Yuvavahini

SEP 13, 2026 1.00 PM IST

ಯುವವಾಹಿನಿ (ರಿ) ಮೂಡುಬಿದಿರೆ ಘಟಕದಿಂದ ಶಿಕ್ಷಕರ ದಿನಾಚರಣೆ

ಶಿಕ್ಷಕರು ಸಮಾಜದ ಆಸ್ತಿ: ಅಶೋಕ್ ಕುಮಾರ್ ಪಡ್ಪು

ಮೂಡುಬಿದಿರೆ, ಸೆ. 13: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಮಾಸಿಕ ಸಭೆಯು ಸೆಪ್ಟೆಂಬರ್ 13ರಂದು ಮೂಡುಬಿದಿರೆ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಶೀನಪ್ಪ ಸಭಾಭವನದಲ್ಲಿ ನಡೆಯಿತು.

ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮೇಘನಾ ಘಟಕದ ವರದಿಯನ್ನು ಮಂಡಿಸಿದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ 17 ಮಂದಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಮಾತನಾಡಿ, “ಶಿಕ್ಷಕರು ನಮ್ಮ ಸಮಾಜದ ಆಸ್ತಿ. ನಿಮ್ಮೆಲ್ಲರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯ. ಮುಂದಿನ ದಿನಗಳಲ್ಲಿ ನಡೆಯುವ ನಮ್ಮ ಸಂಸ್ಥೆಯ ಕಾರ್ಯಕ್ರಮಗಳಿಗೆ ನಿಮ್ಮೆಲ್ಲರ ಸಹಕಾರ ದೊರೆಯಲಿ” ಎಂದು ಆಶಿಸಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆಯಲಿರುವ “ಯುವವಾಹಿನಿ ಕ್ರೀಡೋತ್ಸವ–2026” ಕುರಿತು ಮಾಹಿತಿ ನೀಡಿ, ಶಿಕ್ಷಕರು ಹಾಗೂ ಸಾರ್ವಜನಿಕರ ಸಹಕಾರ ಕೋರಿದರು.

ಘಟಕದ ನಿಕಟಪೂರ್ವ ಅಧ್ಯಕ್ಷ ಮುರಳೀಧರ ಕೋಟ್ಯಾನ್ ಹಾಗೂ ಮಾಜಿ ಅಧ್ಯಕ್ಷರಾದ ಜಗದೀಶ್ಚಂದ್ರ ಡಿ.ಕೆ., ನವಾನಂದ್ ಮತ್ತು ಸುಶಾಂತ್ ಕರ್ಕೇರ ಅವರು ಶಿಕ್ಷಕರಿಗೆ ಶುಭಾಶಯ ಸಲ್ಲಿಸಿದರು

ಸನ್ಮಾನ ಸ್ವೀಕರಿಸಿದ ಘಟಕದ ಗೌರವ ಸಲಹೆಗಾರ ಡಾ. ಯೋಗೀಶ್ ಕೈರೋಡಿ ಅವರು ಘಟಕಕ್ಕೆ ಕೃತಜ್ಞತೆ ಸಲ್ಲಿಸಿ, ಶಿಕ್ಷಕರ ಸೇವೆಯ ಮಹತ್ವವನ್ನು ವಿವರಿಸಿದರು. ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಮಾತನಾಡಿ, “ಗುರುಗಳೇ ನಮ್ಮ ಸಮಾಜಕ್ಕೆ ದೊರೆತ ದೊಡ್ಡ ವರದಾನ. ನಿಮ್ಮ ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಅನೇಕ ಪ್ರತಿಭೆಗಳು ಬೆಳೆಯಲು ಸಾಧ್ಯವಾಗಿದೆ” ಎಂದು ಹೇಳಿ, ಮುಂದಿನ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಕೋರಿದರು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಮೇಘನಾ, ಕೋಶಾಧಿಕಾರಿ ಜಯಶೀಲಾ ಪೂಜಾರಿ, ಪ್ರಥಮ ಉಪಾಧ್ಯಕ್ಷ ಸಂಪತ್ ಪೂಜಾರಿ ಹಾಗೂ ಹರೀಶ್ ಕಾಪಿಕಾಡ್ ಉಪಸ್ಥಿತರಿದ್ದರು. ಕೊನೆಯಲ್ಲಿ ಅಧ್ಯಕ್ಷರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಬಳಿಕ ರಾಷ್ಟ್ರಗೀತೆ ಹಾಡಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!