ಮಾಣಿ ಸೆ 13 : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ 2021ರಲ್ಲಿ ಆರಂಭಿಸಲಾದ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಅಭಿಯಾನವು ಇಂದು ಯುವವಾಹಿನಿಯ ಇತರ ಘಟಕಗಳಿಗೂ ಪ್ರೇರಣೆಯಾಗಿದೆ ಎಂದು ಯುವವಾಹಿನಿ ಮಾಜಿ ಕೇಂದ್ರ ಸಮಿತಿ ಅಧ್ಯಕ್ಷರಾದ ಪ್ರೇಮನಾಥ ಕೆ. ಹೇಳಿದರು.

ಮಾಣಿ ಘಟಕದ ಮಾದರಿಯನ್ನು ಅನುಸರಿಸಿ ಇತರ ಘಟಕಗಳೂ ಗುರುಗಳ ತತ್ತ್ವ ಸಂದೇಶಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ. ಗುರುಗಳ ತತ್ತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮಲ್ಲಿ ಬದಲಾವಣೆಯನ್ನು ಕಂಡುಕೊಳ್ಳುವುದರ ಜೊತೆಗೆ, ಸಮಾಜದಲ್ಲಿಯೂ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ. ಇದರಿಂದ ಸದೃಢ ಹಾಗೂ ಜಾಗೃತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಜನಾರ್ದನ ಪೂಜಾರಿ ಕೊಡಂಗೆ ಅವರ ತಂಡದ ವತಿಯಿಂದ ಭಜನಾ ಸಂಕೀರ್ತನೆ ಸುವ್ಯವಸ್ಥಿತವಾಗಿ ನಡೆಯಿತು. ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ ಅವರು ಸ್ವಾಗತಿಸಿದರು. ನಾರಾಯಣಗುರು ತತ್ತ್ವ ನಿರ್ದೇಶಕರಾದ ಶ್ರೀಧರ್ ಪೂಜಾರಿ ಮುಜಲ ವಂದಿಸಿದರು. ಮಾಜಿ ಅಧ್ಯಕ್ಷರಾದ ಪ್ರಶಾಂತ್ ಬಿ. ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ರಮೇಶ್ ಪೂಜಾರಿ ಮುಜಲ, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.






