Yuvavahini

SEP 06, 2026 1.00 PM IST

ಯುವವಾಹಿನಿ ಮೂಡುಬಿದಿರೆ ಘಟಕದಿಂದ

ಮೂಡುಮಾರ್ನಾಡಿನ ಅಶಕ್ತ ಕುಟುಂಬಕ್ಕೆ ರೂ. 12 ಲಕ್ಷ ವೆಚ್ಚದ ನೂತನ ಮನೆ ಹಸ್ತಾಂತರ

ಯುವವಾಹಿನಿ(ರಿ.)ಮೂಡುಬಿದಿರೆ ಘಟಕವು ದಾನಿಗಳ ಸಹಕಾರದೊಂದಿಗೆ ಮೂಡುಮಾರ್ನಾಡ್‌ನಲ್ಲಿ ಅಶಕ್ತ ಕುಟುಂಬಕ್ಕಾಗಿ ಸುಮಾರು ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆಯನ್ನು ಸೆ. 6ರಂದು ಸುಮಿತ್ರ ವಿಶ್ವನಾಥ್ ದಂಪತಿಗೆ ಹಸ್ತಾಂತರಿಸಿತು


ದೀಪ ಬೆಳಗಿಸುವ ಮೂಲಕ ಮನೆ ಹಸ್ತಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಶಕ್ತ ಕುಟುಂಬವೊಂದಕ್ಕೆ ನೂತನ ಮನೆ ನಿರ್ಮಿಸಿಕೊಟ್ಟು ಸ್ವಾಭಿಮಾನದ ಬದುಕಿಗೆ ದಾರಿ ಮಾಡಿಕೊಡುವ ಮೂಲಕ ಯುವವಾಹಿನಿ ಕೈಗೊಂಡಿರುವ ಸಮಾಜಮುಖಿ ಹಾಗೂ ರಚನಾತ್ಮಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಕರ್ನಾಟಕ ಸರ್ಕಾರದ ಹೈಕೋರ್ಟ್ ಹೆಚ್ಚುವರಿ ಅಡ್ವೊಕೇಟ್ ಜನರಲ್ ಇರುವೈಲು ತಾರಾನಾಥ್ ಪೂಜಾರಿ ಹೇಳಿದರು.

ಸಮಾಜದ ಅಗತ್ಯವಿರುವ ಕುಟುಂಬಗಳ ಕಷ್ಟಗಳಿಗೆ ಸ್ಪಂದಿಸಿ ಅವರ ಬದುಕಿನಲ್ಲಿ ಭರವಸೆ ಮೂಡಿಸುವ ಸೇವಾ ಕಾರ್ಯಗಳು ಸಂಘಟನೆಯ ಮೂಲ ಆಶಯವನ್ನು ಪ್ರತಿಬಿಂಬಿಸುತ್ತವೆ. ಮನೆ ನಿರ್ಮಾಣದಂತಹ ಶಾಶ್ವತ ನೆರವು ಒಂದು ಕುಟುಂಬಕ್ಕೆ ನೆಮ್ಮದಿ, ಭದ್ರತೆ ಹಾಗೂ ಸ್ವಾಭಿಮಾನದ ಬದುಕನ್ನು ಒದಗಿಸುತ್ತದೆ. ಯುವವಾಹಿನಿಯ ಇಂತಹ ಸಾಮಾಜಿಕ ಹಾಗೂ ರಚನಾತ್ಮಕ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಮಾತನಾಡಿ, ಅಶಕ್ತ ಕುಟುಂಬವೊಂದಕ್ಕೆ ನೂತನ ಮನೆ ನಿರ್ಮಿಸಿಕೊಟ್ಟು ಅವರಿಗೆ ಸ್ವಾಭಿಮಾನದ ಬದುಕು ಕಲ್ಪಿಸಿರುವ ಯುವವಾಹಿನಿಯ ಸಮಾಜಮುಖಿ ಕಾರ್ಯ ಅರ್ಥಪೂರ್ಣವಾಗಿದೆ. ಮಾನವ ಜನ್ಮದ ಸಾರ್ಥಕತೆಗೆ ಇಂತಹ ಸೇವಾ ಕಾರ್ಯಗಳು ಮಾದರಿಯಾಗಿವೆ ಎಂದರು.

