Yuvavahini

SEP 09, 2026 2.00 PM IST

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ಕೈಬರಹದ ಮೂಲಕ ಸ್ವಯಂ ಅರಿವು ಮತ್ತು ವ್ಯಕ್ತಿತ್ವದ ಅರಿವು”

ಮಂಗಳೂರು ಸೆ 09: ಭವಿಷ್ಯವನ್ನು ಆಯ್ಕೆಮಾಡುವ ಮೊದಲು ನಮ್ಮನ್ನು ನಾವು ಅರಿತುಕೊಳ್ಳುವುದು ಅತ್ಯಂತ ಮುಖ್ಯ. ನಮ್ಮ ಆಸಕ್ತಿ ಮತ್ತು ವೃತ್ತಿಯನ್ನು ಸಮನ್ವಯಗೊಳಿಸಿ ಸಾಗಬೇಕಾದರೆ ಜೀವನದಲ್ಲಿ ತೃಪ್ತಿ ಅಗತ್ಯ. ಇಂದಿನ ದಿನಗಳಲ್ಲಿ ಶಿಕ್ಷಣ ಹಾಗೂ ಬುದ್ಧಿವಂತಿಕೆ ಇದ್ದರೂ ಅನೇಕರು ಅತಿಯಾದ ಚಿಂತನೆಗೆ ಒಳಗಾಗುತ್ತಿದ್ದಾರೆ. ಜನರನ್ನು ಅರ್ಥಮಾಡಿಕೊಳ್ಳುವ ನಿಟ್ಟಿನಲ್ಲಿ ಜೀವನ ಮಾರ್ಗದರ್ಶನದ ಕ್ಷೇತ್ರಕ್ಕೆ ಬಂದಾಗ ಕೈಬರಹ ವಿಶ್ಲೇಷಣೆ ಸಹಾಯಕವಾಯಿತು ಎಂದು ಸಂಪನ್ಮೂಲ ವ್ಯಕ್ತಿ ಅಶ್ವಿನಿ ಜಿ. ಎನ್. ತಿಳಿಸಿದರು.

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಶ್ರೀ ಗೋಕರ್ಣನಾಥೇಶ್ವರ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಸೆಪ್ಟೆಂಬರ್ 9ರಂದು ಗಾಂಧಿನಗರದ ಶ್ರೀ ಗೋಕರ್ಣನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ “ಕೈಬರಹದ ಮೂಲಕ ಸ್ವಯಂ ಅರಿವು ಮತ್ತು ವ್ಯಕ್ತಿತ್ವದ ಅರಿವು” ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಘಟಕದ ಪ್ರಥಮ ಉಪಾಧ್ಯಕ್ಷೆ ದೀಪಿಕಾ ಮನೋಜ್ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಸಮೂಹ ಸಂಸ್ಥೆಗಳ ಸಂಚಾಲಕ ಹಾಗೂ ನ್ಯಾಯವಾದಿ ವಸಂತ ಕಾರಂದೂರು, ಕಾಲೇಜಿನ ಪ್ರಾಂಶುಪಾಲ ರಘುರಾಜ್, ಸಂಪನ್ಮೂಲ ವ್ಯಕ್ತಿ ಅಶ್ವಿನಿ ಜಿ. ಎನ್. ಹಾಗೂ ಮಹಿಳಾ ಘಟಕದ ಕಾರ್ಯದರ್ಶಿ ಸೋನಿಯಾ ರಾಜ್ ಉಪಸ್ಥಿತರಿದ್ದರು.

