Yuvavahini

SEP 13, 2026 8.00 PM IST

ಯುವವಾಹಿನಿ ಕೊಲ್ಯ ಘಟಕದಿಂದ ‘ಮೊಬೈಲ್ ಉಪವಾಸ’

ಕೊಲ್ಯ, ಸೆ. 13: ಇಂದು ಸಮಸ್ತ ಜಗತ್ತು ಮೊಬೈಲ್ ಯುಗದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ, ಕುಟುಂಬದ ಸದಸ್ಯರ ನಡುವಿನ ಸಂಬಂಧಗಳು ಸಡಿಲವಾಗುತ್ತಿರುವುದು ಹಾಗೂ ಮಕ್ಕಳು, ಹಿರಿಯರು ಸೇರಿದಂತೆ ಬಹುತೇಕರು ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲೇ ಕಳೆಯುತ್ತಿರುವ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಕೊಲ್ಯ ಘಟಕವು ಗೌರಿ ಹಬ್ಬದ ಪ್ರಯುಕ್ತ ‘ಮೊಬೈಲ್ ಉಪವಾಸ’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿತು.

ಸೆ. 13ರಂದು ಭಾನುವಾರ ಬೆಳಗ್ಗೆ 7ರಿಂದ ಸಂಜೆ 7ರವರೆಗೆ 12 ಗಂಟೆಗಳ ಕಾಲ ಮೊಬೈಲ್ ಬಳಕೆಯಿಂದ ದೂರವಿರುವಂತೆ ಘಟಕದ ಸದಸ್ಯರು ಹಾಗೂ ಅವರ ಕುಟುಂಬದವರಿಗೆ ಕರೆ ನೀಡಲಾಗಿತ್ತು. ಅತ್ಯಂತ ತುರ್ತು ಕರೆಗಳನ್ನು ಹೊರತುಪಡಿಸಿ ಮೊಬೈಲ್, ಅಂತರ್ಜಾಲ ಹಾಗೂ ವಾಟ್ಸ್‌ಆ್ಯಪ್ ಬಳಕೆ ಮಾಡದಂತೆ ಸೂಚಿಸಲಾಗಿತ್ತು.

ರಜಾ ದಿನವನ್ನು ಕುಟುಂಬದವರೊಂದಿಗೆ ಕಳೆಯುವುದು, ಪುಸ್ತಕ ಓದುವುದು, ಪರಿಸರ ಸ್ವಚ್ಛಗೊಳಿಸುವುದು, ಮಕ್ಕಳೊಂದಿಗೆ ಸಮಯ ಕಳೆಯುವುದು, ಕಥೆ–ಕವನ ಬರೆಯುವುದು, ಮನೆಯ ತೋಟದ ಆರೈಕೆ ಸೇರಿದಂತೆ ವಿವಿಧ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಈ ಕಾರ್ಯಕ್ರಮ ಪ್ರೇರಣೆಯಾಯಿತು.

ಘಟಕದ ಹೆಚ್ಚಿನ ಸದಸ್ಯರು ಉತ್ಸಾಹದಿಂದ ‘ಮೊಬೈಲ್ ಉಪವಾಸ’ದಲ್ಲಿ ಭಾಗವಹಿಸಿದರು. “ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಯಿತು. ಹಲವು ವರ್ಷಗಳ ಬಳಿಕ ಪುಸ್ತಕ ಓದಲು ಅವಕಾಶ ದೊರೆಯಿತು. ಮನೆಯ ತೋಟದ ಆರೈಕೆಗೆ ಸಮಯ ಸಿಕ್ಕಿತು. ಮನೆಯವರೆಲ್ಲರೂ ಒಟ್ಟಿಗೆ ಕುಳಿತು ಊಟ ಮಾಡಲು ಸಾಧ್ಯವಾಯಿತು” ಎಂದು ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

ಮೊಬೈಲ್‌ನಿಂದ ಸ್ವಲ್ಪ ಸಮಯ ದೂರವಿರುವುದರಿಂದ ಮನಸ್ಸು, ದೇಹ ಹಾಗೂ ಕುಟುಂಬದ ನಡುವಿನ ಸಂಬಂಧಗಳು ಇನ್ನಷ್ಟು ಗಟ್ಟಿಯಾಗಲು ಸಹಕಾರಿಯಾಗುತ್ತದೆ. ತಿಂಗಳಲ್ಲಿ ಒಂದು ಅಥವಾ ಎರಡು ಬಾರಿ ಇಂತಹ ಚಟುವಟಿಕೆಗಳನ್ನು ಕೈಗೊಳ್ಳುವುದರಿಂದ ಮನಸ್ಸಿಗೆ ಉಲ್ಲಾಸ ದೊರೆಯುವುದರ ಜೊತೆಗೆ, ವಿವಿಧ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ಸಿಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಘಟಕದ ಅಧ್ಯಕ್ಷ ಜೀವನ್ ಕೊಲ್ಯ ಅವರು ಧನ್ಯವಾದ ಸಲ್ಲಿಸಿದರು. ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಇಂತಹ ಆರೋಗ್ಯಕರ ಹಾಗೂ ಕುಟುಂಬಸ್ನೇಹಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!