ನೂತನ ಮನೆಯ ಕೀ ಹಸ್ತಾಂತರಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಹಾಗೂ ಅಶಕ್ತ ಕುಟುಂಬಗಳಿಗೆ ನೆರವಾಗುವ ಮೂಲಕ ಅವರ ಬದುಕಿನಲ್ಲಿ ಭರವಸೆ ಮೂಡಿಸುವುದು ಅತ್ಯಂತ ಮಹತ್ವದ್ದಾಗಿದೆ. ಕೇವಲ ತಾತ್ಕಾಲಿಕ ಸಹಾಯ ನೀಡುವುದಕ್ಕಿಂತ ಒಂದು ಕುಟುಂಬ ಸ್ವಾಭಿಮಾನದಿಂದ ಬದುಕಲು ಶಾಶ್ವತ ನೆಲೆ ಕಲ್ಪಿಸುವುದು ನಿಜವಾದ ಮಾನವೀಯ ಸೇವೆಯಾಗಿದೆ ಎಂದು ಹೇಳಿದರು.

ಯುವವಾಹಿನಿ ಮೂಡುಬಿದಿರೆ ಘಟಕ ಕೈಗೊಂಡಿರುವ ಮನೆ ನಿರ್ಮಾಣ ಕಾರ್ಯವು ಸಮಾಜಕ್ಕೆ ಹಾಗೂ ಯುವಜನತೆಗೆ ಪ್ರೇರಣೆಯಾಗಿದ್ದು, ಇಂತಹ ರಚನಾತ್ಮಕ ಮತ್ತು ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ಡಾ. ಮೋಹನ್ ಆಳ್ವ ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ವಹಿಸಿದ್ದರು. ಮನೆ ನಿರ್ಮಾಣದ ನೇತೃತ್ವ ವಹಿಸಿದ್ದ ಘಟಕದ ಮಾಜಿ ಅಧ್ಯಕ್ಷ ಶಂಕರ್ ಎ. ಕೋಟ್ಯಾನ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು, ಶ್ರೀಕ್ಷೇತ್ರ ಹೋಯ್ಪಾಲಬೆಟ್ಟದ ಅನುವಂಶಿಕ ಆಡಳಿತ ಮೊಕ್ತೇಸರ ರಾಜೇಶ್ ಬಲ್ಲಾಳ್, ಮೂಡುಮಾರ್ನಾಡ್ ವೇದಮೂರ್ತಿ ಅನಂತ ಪದ್ಮನಾಭ ಆಸ್ರಣ್ಣ, ಮೂಡುಬಿದಿರೆ ಭೂನ್ಯಾಯ ಮಂಡಳಿ ಸದಸ್ಯ ರಮೇಶ್ ಶೆಟ್ಟಿ, ಪಾಪಣ್ಣ ಪೂಜಾರಿ ಗುಮಡಬೆಟ್ಟು ಹಾಗೂ ಮೂಡುಬಿದಿರೆ ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್ ಸೇರಿದಂತೆ ಹಲವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಯುವವಾಹಿನಿ ಮೂಡುಬಿದಿರೆ ಘಟಕದ ಸಮಾಜ ಸೇವಾ ನಿರ್ದೇಶಕ ಉಮೇಶ್ ಕೋಟ್ಯಾನ್, ಕಾರ್ಯದರ್ಶಿ ಮೇಘನಾ, ಕೋಶಾಧಿಕಾರಿ ಜಯಶೀಲಾ ಪೂಜಾರಿ ಹಾಗೂ ಸುಮಿತ್ರಾ ವಿಶ್ವನಾಥ ಪೂಜಾರಿ ಉಪಸ್ಥಿತರಿದ್ದರು.

ಪ್ರಾರ್ಥನೆಯನ್ನು ಸುನೀಕ್ಷಾ ಮತ್ತು ಗಾನವಿ ನೆರವೇರಿಸಿದರು. ಘಟಕದ ಮಾಜಿ ಅಧ್ಯಕ್ಷ ಜಗದೀಶ್ಚಂದ್ರ ಡಿ.ಕೆ. ಪ್ರಸ್ತಾವನೆ ಮಂಡಿಸಿ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಶಂಕರ್ ಎ. ಕೋಟ್ಯಾನ್ ಮನೆ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಪರಿಚಯಿಸಿ ಗೌರವಿಸಿದರು. ರಾಮ್ ಕುಮಾರ್ ಮೂಡುಮಾರ್ನಾಡ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!