ಪಡುಬಿದ್ರಿ, ಸೆ. 17: ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ನೂತನ ತಂಡದ ಪದಗ್ರಹಣ ಕಾರ್ಯಕ್ರಮಕ್ಕೂ ಮುನ್ನ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ಹಾಗೂ ಭಜನಾ ಸೇವೆ ಸಲ್ಲಿಸುವುದು ಘಟಕದ ಸಂಪ್ರದಾಯವಾಗಿದೆ.

ಅದರಂತೆ, ಸೆಪ್ಟೆಂಬರ್ 17ರಂದು ಗುರುವಾರ ಘಟಕದ ವತಿಯಿಂದ ಪಡುಬಿದ್ರಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಹಾಗೂ ಭಜನಾ ಸೇವೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.
ಗುರುಗಳ ಸನ್ನಿಧಿಯಲ್ಲಿ ನೂತನ ತಂಡದ ಯಶಸ್ವಿ ಕಾರ್ಯಚಟುವಟಿಕೆಗಳಿಗೆ ಪ್ರಾರ್ಥನೆ ಸಲ್ಲಿಸಿ, ಗುರುತತ್ವ ಹಾಗೂ ಸೇವಾ ಮನೋಭಾವವನ್ನು ಮೈಗೂಡಿಸಿಕೊಂಡು ಮುನ್ನಡೆಯುವ ಸಂಕಲ್ಪವನ್ನು ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು ಭಜನಾ ಸೇವೆಯಲ್ಲಿ ಭಕ್ತಿಯಿಂದ ಪಾಲ್ಗೊಂಡರು.






