Yuvavahini

SEP 16, 2026 8.00 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ವ್ಯಕ್ತಿತ್ವ ವಿಕಸನಕ್ಕೆ ಯುವವಾಹಿನಿ ಉತ್ತಮ ವೇದಿಕೆ: ಜೀವನ್ ಕೊಲ್ಯ

ಮಂಗಳೂರು, ಸೆ. 16: ಯುವಕರ ವ್ಯಕ್ತಿತ್ವ ವಿಕಸನಕ್ಕೆ ಅವಕಾಶ ಕಲ್ಪಿಸುವುದರ ಜೊತೆಗೆ, ಅವರೊಳಗಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸಿ ಬೆಳೆಸಲು ಯುವವಾಹಿನಿ ಸಂಸ್ಥೆಯು ಉತ್ತಮ ವೇದಿಕೆಯನ್ನು ನಿರ್ಮಿಸುತ್ತಿದೆ ಎಂದು ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲದ ವ್ಯವಸ್ಥಾಪಕ ಹಾಗೂ ಮುಖ್ಯ ತರಬೇತುದಾರ, ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ ಹೇಳಿದರು.

ಯುವವಾಹಿನಿ (ರಿ.) ಮಂಗಳೂರು ಘಟಕದ ಸಾಪ್ತಾಹಿಕ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವ್ಯಕ್ತಿತ್ವ ವಿಕಸನದ ಕುರಿತು ಉಪನ್ಯಾಸ ನೀಡಿದ ಅವರು, ಇಂದಿನ ಯುವಕರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಹಲವಾರು ಅವಕಾಶಗಳಿವೆ. ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಕೇವಲ ಉಪನ್ಯಾಸಕ್ಕೆ ಸೀಮಿತವಾಗದೆ ಪರಸ್ಪರ ಸಂವಾದ ಹಾಗೂ ಚರ್ಚೆಗಳಿಗೆ ಅವಕಾಶ ಕಲ್ಪಿಸುವುದರಿಂದ ವ್ಯಕ್ತಿಯೊಳಗಿನ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಹೊರತರುವ ಸಾಧ್ಯತೆ ಇದೆ ಎಂದರು.

ಇಂತಹ ಕಾರ್ಯಕ್ರಮಗಳ ಮೂಲಕ ವೇದಿಕೆಯ ಮೇಲೆ ಮಾತನಾಡುವ ಭಯವನ್ನು ದೂರಮಾಡಿ, ಯುವಕರು ಆತ್ಮವಿಶ್ವಾಸದಿಂದ ಮುಂದೆ ಬರುವಂತೆ ಪ್ರೋತ್ಸಾಹಿಸಬಹುದು. ಸಾಪ್ತಾಹಿಕ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಸದಸ್ಯರು ಭಾಗವಹಿಸುವಂತೆ ವಿವಿಧ ಸ್ಪರ್ಧೆಗಳು ಹಾಗೂ ಆಸಕ್ತಿದಾಯಕ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಸಭೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಬಹುದು ಎಂದು ಸಲಹೆ ನೀಡಿದರು.

ಸೆ. 16ರಂದು ಸಂಜೆ 5.30ರಿಂದ 6.30ರವರೆಗೆ ಭಜನಾ ಕಾರ್ಯಕ್ರಮ ನಡೆಯಿತು. ಸಂಜೆ 6.30ಕ್ಕೆ ಹರೀಶ್ ಕೆ. ಸುವರ್ಣ ಅವರ ಗುರುಪೂಜಾ ಸೇವೆಯೊಂದಿಗೆ ಸದಾನಂದ ಪೂಜಾರಿ ಕುಳಾಯಿ ಅವರ ನೇತೃತ್ವದಲ್ಲಿ ಗುರುಪೂಜೆ ನೆರವೇರಿತು. ಸಂಜೆ 7 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಆರಂಭವಾಯಿತು.

ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅಧ್ಯಕ್ಷತೆ ವಹಿಸಿ ಸರ್ವ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿ ಜೀವನ್ ಕೊಲ್ಯ ಅವರನ್ನು ಘಟಕದ ಪರವಾಗಿ ಮಾಜಿ ಅಧ್ಯಕ್ಷ ನವೀನ್ ಚಂದ್ರ ಪೂಜಾರಿ ಪುಷ್ಪ ನೀಡಿ ಸ್ವಾಗತಿಸಿದರು.

ವ್ಯಕ್ತಿತ್ವ ವಿಕಸನ ನಿರ್ದೇಶಕ ಶ್ರೀಕಾಂತ್ ಅಂಚನ್ ಗುರುಸಂದೇಶ ನೀಡಿದರು. ಕಾರ್ಯದರ್ಶಿ ಉಷಾ ಕೆ. ವರದಿ ವಾಚಿಸಿದರು. ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕೋಶಾಧಿಕಾರಿ ಚಂದ್ರಶೇಖರ್ ಕಿನ್ನಿಗೋಳಿ ಧನ್ಯವಾದ ಸಲ್ಲಿಸಿದರು. ಲೋಕಕಲ್ಯಾಣ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!