Yuvavahini

SEP 01, 2026 8.30 PM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ 76ನೇ ಮಾಲಿಕೆ

ನಾರಾಯಣಗುರುಗಳು ಮನುಕುಲದ ದಿವ್ಯಜ್ಯೋತಿಯಾದರು : ರೇಣುಕಾ ಕಣಿಯೂರು

ಸಜಿಪ, ಸೆಪ್ಟೆಂಬರ್ 1 : ಬ್ರಹ್ಮಶ್ರೀ ನಾರಾಯಣಗುರುಗಳು ಅಜ್ಞಾನ, ಅಸಮಾನತೆ ಹಾಗೂ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿ, ಜ್ಞಾನ, ಸಮಾನತೆ ಮತ್ತು ಮಾನವೀಯತೆಯ ಬೆಳಕನ್ನು ಸಮಾಜಕ್ಕೆ ನೀಡಿದ ಮನುಕುಲದ ದಿವ್ಯಜ್ಯೋತಿಯಾಗಿದ್ದಾರೆ ಎಂದು ಬರಹಗಾರ್ತಿ ಹಾಗೂ ನಿರೂಪಕಿ ರೇಣುಕಾ ಕಣಿಯೂರು ಹೇಳಿದರು.

ಸಜಿಪ ದೇರಾಜೆಯ ಗಾಯತ್ರಿ ದಿನೇಶ್ ಪೂಜಾರಿ ಅವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ‘ಗುರುತತ್ವವಾಹಿನಿ’ 76ನೇ ಮಾಲಿಕೆಯಲ್ಲಿ ಗುರುಸಂದೇಶ ನೀಡಿದ ಅವರು, ನಾರಾಯಣಗುರುಗಳು ಶಿಕ್ಷಣವೇ ಸಾಮಾಜಿಕ ಪ್ರಗತಿಯ ಪ್ರಮುಖ ಸಾಧನವೆಂದು ಸಾರಿದ್ದರು. ಜ್ಞಾನ, ಸ್ವಚ್ಛತೆ, ಸಂಘಟನೆ ಹಾಗೂ ಸ್ವಾಭಿಮಾನದ ಮೂಲಕ ಸಮಾಜದ ಪ್ರತಿಯೊಬ್ಬರೂ ಅಭಿವೃದ್ಧಿ ಹೊಂದಬೇಕು ಎಂಬ ಸಂದೇಶವನ್ನು ಅವರು ನೀಡಿದ್ದರು. ಯಾವುದೇ ಭೇದಭಾವವಿಲ್ಲದೆ ಪ್ರತಿಯೊಬ್ಬ ಮನುಷ್ಯನಿಗೂ ಗೌರವಯುತ ಬದುಕಿನ ಹಕ್ಕಿದೆ ಎಂಬ ಮಾನವೀಯ ತತ್ವವನ್ನು ತಮ್ಮ ಜೀವನ ಹಾಗೂ ಕಾರ್ಯಗಳ ಮೂಲಕ ಪ್ರತಿಪಾದಿಸಿದ್ದರು ಎಂದರು.

ಅಜ್ಞಾನವೆಂಬ ಕತ್ತಲೆಯನ್ನು ದೂರ ಮಾಡಿ ಜ್ಞಾನ, ಸಮಾನತೆ ಹಾಗೂ ಮಾನವೀಯತೆಯ ಬೆಳಕನ್ನು ಸಮಾಜದಲ್ಲಿ ಹರಡಿದ ನಾರಾಯಣಗುರುಗಳ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ಬದಲಾವಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು. ‘ಸಂಘಟನೆಯೇ ಶಕ್ತಿ ಹಾಗೂ ಜ್ಞಾನವೇ ಬೆಳಕು’ ಎಂಬ ಆಶಯದೊಂದಿಗೆ ನಾರಾಯಣಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಸಂಘಟಿತರಾಗಿ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರೇಣುಕಾ ಕಣಿಯೂರು ಕರೆ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್ ರಾಜ್ ಪೂಂಜರೆಕೋಡಿ, ಉಪಾಧ್ಯಕ್ಷರಾದ ನಿಕೇಶ್ ಕೋಟ್ಯಾನ್, ಹರೀಶ್ ಅಜೆಕಲ, ನಿರ್ದೇಶಕರಾದ ಶೈಲೇಶ್ ಕುಚ್ಚಿಗುಡ್ಡೆ, ಸುನೀತಾ ಮಾರ್ನಬೈಲು, ನವೀನ್ ಪೂಜಾರಿ ಕಾರಜೆ, ಸದಸ್ಯರಾದ ಪ್ರಶಾಂತ್ ಏರಮಲೆ, ಯಶೋಧರ ಕಡಂಬಳಿಕೆ, ಯತೀಶ್ ಬೊಳ್ಳಾಯಿ, ನಾರಾಯಣ ಪಲ್ಲಿಕಂಡ, ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ., ದಿನೇಶ್ ಸುವರ್ಣ, ನಾಗೇಶ್ ಪೊನ್ನೋಡಿ, ಶಿವಾನಂದ ಎಂ., ರಾಜೇಶ್ ಸುವರ್ಣ, ಅರುಣ್ ಮಹಾಕಾಳಿಬೆಟ್ಟು ಹಾಗೂ ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದ ಸದಸ್ಯರು, ಶ್ರೀರಾಮ ಭಜನಾ ಮಂಡಳಿ ಕೋಟೆಕಣಿ ಸದಸ್ಯರು ಮತ್ತು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಭಜನಾ ಸಂಕೀರ್ತನೆಯಲ್ಲಿ ಕಾರ್ತಿಕ್ ದೇರಾಜೆ, ಸಾತ್ವಿಕ್ ದೇರಾಜೆ, ಸುಜನ್ ಕೋಟೆಕಣಿ, ರಾಮ್ ಪ್ರಸಾದ್ ಕೋಟೆಕಣಿ ಹಾಗೂ ಲಿಖಿತ್ ಕೋಟೆಕಣಿ ಸಹಕರಿಸಿದರು. ಆತಿಥ್ಯ ವಹಿಸಿದ್ದ ದಿನೇಶ್ ಪೂಜಾರಿ ಅವರು ಆಗಮಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಧನ್ಯವಾದ ಅರ್ಪಿಸಿದರು. ಘಟಕದ ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!