ್ಡೆ ಇವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಬಳಿಕ ಗುರುಪೂಜೆ ಹಾಗೂ ಮಹಾಪೂಜೆ ನೆರವೇರಿಸಿ ಭಕ್ತರು ಗುರುಗಳ ಕೃಪೆಗೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ನಿಕಟಪೂರ್ವ ಕಾರ್ಪೊರೇಟರ್ ಕಿಶೋರ್ ಕೊಟ್ಟಾರಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಕೇಂದ್ರ ಸಮಿತಿಯ ಸಲಹೆಗಾರರು, ಮಾಜಿ ಅಧ್ಯಕ್ಷ ಹರೀಶ್ ಕೆ. ಪೂಜಾರಿ, ಕೇಂದ್ರ ಸಮಿತಿಯ ಪದಾಧಿಕಾರಿಗಳಾದ ಹರೀಶ್ ಪೂಜಾರಿ ಕೊಣಾಜೆ, ಹರೀಶ್ ಪಚ್ಚನಾಡಿ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿಯ ಅಧ್ಯಕ್ಷ ತುಕಾರಾಂ ಪೂಜಾರಿ ಹಾಗೂ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಅಧ್ಯಕ್ಷ ತೇಜಸ್ ವಿ. ಪೂಜಾರಿ ಸೇರಿದಂತೆ ಟ್ರಸ್ಟ್ ಹಾಗೂ ಘಟಕದ ಪದಾಧಿಕಾರಿಗಳು, ಸದಸ್ಯರು ಮತ್ತು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಸಮಾರೋಪದಲ್ಲಿ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಗುರುಗಳ ಪ್ರಸಾದ ವಿತರಿಸಿ, ಅನ್ನಸಂತರ್ಪಣೆ ನೆರವೇರಿಸಲಾಯಿತು. ಭಕ್ತಿಭಾವ, ಸೌಹಾರ್ದತೆ ಮತ್ತು ಸಾಮಾಜಿಕ ಸಾಮರಸ್ಯದ ಸಂದೇಶದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!