ಮಂಗಳೂರು ಸೆ 14: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 14-09-2026 ರಂದು ಸಂಜೆ ನಡೆಯಿತು.

ಈ ವಾರದ ಭಜನಾ ಸೇವೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬೊಕ್ಕಪಟ್ಣ ಬೊಳೂರು ಮಂಗಳೂರು ಇವರ ಸಹಯೋಗದಲ್ಲಿ ನೆರವೇರಿತು. ದೇವರ ನಾಮ ಸ್ಮರಣೆಯಿಂದ ಭಕ್ತರ ಮನದಲ್ಲಿ ಆಧ್ಯಾತ್ಮಿಕ ವಾತಾವರಣ ತುಂಬುವ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು.
ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಭಜನಾ ತಂಡದ ಸದಸ್ಯರಿಗೆ ಗೌರವ ಸಲ್ಲಿಸಲಾಯಿತು. ಮಂಗಳೂರು ಘಟಕದ ಕಾರ್ಯದರ್ಶಿ ಉಷಾ, ನಾರಾಯಣ ಗುರು ತತ್ವಾದರ್ಶಗಳ ಪ್ರಚಾರ ನಿರ್ದೇಶಕರಾದ ಗೋಪಾಲ ಪೂಜಾರಿ, ವಿದ್ಯಾರ್ಥಿ ಸಂಘಟನಾ ನಿರ್ದೇಶಕಿ ಪೂರ್ಣಿಮಾ ಯು ಆರ್ ಉಪಸ್ಥಿತರಿದ್ದರು.






