ಮಾಣಿ, ಸೆ. 15: ಸಂಘಟನೆಯ ಮೂಲಕ ಸಮಾಜದ ಎಲ್ಲ ವರ್ಗಗಳನ್ನೂ ಉನ್ನತಿಯತ್ತ ಕೊಂಡೊಯ್ಯುವ ಪ್ರಯತ್ನ ನಡೆಯಬೇಕು. ಸಮಾಜದ ಪ್ರತಿಯೊಬ್ಬರೂ ಸಮಾನತೆ ಹಾಗೂ ಗೌರವದಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕು ಎಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಹೇಳಿದರು.

ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮದ ಅಂಗವಾಗಿ ಸೆ. 15ರಂದು ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗುರುಗಳ ತತ್ತ್ವ ಹಾಗೂ ಸಂದೇಶಗಳನ್ನು ಮನೆ ಮನೆಗೆ ತಲುಪಿಸುವುದರೊಂದಿಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಸಂಘಟನೆಯ ಮೂಲಕ ಸಮಾಜದ ಉನ್ನತಿಗಾಗಿ ಶ್ರಮಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ ಸ್ವಾಗತಿಸಿದರು. ಮಾಜಿ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ರಮೇಶ್ ಪೂಜಾರಿ ಮುಜಾಲ, ಸಮಾಜ ಸೇವಾ ನಿರ್ದೇಶಕ ಸುರೇಶ್ ಪೂಜಾರಿ ಬಾಕಿಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕ ರಾಜೇಶ್ ಕೋಟ್ಯಾನ್, ಭಜನಾ ತಂಡದ ಜವಾಬ್ದಾರಿ ವಹಿಸಿಕೊಂಡಿರುವ ಜನಾರ್ದನ ಪೂಜಾರಿ ಕೊಡಂಗೆ, ಯಶೋಧರ ಬಾಲಕೃಷ್ಣ ಶೇರಾ, ಸುಜಿತ್ ಬಾಕಿಲ ಸೇರಿದಂತೆ ಘಟಕದ ಸದಸ್ಯರು ಉಪಸ್ಥಿತರಿದ್ದರು. ನಾರಾಯಣಗುರು ತತ್ತ್ವ ಪ್ರಚಾರ ನಿರ್ದೇಶಕ ಶ್ರೀಧರ್ ಪೂಜಾರಿ ಮುಜಾಲ ವಂದಿಸಿದರು. ಕೋಶಾಧಿಕಾರಿ ಡಾ. ತ್ರಿವೇಣಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು.






