Yuvavahini

SEP 13, 2026 2.00 PM IST

ಯುವವಾಹಿನಿ (ರಿ) ಕುಪ್ಪೆಪದವು ಎಡಪದವು ಘಟಕ

ಮುದ್ದುಕೃಷ್ಣ ಫೋಟೋ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಕುಪ್ಪೆಪದವು, ಸೆ. 13: ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಆನ್‌ಲೈನ್ ‘ಮುದ್ದುಕೃಷ್ಣ’ ಫೋಟೋ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಣಾ ಸಮಾರಂಭವು ಸೆ. 13ರಂದು ಕುಪ್ಪೆಪದವು ಶ್ರೀ ರಾಮಕೃಷ್ಣ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ಅಧ್ಯಕ್ಷ ಗೋಪಾಲ್ ಪೂಜಾರಿ (ಗಂಗಾಧರ) ಎಡಪದವು ಮಾತನಾಡಿ, ಸಂಸ್ಥೆಯ ವತಿಯಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತಸದ ವಿಚಾರ. ಸದಸ್ಯರ ಪರಿಶ್ರಮ ಮತ್ತು ಸಹಕಾರದಿಂದ ಇಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿಯೂ ಈ ಭಾಗದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದರು.

ಆನ್‌ಲೈನ್ ಮುದ್ದುಕೃಷ್ಣ ಫೋಟೋ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಅನ್ಸ್ ಎ. ಕೋಟ್ಯಾನ್ ಕುರಿಯಾಲ, ದ್ವಿತೀಯ ಬಹುಮಾನವನ್ನು ಪೂರ್ವಿತ್ ಎ. ಕುಲವೂರು ಹಾಗೂ ತೃತೀಯ ಬಹುಮಾನವನ್ನು ಚಿರಂಶ್ ಪಿ. ಕುಲಾಲ್ ವಾರಟಿಲು ಪಡೆದುಕೊಂಡರು. ವಿಶೇಷ ಬಹುಮಾನಗಳನ್ನು ಕಶ್ವಿ ಸುಂಕದಕಟ್ಟೆ, ರಿಯಾನ್ಸ್ ಸಿ.ಆರ್. ಹಾಗೂ ಧಾತ್ರಿ ಕೆ. ಕೋಟ್ಯಾನ್ ಅಳಿಕೆಪದವು ಪಡೆದರು.

ಸ್ಪರ್ಧೆಗೆ ಸಹಕಾರ ನೀಡಿದ ಬ್ರಾಮರಿ ಮೊಬೈಲ್ಸ್ ಮಾಲೀಕರಾದ ವಿಜೀತ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಸಂಜೀವ ಶ್ರೀನಿಕೇತನ, ಘಟಕದ ನಿಕಟಪೂರ್ವ ಅಧ್ಯಕ್ಷ ಶ್ರೀಧರ ಪೂಜಾರಿ, ಉಪಾಧ್ಯಕ್ಷ ರಜನಿಕುಂದರ್, ಕೋಶಾಧಿಕಾರಿ ಶಕುಂತಳಾ, ಮಾಜಿ ಅಧ್ಯಕ್ಷರಾದ ಅಜಯ್ ಅಮೀನ್, ಸತೀಶ್ ಕೆ.ಎಂ., ಜಗದೀಶ್ ದುರ್ಗಾಕೋಡಿ, ಸೌಮ್ಯ ಕೋಟ್ಯಾನ್, ಅಕ್ಷಿತ್ ಕುಮಾರ್, ಕಲೆ ಮತ್ತು ಸಾಂಸ್ಕೃತಿಕ ನಿರ್ದೇಶಕಿ ಸಂಜಾತ, ಮಾಧ್ಯಮ ಮತ್ತು ಪ್ರಚಾರ ನಿರ್ದೇಶಕ ನಿತಿನ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಸಂತೋಷ್ ಬೊಳಿಯ ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!