Yuvavahini

SEP 08, 2026 9.00 PM IST

ಯುವವಾಹಿನಿ ಮಾಣಿ ಘಟಕದಿಂದ ಮನೆ ಮನೆಗೆ ಗುರುತತ್ವ ಸಂದೇಶ

ಸಂಘಟನೆ ಗಟ್ಟಿಯಾದರೆ ಸಮಾಜ ಬಲಿಷ್ಠ: ನಾರಾಯಣ ಗುರುಗಳ ತತ್ವವೇ ನಮ್ಮ ದಾರಿ – ರೇಣುಕಾ ಕಣಿಯೂರು

ಮಾಣಿ ಸೆಪ್ಟೆಂಬರ್ 8 : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ಸೆಪ್ಟೆಂಬರ್ 8ರಂದು ಪೆರಾಜೆ ಗ್ರಾಮದ ರೂಪಶ್ರೀ ದಿನೇಶ್ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವು ಭಜನಾ ಸಂಕೀರ್ತನೆಯೊಂದಿಗೆ ಭಕ್ತಿಭಾವದಿಂದ ಆರಂಭಗೊಂಡಿತು. ಭಜನಾ ಸಂಕೀರ್ತನೆಯ ಜವಾಬ್ದಾರಿಯನ್ನು ಜನಾರ್ಧನ ಪೂಜಾರಿ ಕೊಡಂಗೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ರೇಣುಕಾ ಕಣಿಯೂರು, ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಸಂದೇಶವು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರದೆ, ಇಡೀ ಸಮಾಜದ ಉನ್ನತಿ ಹಾಗೂ ಮಾನವೀಯ ಬದುಕಿಗೆ ದಾರಿದೀಪವಾಗಿದೆ ಎಂದು ಹೇಳಿದರು.

ಕೇರಳದಲ್ಲಿ ಜನಿಸಿದ ನಾರಾಯಣ ಗುರುಗಳು ಅಂದಿನ ಸಾಮಾಜಿಕ ಅಸಮಾನತೆ, ಅಜ್ಞಾನ, ಮೂಢನಂಬಿಕೆ ಹಾಗೂ ಶೋಷಣೆಯ ವಿರುದ್ಧ ಧ್ವನಿ ಎತ್ತಿ, ಶಿಕ್ಷಣವೇ ಸಮಾಜದ ಪ್ರಗತಿಯ ಮೂಲ ಹಾಗೂ ಜ್ಞಾನವೇ ಮನುಷ್ಯನ ನಿಜವಾದ ಶಕ್ತಿ ಎಂಬ ಸಂದೇಶವನ್ನು ಸಾರಿದರು ಎಂದರು. ನಾರಾಯಣ ಗುರುಗಳು ದೇವಸ್ಥಾನಗಳನ್ನು ನಿರ್ಮಿಸಿದ್ದು ಕೇವಲ ಪೂಜಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ ಮಾತ್ರವಲ್ಲ. ಜನರನ್ನು ಒಂದೆಡೆ ಸೇರಿಸಿ, ಪರಸ್ಪರ ಅರಿತುಕೊಂಡು ಬಾಳುವಂತೆ ಮಾಡುವುದು, ಸಂಘಟನೆಯನ್ನು ಬಲಪಡಿಸುವುದು ಹಾಗೂ ಸಂಘಟನೆಯ ಮೂಲಕ ಸಮಾಜದ ಅಭಿವೃದ್ಧಿಗೆ ದಾರಿ ಮಾಡಿಕೊಡುವುದು ಅವರ ದೂರದೃಷ್ಟಿಯಾಗಿತ್ತು. ಸಂಘಟನೆ ಗಟ್ಟಿಯಾದಾಗ ಮಾತ್ರ ಸಮಾಜದ ಸಮಸ್ಯೆಗಳನ್ನು ಒಟ್ಟಾಗಿ ಎದುರಿಸಲು ಸಾಧ್ಯ. ಒಬ್ಬರ ನೋವನ್ನು ಮತ್ತೊಬ್ಬರು ಅರ್ಥಮಾಡಿಕೊಂಡು, ಪರಸ್ಪರ ಸಹಕಾರ ಹಾಗೂ ಸಹೋದರತ್ವದಿಂದ ಬದುಕಲು ಸಾಧ್ಯ ಎಂದು ಅವರು ಹೇಳಿದರು.

“ನಾರಾಯಣ ಗುರುಗಳು ನಮಗೆ ದೇವಸ್ಥಾನಗಳನ್ನು ಮಾತ್ರ ನೀಡಲಿಲ್ಲ; ದೇವಸ್ಥಾನದ ಮೂಲಕ ಒಗ್ಗಟ್ಟು, ಒಗ್ಗಟ್ಟಿನ ಮೂಲಕ ಸಂಘಟನೆ, ಸಂಘಟನೆಯ ಮೂಲಕ ಸಮಾಜದ ಉನ್ನತಿಯ ದಾರಿಯನ್ನು ತೋರಿಸಿದರು. ಆ ದಾರಿಯಲ್ಲಿ ಸಾಗುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ” ಎಂದು ರೇಣುಕಾ ಕಣಿಯೂರು ಅಭಿಪ್ರಾಯಪಟ್ಟರು.

ಯುವವಾಹಿನಿ (ರಿ.) ಮಾಣಿ ಘಟಕವು ನಾರಾಯಣ ಗುರುಗಳ ಮಹತ್ತರ ಸಂದೇಶವನ್ನು ಮನೆಮನೆಗೆ ತಲುಪಿಸುವುದು, ಯುವಜನರನ್ನು ಸಂಘಟಿಸುವುದು, ಶಿಕ್ಷಣ ಹಾಗೂ ಸಾಮಾಜಿಕ ಜಾಗೃತಿಗೆ ಪ್ರೋತ್ಸಾಹ ನೀಡುವುದು ಮತ್ತು ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ ಕೊಡಾಜೆ ವಹಿಸಿದ್ದರು. ಅವರು ಆಗಮಿಸಿದ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಾರಾಯಣ ಗುರುತತ್ವ ನಿರ್ದೇಶಕ ಶ್ರೀಧರ ಪೂಜಾರಿ ಮುಜಲ ವಂದನಾರ್ಪಣೆ ನೆರವೇರಿಸಿದರು. ಘಟಕದ ಕೋಶಾಧಿಕಾರಿ ಡಾ. ತ್ರಿವೇಣಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರು, ಕಾರ್ಯದರ್ಶಿ, ನಿರ್ದೇಶಕರು, ಸದಸ್ಯರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದು, “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮಕ್ಕೆ ಸಹಕಾರ ಮತ್ತು ಬೆಂಬಲ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!