Yuvavahini

SEP 08, 2026 8.00 PM IST

ಯುವವಾಹಿನಿ ಮಂಗಳೂರು ಘಟಕದಿಂದ ಶಿಕ್ಷಕರ ದಿನಾಚರಣೆ

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು; ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ : ಲತಾಕಿಶೋರ್ ಕೆ. ಬಿಜೈ

ಮಂಗಳೂರು ಸೆ 08 : ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿದ್ದು, ಭವಿಷ್ಯದ ಭಾರತವನ್ನು ನಿರ್ಮಿಸುವ ಜವಾಬ್ದಾರಿ ಅವರ ಮೇಲಿದೆ. ಮಕ್ಕಳಲ್ಲಿ ಉತ್ತಮ ಗುಣ, ಮೌಲ್ಯ ಹಾಗೂ ಜವಾಬ್ದಾರಿಯುತ ನಾಗರಿಕ ಪ್ರಜ್ಞೆಯನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ತರವಾದದ್ದು ಎಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯೆ ಹಾಗೂ ಶಿಕ್ಷಕಿ ಲತಾಕಿಶೋರ್ ಕೆ. ಬಿಜೈ ಹೇಳಿದರು.
ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸೆಪ್ಟೆಂಬರ್ 8ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಾಹಿತಿ ನೀಡಿದ ಅವರು, ಶಿಕ್ಷಕರ ದಿನಾಚರಣೆಯ ಹಿನ್ನೆಲೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನ ಮತ್ತು ಗುರು–ಶಿಷ್ಯರ ಬಾಂಧವ್ಯದ ಕುರಿತು ಮಾತನಾಡಿದರು.


ಭಾರತದ ಮಾಜಿ ರಾಷ್ಟ್ರಪತಿ, ತತ್ವಜ್ಞಾನಿ ಹಾಗೂ ಶಿಕ್ಷಣತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ದೇಶಾದ್ಯಂತ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. 1888ರ ಸೆಪ್ಟೆಂಬರ್ 5ರಂದು ತಮಿಳುನಾಡಿನ ತಿರುತ್ತಣಿಯಲ್ಲಿ ಜನಿಸಿದ ಅವರು, ಕುಟುಂಬದ ಆರ್ಥಿಕ ಸಂಕಷ್ಟದ ನಡುವೆಯೂ ವಿದ್ಯಾರ್ಥಿವೇತನದ ನೆರವಿನಿಂದ ಶಿಕ್ಷಣ ಮುಂದುವರಿಸಿ ತತ್ವಶಾಸ್ತ್ರದಲ್ಲಿ ಉನ್ನತ ಶಿಕ್ಷಣ ಪಡೆದರು. ಮೈಸೂರು ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅವರು, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿಯೂ ಬೋಧಿಸಿದರು. ಭಾರತದ ಮೊದಲ ಉಪರಾಷ್ಟ್ರಪತಿಯಾಗಿ ಹಾಗೂ 1962ರಿಂದ 1967ರವರೆಗೆ ಭಾರತದ ಎರಡನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು ಎಂದು ಅವರು ವಿವರಿಸಿದರು.
ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಗುರುಗಳನ್ನು ಗೌರವ ಹಾಗೂ ಶಿಸ್ತಿನಿಂದ ಕಾಣುತ್ತಿದ್ದರು. ಅಂದಿನ ಶಿಕ್ಷಣ ಪದ್ಧತಿ ಗುರುಕೇಂದ್ರಿತವಾಗಿದ್ದು, ಶಿಕ್ಷಕರು ಬೋಧಿಸಿದ ವಿಷಯಗಳನ್ನು ವಿದ್ಯಾರ್ಥಿಗಳು ಆಲಿಸಿ ಕಲಿಯುತ್ತಿದ್ದರು. ಆದರೆ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರು ಕೇವಲ ಬೋಧಕರಾಗಿರದೆ, ವಿದ್ಯಾರ್ಥಿಗಳ ಕಲಿಕೆಗೆ ಮಾರ್ಗದರ್ಶಕರಾಗಿದ್ದಾರೆ. ಚರ್ಚೆ, ಪ್ರಾಜೆಕ್ಟ್, ಸ್ವಯಂ ಕಲಿಕೆ ಹಾಗೂ ಡಿಜಿಟಲ್ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳು ಜ್ಞಾನವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಸ್ಮಾರ್ಟ್ ಕ್ಲಾಸ್, ಇಂಟರ್ನೆಟ್ ಹಾಗೂ ವಿವಿಧ ಡಿಜಿಟಲ್ ವೇದಿಕೆಗಳು ಕಲಿಕೆಗೆ ಹೊಸ ಆಯಾಮವನ್ನು ನೀಡಿವೆ ಎಂದು ಅವರು ಹೇಳಿದರು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಾಹಿತಿ ನೀಡಿದ ಲತಾಕಿಶೋರ್ ಕೆ. ಬಿಜೈ ಅವರನ್ನು ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕಿ ಸವಿತಾ ಕೋಟ್ಯಾನ್ ಅವರು ಘಟಕದ ಪರವಾಗಿ ಗೌರವಿಸಿದರು.
ಕಾರ್ಯಕ್ರಮವು ಸಂಜೆ 5.30ರಿಂದ 6.30ರವರೆಗೆ ಭಜನೆಯೊಂದಿಗೆ ಆರಂಭಗೊಂಡಿತು. ಸಂಜೆ 6.30ಕ್ಕೆ ಸದಾನಂದ ಪೂಜಾರಿ ಕುಳಾಯಿ ಅವರು ಗುರುಪೂಜೆ ನೆರವೇರಿಸಿದರು. ಸಂಜೆ 7 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಆರಂಭವಾಯಿತು.
ಅಧ್ಯಕ್ಷರು ಸರ್ವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯದರ್ಶಿ ಉಷಾ ಕೆ. ಅವರು ಹಿಂದಿನ ಸಭೆಯ ಹಾಗೂ ನಾರಾಯಣಗುರು ಜಯಂತಿಯ ಕಾರ್ಯಕ್ರಮದ ವರದಿಯನ್ನು ವಾಚಿಸಿ ಸಭೆಯ ಅನುಮೋದನೆ ಪಡೆದರು. ಘಟಕದ ಪ್ರವಾಸ ಸಹ ಸಂಚಾಲಕ ಸತೀಶ್ ಜಿ. ಪಿ. ಅವರು ಗುರುಸಂದೇಶ ವಾಚಿಸಿದರು. ಬಳಿಕ ಅಧ್ಯಕ್ಷರು ಕೇಂದ್ರ ಸಮಿತಿ ಹಾಗೂ ಘಟಕದ ವತಿಯಿಂದ ಮುಂದಿನ ದಿನಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಘಟಕದ ಒಂದನೇ ಉಪಾಧ್ಯಕ್ಷ ಯತೀಶ್ ಬಳಂಜ ಧನ್ಯವಾದ ಅರ್ಪಿಸಿದರು. ಲೋಕ ಕಲ್ಯಾಣ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!