ಪಣಂಬೂರು ಕುಳಾಯಿ ಸೆ 18 : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ “ಸ್ವಚ್ಛ ಸಾಗರ್ – ಸುರಕ್ಷಿತ ಸಾಗರ್ ಅಭಿಯಾನ – 2026”ರ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.

ಅಭಿಯಾನದ ಅಂಗವಾಗಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ಬೀಚ್ ಪರಿಸರವನ್ನು ಸ್ವಚ್ಛಗೊಳಿಸಿದರು. ಈ ಮೂಲಕ ಕಡಲತೀರದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಕೈಜೋಡಿಸಿದರು.
ಸ್ವಚ್ಛ ಹಾಗೂ ಸುರಕ್ಷಿತ ಕಡಲತೀರ ನಿರ್ಮಾಣದ ಜೊತೆಗೆ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂಬ ಸಂದೇಶವನ್ನು ಕಾರ್ಯಕ್ರಮ ಸಾರಿತು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಘಟಕದ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು.