ವಸಂತ ಕಾರಂದೂರು ಮಾತನಾಡಿ, ಯುವವಾಹಿನಿ ಮಹಿಳಾ ಘಟಕವು ಕಾಲೇಜಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳ ಮನಸ್ಸನ್ನು ಕೈಬರಹದ ಮೂಲಕ ಅರಿಯಲು ಸಹಾಯಕವಾಗುವಂತಹ ಉಪಯುಕ್ತ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತೋಷದ ವಿಷಯ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡು ಪರೀಕ್ಷೆ ಹಾಗೂ ಭವಿಷ್ಯವನ್ನು ಆತ್ಮವಿಶ್ವಾಸದಿಂದ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ಅಶ್ವಿನಿ ಜಿ. ಎನ್. ಮಾತನಾಡಿ, “ನಮ್ಮದೇ ಆದ ಗುರುತನ್ನು ರೂಪಿಸಿಕೊಳ್ಳಲು ಪ್ರತಿದಿನ ನಮ್ಮ ಪೂರ್ಣ ಹೆಸರನ್ನು ಹೆಮ್ಮೆಯಿಂದ ಬರೆಯುವ ಅಭ್ಯಾಸ ಬೆಳೆಸಿಕೊಳ್ಳಬೇಕು” ಎಂದು ತಿಳಿಸಿದರು. ಕೈಯ ಚಲನೆ, ಅಕ್ಷರಗಳ ರೀತಿ, ಗೆರೆಗಳು ಹಾಗೂ ಬರವಣಿಗೆಯ ಶೈಲಿಯನ್ನು ಗಮನಿಸುವ ಮೂಲಕ ವ್ಯಕ್ತಿಯ ಕೆಲವು ಗುಣಲಕ್ಷಣಗಳನ್ನು ಅರಿಯಲು ಸಾಧ್ಯ. ಕೈಬರಹದ ಮೂಲಕ ಏಕಾಗ್ರತೆ, ಆತ್ಮವಿಶ್ವಾಸ, ಅತಿಯಾದ ಚಿಂತನೆ ಸೇರಿದಂತೆ ವ್ಯಕ್ತಿತ್ವದ ಕೆಲವು ಅಂಶಗಳ ಕುರಿತು ಅರಿವು ಪಡೆಯಬಹುದು ಎಂದು ವಿವರಿಸಿದರು.

ಪರೀಕ್ಷೆಗಳಲ್ಲಿ ವೇಗವಾಗಿ, ಸ್ಪಷ್ಟವಾಗಿ ಹಾಗೂ ಆತ್ಮವಿಶ್ವಾಸದಿಂದ ಬರೆಯುವುದು, ಬರವಣಿಗೆಯ ವೇಗವನ್ನು ಸುಧಾರಿಸಿಕೊಳ್ಳುವುದು ಸೇರಿದಂತೆ ಹಲವು ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮಾರ್ಗದರ್ಶನ ನೀಡಿದರು. ತಮ್ಮ ಕೈಬರಹದ ಮೂಲಕ ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಂಡು ಉತ್ತಮವಾಗಿ ಬೆಳೆಯುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಅವರು, ಕಾಲೇಜಿನ ಆಸಕ್ತ 15 ವಿದ್ಯಾರ್ಥಿಗಳಿಗೆ ಉಚಿತ ಸಲಹಾ ಮಾರ್ಗದರ್ಶನ ನೀಡುವುದಾಗಿ ತಿಳಿಸಿದರು.

ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದ ಸಂಪನ್ಮೂಲ ವ್ಯಕ್ತಿ ಅಶ್ವಿನಿ ಜಿ. ಎನ್. ಹಾಗೂ ಮಹಿಳಾ ಘಟಕದ ಕಾರ್ಯಕ್ರಮಗಳಿಗೆ ನಿರಂತರ ಸಹಕಾರ ಮತ್ತು ಪ್ರೋತ್ಸಾಹ ನೀಡುತ್ತಿರುವ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಅವರನ್ನು ಮಹಿಳಾ ಘಟಕದ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಉಪನ್ಯಾಸಕ ವಸಂತ್ ನಿರೂಪಿಸಿದರು. ಮಹಿಳಾ ಘಟಕದ ಕಾರ್ಯದರ್ಶಿ ಸೋನಿಯಾ ರಾಜ್ ಧನ್ಯವಾದ ಸಮರ್ಪಿಸಿದರು. ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಶುಭಾ ರಾಜೇಂದ್ರ ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಲ್ಲಿ ಸ್ವಯಂ ಅರಿವು, ಆತ್ಮವಿಶ್ವಾಸ ಹಾಗೂ ಏಕಾಗ್ರತೆ ಬೆಳೆಸುವುದರ ಜೊತೆಗೆ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಲು ಮಾರ್ಗದರ್ಶನ ನೀಡಿದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!