Yuvavahini

SEP 20, 2026 2.00 PM IST

ಯುವವಾಹಿನಿ (ರಿ.) ಬೆಂಗಳೂರು ಘಟಕ

ಭಕ್ತಿಭಾವದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಬೆಂಗಳೂರು, ಸೆ. 20: ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸೆ. 20ರಂದು ವಿಜಯನಗರದ ಹೊಸಹಳ್ಳಿಯ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು.

ಬೆಳಿಗ್ಗೆ ಭಜನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು, ಪುತ್ತೂರಿನ ಹರೀಶ ಶಾಂತಿ ಅವರ ನೇತೃತ್ವದಲ್ಲಿ ಗುರುಪೂಜೆ ನೆರವೇರಿತು. ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ ಹಾಗೂ ಉದ್ಘಾಟಕ ಗೋವಿಂದ ಬಾಬು ಪೂಜಾರಿ ಅವರನ್ನು ಪೂರ್ಣಕುಂಭ ಹಾಗೂ ಕುಣಿತ ಭಜನೆಯೊಂದಿಗೆ ಸ್ವಾಗತಿಸಲಾಯಿತು. ಬಳಿಕ ಮಹಾಪೂಜೆ ನಡೆಯಿತು.

ಘಟಕದ ಅಧ್ಯಕ್ಷ ವಿಜೇತ್ ವಿ. ಪೂಜಾರಿ ಅಧ್ಯಕ್ಷತೆ ವಹಿಸಿದ್ದ ಸಭಾ ಕಾರ್ಯಕ್ರಮವನ್ನು ಗೋವಿಂದ ಬಾಬು ಪೂಜಾರಿ ಉದ್ಘಾಟಿಸಿದರು. ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ, ಪ್ರಸನ್ನ ಪೂಜಾರಿ, ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಬಾರ್ಯಾ, ಯುವ ವಾಗ್ಮಿ ಚಂದ್ರಹಾಸ ಬಳಂಜ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಕಲ್ಲಾಜೆ, ಘಟಕದ ಕಾರ್ಯದರ್ಶಿ ಮನೋಜ್ ಕುಮಾರ್ ಟಿ., ದೇವಿ ಪ್ರಸಾದ್ ಹಾಗೂ ದೀಕ್ಷಾ ಕೋಟ್ಯಾನ್ ಉಪಸ್ಥಿತರಿದ್ದರು.

ಸ್ಮಿತೇಶ್ ಬಾರ್ಯಾ ಅವರು ನಾರಾಯಣ ಗುರುಗಳ ತತ್ವಾದರ್ಶ ಹಾಗೂ ಆಧುನಿಕ ಸಮಾಜದಲ್ಲಿ ಅವುಗಳ ಪ್ರಸ್ತುತತೆ ಕುರಿತು ಮಾತನಾಡಿದರು. ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ ಗುರುಗಳ ಸಂದೇಶವನ್ನು ವಿವರಿಸಿದರು. ಪ್ರಸನ್ನ ಪೂಜಾರಿ ಹಾಗೂ ಚಂದ್ರಹಾಸ ಬಳಂಜ ಅವರು ಗುರುಗಳನ್ನು ಸ್ಮರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗೋವಿಂದ ಬಾಬು ಪೂಜಾರಿ, ಹರೀಶ ಶಾಂತಿ ಪುತ್ತೂರು ಸೇರಿದಂತೆ ಅತಿಥಿಗಳು ಹಾಗೂ ಕಾರ್ಯಕ್ರಮಕ್ಕೆ ಸಹಕರಿಸಿದ ಪ್ರೋತ್ಸಾಹಕರನ್ನು ಸನ್ಮಾನಿಸಲಾಯಿತು.

ಮಧ್ಯಾಹ್ನ ಮಹಾ ಮಂಗಳಾರತಿ, ಗುರುಪ್ರಾರ್ಥನೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಬಳಿಕ ಘಟಕದ ಸದಸ್ಯರು ನಾರಾಯಣ ಗುರುಗಳ ಜೀವನ ಹಾಗೂ ಸಂದೇಶ ಆಧರಿಸಿದ ಪ್ರಹಸನಗಳನ್ನು ಪ್ರಸ್ತುತಪಡಿಸಿದರು. ಸದಸ್ಯರಿಗಾಗಿ ಆಯೋಜಿಸಿದ್ದ ಚಿತ್ರಕಲೆ, ಪ್ರಬಂಧ, ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳು ಗಮನ ಸೆಳೆದವು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಘಟಕದ ಕುಣಿತ ಭಜನಾ ತಂಡದ ವಿಶೇಷ ನಾಮಫಲಕವನ್ನು ಬಿಡುಗಡೆ ಮಾಡಲಾಯಿತು. ದಿನಪೂರ್ತಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸ್ಪರ್ಧಾತ್ಮಕ ಕಾರ್ಯಕ್ರಮಗಳೊಂದಿಗೆ ನಡೆದ ಜಯಂತಿ ಆಚರಣೆಯು ರಾಷ್ಟ್ರಗೀತೆಯೊಂದಿಗೆ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!