Yuvavahini

SEP 13, 2026 2.00 PM IST

ಯುವವಾಹಿನಿ (ರಿ) ಕಡಬ ಘಟಕ ಸಹಯೋಗದೊಂದಿಗೆ

ಕಡಬದಲ್ಲಿ ನಾರಾಯಣಗುರು ಜಯಂತಿ ಆಚರಣೆ

ಕಡಬ, ಸೆ. 13: ಕಡಬ, ಸೆ. 13: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ (ರಿ.) ಕಡಬ ತಾಲೂಕು ಇದರ ಆಶ್ರಯದಲ್ಲಿ ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವವಾಹಿನಿ (ರಿ.) ಕಡಬ ಘಟಕದ ಸಹಕಾರದೊಂದಿಗೆ ಗುರುಪೂಜೆ, ಭಜನೆ, ಧಾರ್ಮಿಕ ಸಭೆ ಹಾಗೂ ಸನ್ಮಾನ ಕಾರ್ಯಕ್ರಮವು ಸೆ. 13ರಂದು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವು ಭವ್ಯಮೆರವಣಿಗೆಯೊಂದಿಗೆ ಆರಂಭಗೊಂಡು,
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಕಣಿಯೂರು ಇದರ ಪರಮಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸರಸ್ವತಿ ಸ್ವಾಮೀಜಿ ದಿವ್ಯ ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ಅರ್ಚಕ ಹರೀಶ್ ಶಾಂತಿ ಅವರ ನೇತೃತ್ವದಲ್ಲಿ ಗುರುಪೂಜೆ ನೆರವೇರಿತು.

ಸಮಾಜದ ಬಂಧುಗಳ ತನು-ಮನ-ಧನದ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದ್ದು, ಸಂಘಟನೆಯ ಒಗ್ಗಟ್ಟು ಹಾಗೂ ಸಮಾಜದ ಬೆಳವಣಿಗೆಗೆ ಇದು ಮತ್ತಷ್ಟು ಶಕ್ತಿ ತುಂಬಿದೆ ಎಂದು ಸಂಘದ ಅಧ್ಯಕ್ಷರಾದ ಸತೀಶ್. ಕೆ. ಐತ್ತೂರು ಹೇಳಿದರು..ಕಾರ್ಯಕ್ರಮದಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಪದ್ಮರಾಜ್ ಆರ್. ಪೂಜಾರಿ, ಸತ್ಯಜಿತ್ ಸುರತ್ಕಲ್, ಸತೀಶ್ ಕುಮಾರ್ ಕೆಡೆಂಜಿ, ಉನ್ನಿಕೃಷ್ಣನ್ ಯುವವಾಹಿನಿ (ರಿ.) ಕಡಬ ಘಟಕದ ಅದ್ಯಕ್ಷರಾದ ಉಮೇಶ್ ಬಳ್ಪ, ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷರಾದ ಜಯಂತಿ ನಂದೋಳಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಕರ್ಕೇರ, ಸಂಘದ ಕಾರ್ಯದರ್ಶಿ ಮಿಥುನ್ ಸುಂದರ್ ಪಲ್ಲತ್ತಡ್ಕ,ಸೇರಿದಂತೆ ಸಮಾಜದ ಗಣ್ಯರು ಉಪಸ್ಥಿತರಿದ್ದರು. ಅಶ್ವಥ್ ಬೆಳ್ತಂಗಡಿ ಅವರು ಅರ್ಥಪೂರ್ಣವಾಗಿ ಗುರು ಸಂದೇಶ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಬಂಧುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಹಾಗೂ ಕಡಬ ತಾಲೂಕಿನಲ್ಲಿ ಅತ್ಯಂತ ಹೆಚ್ಚು ಅಂಕಗಳಿಸಿದ ಒಬ್ಬ SSLC ಮತ್ತು PUC ಒಬ್ಬ ವಿದ್ಯಾರ್ಥಿಯನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಪ್ರಚಾರ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಅಂಙನ ಉಪಸ್ಥಿತರಿದ್ದರು. ಗಣೇಶ್ ನಡುವಲ್, ನಿರೂಪಿಸಿ,ಶ್ರೇಯ ವಿದ್ಯಾನಗರ ಪ್ರಾರ್ಥಿಸಿ, ಸಂತೋಷ್ ಕುಮಾರ್ ಮರಕ್ಕಡ ಸ್ವಾಗತಿಸಿ, ಕೃಷ್ಣಪ್ಪ ಅಮೈ ಧನ್ಯವಾದ ಸಲ್ಲಿಸಿದರು. ಬಿಲ್ಲವ ಸಂಘದ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವೇದಿಕೆ, ಯುವವಾಹಿನಿ (ರಿ.) ಕಡಬ ಘಟಕದ ಸದಸ್ಯರು, ವಿವಿಧ ಗ್ರಾಮ ಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಭಜನಾ ಮಂಡಳಿ ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!