ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 21-09-2026 ರಂದು ಸಂಜೆ ನಡೆಯಿತು.

ಈ ವಾರದ ಭಜನಾ ಸೇವೆ ಶ್ರೀ ಮುಖ್ಯಪ್ರಾಣ ಭಜನಾ ತಂಡ ಕಾವೂರು, ಮಂಗಳೂರು ಇವರ ಸಹಯೋಗದಲ್ಲಿ ನೆರವೇರಿತು. ಕ್ಷೇತ್ರದಲ್ಲಿ ಸೇರಿರುವ ಭಕ್ತರ ಮನ ಸೆಳೆಯುವ ಭಕ್ತಿ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು.
ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಭಜನಾ ತಂಡದ ಸದಸ್ಯರಿಗೆ ಗೌರವ ಸಲ್ಲಿಸಲಾಯಿತು. ಮಂಗಳೂರು ಘಟಕದ ಅಧ್ಯಕ್ಷರು ಹರೀಶ್ ಕೆ ಸುವರ್ಣ, ಕಾರ್ಯದರ್ಶಿ ಉಷಾ, ಮಹಿಳಾ ಸಂಘಟನಾ ನಿರ್ದೇಶಕಿ ಜಯಂತಿ ಕೋಟ್ಯಾನ್, ನಾರಾಯಣ ಗುರು ತತ್ವಾದರ್ಶಗಳ ಪ್ರಚಾರ ನಿರ್ದೇಶಕರಾದ ಗೋಪಾಲ ಪೂಜಾರಿ, ನಾರಾಯಣ ಗುರು ತತ್ವ ಆದರ್ಶಗಳ ನಿಕಟಪೂರ್ವ ನಿರ್ದೇಶಕರಾದ ಪೂವಪ್ಪ ಕುಕ್ಯಾನ್, ಪ್ರಚಾರ ನಿರ್ದೇಶಕರಾದ ಚರಣ್ ಪೂಜಾರಿ, ಘಟಕದ ಸದಸ್ಯರಾದ ಜಯ್ ಕುಮಾರ್ ಕೊಲ್ಯ, ನಾರಾಯಣ ಗುರು ಭಜನಾ ಸಮಿತಿಯ ಸದಸ್ಯರಾದ ನರೇಂದ್ರ ಅಮೀನ್ ಉಪಸ್ಥಿತರಿದ್ದರು.






