Yuvavahini

SEP 14, 2026 8.00 PM IST

ಯುವವಾಹಿನಿ (ರಿ) ಮಾಣಿ ಘಟಕದ ಹೊಸ ಹೆಜ್ಜೆ

‘ಚೌತಿ ಚಿತ್ತಾರ’ದಲ್ಲಿ ಸಂಸ್ಕೃತಿ ಅನಾವರಣ

ಮಾಣಿ, ಸೆ. 14: ಗತಕಾಲದ ಸಾಂಪ್ರದಾಯಿಕ ಆಚರಣೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಣ್ಣಾರೆ ಕಂಡು, ಅವುಗಳ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ ‘ಚೌತಿ ಚಿತ್ತಾರ’ ಕಾರ್ಯಕ್ರಮವು ಲೋಕೇಶ್ ಬಂಗೇರ ಪಳ್ಳತ್ತಿರ ಅವರ ಮನೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಲೋಕೇಶ್ ಬಂಗೇರ ಅವರು, ಹಿಂದಿನ ಕಾಲದ ಸಾಂಪ್ರದಾಯಿಕ ಆಚರಣೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಪರಿಚಯಿಸುವ ಯುವವಾಹಿನಿಯ ಪ್ರಯತ್ನ ಶ್ಲಾಘನೀಯ. ಇಂತಹ ವಿನೂತನ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವುದರೊಂದಿಗೆ ಅವುಗಳ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ಹೇಳಿದರು.

ಯುವವಾಹಿನಿ (ರಿ.) ವಿಟ್ಲ ಘಟಕದ ಕಾರ್ಯದರ್ಶಿ ಧನಲಕ್ಷ್ಮಿ ರಾಜೇಶ್ ಅವರು ‘ಚೌತಿ ಚಿತ್ತಾರ’ದ ಉದ್ದೇಶವನ್ನು ವಿವರಿಸಿ, ಗಣಪತಿಯ ಸ್ವರೂಪ, ಗಣಪತಿ ಆರಾಧನೆಯ ಮಹತ್ವ, ತುಳಸಿ ಕಟ್ಟೆಯ ಬಳಿ ಗಣಪತಿಯನ್ನು ಪ್ರತಿಷ್ಠಾಪಿಸುವ ಸಂಪ್ರದಾಯ ಹಾಗೂ ಗಣಪತಿಗೆ ಸಲ್ಲಿಸುವ ಸ್ತುತಿ ಮತ್ತು ನೈವೇದ್ಯಗಳ ಕುರಿತು ಮಾಹಿತಿ ನೀಡಿದರು. ಯಾವುದೇ ಶುಭಕಾರ್ಯಕ್ಕೂ ಮುನ್ನ ಗಣಪತಿಗೆ ಮೊದಲ ಸ್ಥಾನ ನೀಡುವ ಸಂಪ್ರದಾಯದ ಹಿನ್ನೆಲೆ ಹಾಗೂ ಅದರಲ್ಲಿರುವ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ವಿವರಿಸಿದರು.

ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪಡಾಜೆ ಮಾತನಾಡಿ, ಸಾಂಪ್ರದಾಯಿಕ ಆಚರಣೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಣ್ಣಾರೆ ನೋಡುವುದರಿಂದ ಇಂದಿನ ಪೀಳಿಗೆಗೆ ಅವುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಸಾಧ್ಯ. ಸಂಸ್ಕೃತಿ ಮತ್ತು ಸಂಪ್ರದಾಯಗಳ ಪರಿಚಯ ಹಾಗೂ ಸಂರಕ್ಷಣೆಯ ನಿಟ್ಟಿನಲ್ಲಿ ಯುವವಾಹಿನಿ ಘಟಕವು ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಮಾಜಿ ಅಧ್ಯಕ್ಷ ರಮೇಶ್ ಪೂಜಾರಿ ಮುಜಾಲ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಶ್ವನಾಥ ಪೂಜಾರಿ ಸ್ವಾಗತಿಸಿದರು. ಕೋಶಾಧಿಕಾರಿ ಡಾ. ತ್ರಿವೇಣಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಸುಜಿತ್ ಅಂಚನ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!