Yuvavahini

SEP 16, 2026 8.00 PM IST

ಯುವವಾಹಿನಿ (ರಿ) ಕೊಲ್ಯ ಘಟಕ

ಶಾಲಾ ಮಕ್ಕಳಿಗೆ ಮೊಬೈಲ್ ಹಾಗೂ ಡ್ರಗ್ಸ್ ಅಡಿಕ್ಷನ್ ಕುರಿತು ಮಾಹಿತಿ ಶಿಬಿರ

ಕೊಲ್ಯ, ಸೆ. 16: ಯುವವಾಹಿನಿ (ರಿ.) ಕೊಲ್ಯ ಘಟಕ ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಸಹಯೋಗದಲ್ಲಿ ಪಿಎಂ ಶ್ರೀ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಒಂಬತ್ತುಕೆರೆ, ಉಳ್ಳಾಲ ಇಲ್ಲಿನ ವಿದ್ಯಾರ್ಥಿಗಳಿಗೆ ಮೊಬೈಲ್ ಅಡಿಕ್ಷನ್ ಹಾಗೂ ಡ್ರಗ್ಸ್ ಅಡಿಕ್ಷನ್ ಕುರಿತು ಮಾಹಿತಿ ಶಿಬಿರವು ಸೆ. 16ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯ ಹಿನ್ನೆಲೆಯಲ್ಲಿ ಮೊಬೈಲ್ ಅಡಿಕ್ಷನ್ ಹಾಗೂ ಡ್ರಗ್ಸ್ ಅಡಿಕ್ಷನ್ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ. ಮೊಬೈಲ್ ಬಳಕೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಅವರು ವಿವರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್ ಅವರು ವಿದ್ಯಾರ್ಥಿಗಳು ತಂದೆ-ತಾಯಿ ಹಾಗೂ ಗುರುಹಿರಿಯರನ್ನು ಗೌರವಿಸುವುದರ ಮಹತ್ವವನ್ನು ತಿಳಿಸಿದರು. ಉತ್ತಮ ಶಿಕ್ಷಣ ಪಡೆದು ಜವಾಬ್ದಾರಿಯುತ ನಾಗರಿಕರಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಡಾ. ಅಪೂರ್ವ ಕೆಂಜಾರ್ ಅವರು ಮೊಬೈಲ್‌ನ ಅತಿಯಾದ ಬಳಕೆಯಿಂದ ದೇಹ ಹಾಗೂ ಮನಸ್ಸಿನ ಮೇಲೆ ಉಂಟಾಗಬಹುದಾದ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಮೊಬೈಲ್ ಬಳಕೆಯ ಬದಲಾಗಿ ಕ್ರೀಡೆ, ಓದು ಹಾಗೂ ಇತರ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು. ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆಯೂ ವಿವರಿಸಿದರು.

ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸಿ, ವಿಷಯಗಳಿಗೆ ಸಂಬಂಧಿಸಿದ ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಪರಿಣಾಮಕಾರಿ ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು. ಒಟ್ಟು 72 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶಾಲೆಯ ಶಿಕ್ಷಕ ವರ್ಗದವರು ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಯುವವಾಹಿನಿ (ರಿ.) ಕೊಲ್ಯ ಘಟಕದ ಸ್ಥಾಪಕ ಅಧ್ಯಕ್ಷ ಸುರೇಶ್ ಬಿಲ್ಲವ ಹಾಗೂ ಶಾಲೆಯ ಶಿಕ್ಷಕಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!