ಎಡಪದವು, ಸೆ. 15: ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರಿ ದೇವಸ್ಥಾನ, ಎಡಪದವು ಇದರ ಆಶ್ರಯದಲ್ಲಿ ನಡೆಯುತ್ತಿರುವ 17ನೇ ವರ್ಷದ ಎಡಪದವು ಗಣೇಶೋತ್ಸವದ ಅಂಗವಾಗಿ ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ವತಿಯಿಂದ ಸೆ. 15ರಂದು ಒಂದು ದಿನದ ಸ್ವಯಂಸೇವಾ ಕಾರ್ಯ ನಡೆಸಲಾಯಿತು.

ಮಧ್ಯಾಹ್ನ 1 ಗಂಟೆಯಿಂದ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಗಣೇಶೋತ್ಸವದ ವಿವಿಧ ಸೇವಾ ಕಾರ್ಯಗಳಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಸೇವಾ ಮನೋಭಾವದಿಂದ ಕೈಜೋಡಿಸುವ ಮೂಲಕ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಯುವವಾಹಿನಿ ಘಟಕದ ಕಾರ್ಯವನ್ನು ಸಾರ್ವಜನಿಕರು ಹಾಗೂ ಸಂಘಟಕರು ಶ್ಲಾಘಿಸಿದರು.






