Yuvavahini

SEP 11, 2026 8.00 PM IST

ಯುವವಾಹಿನಿ ಕೂಳೂರು ಘಟಕದ ದಶಮಾನೋತ್ಸವಕ್ಕೆ ಭಕ್ತಿಯ ಮೆರುಗು

ಗುರುಪೂಜೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ಸಂಭ್ರಮದಿಂದ ಸಂಪನ್ನ

ಕೂಳೂರು ಸೆ 11 : ಯುವವಾಹಿನಿ (ರಿ.) ಕೂಳೂರು ಘಟಕದ ದಶಮಾನೋತ್ಸವದ ಅಂಗವಾಗಿ ಘಟಕದ ಸಭಾಭವನದ ಫಲ್ಗುಣಿ ಸಭಾಂಗಣದಲ್ಲಿ ಗುರುಪೂಜೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯನ್ನು ಸೆ. 11ರಂದು ಶ್ರದ್ಧಾ–ಭಕ್ತಿಯಿಂದ ಹಾಗೂ ಸಂಭ್ರಮದಿಂದ ನೆರವೇರಿಸಲಾಯಿತು.

ಸಂಜೆ 5 ಗಂಟೆಗೆ ಭಜನಾ ಸಂಕೀರ್ತನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿದ್ದು, ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಗುರುಸ್ತುತಿಯನ್ನು ನೆರವೇರಿಸಿದರು.

ಸಂಜೆ 6 ಗಂಟೆಗೆ ಘಟಕದ ಅಧ್ಯಕ್ಷರಾದ ಗೀತಾ ವಸಂತ್ ದಂಪತಿ, ಹಿರಿಯರಾದ ಜಾನಕಿ ಅಮ್ಮ ಹಾಗೂ ಮಾರ್ಗದರ್ಶಕರಾದ ಚಂದಪ್ಪ ಸನಿಲ್ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾದ ಮಧುಶ್ರೀ ಪ್ರಶಾಂತ್ ಹಾಗೂ ಕಾರ್ಯದರ್ಶಿ ವಂದೀಪ್ ಕೆ. ಸುವರ್ಣ ಉಪಸ್ಥಿತರಿದ್ದರು. ನಂತರ ಪ್ರಧಾನ ಅರ್ಚಕರಾದ ಪ್ರವೀಣ್ ಶಾಂತಿ ಅವರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆಯ ವಿಧಿ–ವಿಧಾನಗಳು ನೆರವೇರಿದವು. ಘಟಕದ ಅಧ್ಯಕ್ಷರಾದ ಗೀತಾ ವಸಂತ್ ದಂಪತಿ ಪೂಜೆಯ ಸಂಕಲ್ಪವನ್ನು ಕೈಗೊಂಡು ವಿಧಿ–ವಿಧಾನಗಳಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತೃ ಸಂಸ್ಥೆಯ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಘಟಕದ ಮಾಜಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸದಸ್ಯರು, ಮಾರ್ಗದರ್ಶಕರು ಮತ್ತು ಭಕ್ತರು ಉಪಸ್ಥಿತರಿದ್ದರು. ಪೂಜೆಯ ಬಳಿಕ ನೆರೆದಿದ್ದ ಭಕ್ತವೃಂದಕ್ಕೆ ಪ್ರಸಾದ ವಿತರಣೆ ಹಾಗೂ ಅನ್ನದಾನ ಸೇವೆಯನ್ನು ನೆರವೇರಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!