Yuvavahini

SEP 22, 2026 9.00 PM IST

ಯುವವಾಹಿನಿ (ರಿ) ಮಾಣಿ ಘಟಕದಿಂದ ಮನೆ ಮನೆಗೆ ಗುರುತತ್ವ ಸಂದೇಶ

ಸಂಕಷ್ಟದ ಬದುಕಿಗೆ ಮಾನವೀಯ ಸ್ಪರ್ಶ: ಲಲಿತಾ ಅವರ ಕುಟುಂಬಕ್ಕೆ ಯುವವಾಹಿನಿಯ ಆತ್ಮೀಯ ಸ್ಪಂದನೆ – ಡಾ. ತ್ರಿವೇಣಿ ರಮೇಶ್

ಮಾಣಿ, ಸೆ. 22: “ಸಂಕಷ್ಟದಲ್ಲಿರುವವರ ಬದುಕಿಗೆ ಮಾನವೀಯ ಸ್ಪರ್ಶ ನೀಡುವುದೇ ಗುರುತತ್ತ್ವದ ನಿಜವಾದ ಅನುಷ್ಠಾನ. ಸಮಾಜದ ಅಂಚಿನಲ್ಲಿರುವವರ ಬದುಕಿಗೆ ಸ್ಪಂದಿಸಿದಾಗ ಮಾತ್ರ ನಾರಾಯಣ ಗುರುಗಳ ತತ್ವಗಳು ಅರ್ಥಪೂರ್ಣವಾಗುತ್ತವೆ” ಎಂದು ಯುವವಾಹಿನಿ (ರಿ.) ಮಾಣಿ ಘಟಕದ ಕೋಶಾಧಿಕಾರಿ ಡಾ. ತ್ರಿವೇಣಿ ರಮೇಶ್ ಹೇಳಿದರು.

ಯುವವಾಹಿನಿ (ರಿ.) ಮಾಣಿ ಘಟಕದ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮದ ಅಂಗವಾಗಿ ಸೆ. 22ರಂದು ಲಲಿತಾ ಅವರ ಮನೆಯಲ್ಲಿ ಭಜನಾ ಸಂಕೀರ್ತನೆ ಹಾಗೂ ನಾರಾಯಣ ಗುರುಗಳ ತತ್ವಸಂದೇಶ ಕಾರ್ಯಕ್ರಮ ನಡೆಯಿತು.

ತಂದೆ-ತಾಯಿಯ ಆಶ್ರಯವಿಲ್ಲದೆ ಸಂಕಷ್ಟದ ಜೀವನ ನಡೆಸುತ್ತಿರುವ ಲಲಿತಾ ಅವರು, ಅನಾರೋಗ್ಯ ಹಾಗೂ ಅಂಗವೈಕಲ್ಯದಿಂದ ಬಳಲುತ್ತಿರುವ ಕುಟುಂಬ ಸದಸ್ಯರ ಆರೈಕೆಯೊಂದಿಗೆ ನಾಲ್ವರು ಅಕ್ಕ-ತಂಗಿಯರ ಜವಾಬ್ದಾರಿಯನ್ನೂ ನಿರ್ವಹಿಸುತ್ತಿರುವ ವಿಚಾರವನ್ನು ಮನಗಂಡ ಯುವವಾಹಿನಿ ಸದಸ್ಯರು ಕುಟುಂಬಕ್ಕೆ ಆತ್ಮೀಯವಾಗಿ ಸ್ಪಂದಿಸಿದರು.

ಕುಟುಂಬದ ಪರಿಸ್ಥಿತಿಯನ್ನು ಗಮನಿಸಿದ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ ಕೊಡಾಜೆ ಅವರು, “ಇಂತಹ ಸಂದರ್ಭದಲ್ಲಿ ಕೇವಲ ಕಾರ್ಯಕ್ರಮ ನಡೆಸುವುದಕ್ಕಿಂತ ಕುಟುಂಬದೊಂದಿಗೆ ಆತ್ಮೀಯವಾಗಿ ಬೆರೆತು ಅವರಿಗೆ ಧೈರ್ಯ ತುಂಬುವುದು ಮುಖ್ಯ” ಎಂಬ ಆಶಯದೊಂದಿಗೆ ಕಾರ್ಯಕ್ರಮವನ್ನು ರೂಪಿಸಿದರು.

ಅವರ ನೇತೃತ್ವದಲ್ಲಿ ಸದಸ್ಯರು ಸ್ವಯಂಪ್ರೇರಿತರಾಗಿ ಮನೆಗೆ ತೆರಳಿ ಭಜನಾ ಸಂಕೀರ್ತನೆ ನಡೆಸಿ, ಗುರುತತ್ತ್ವದ ಸಂದೇಶವನ್ನು ಹಂಚಿಕೊಂಡರು. ಗುರುಪೂಜೆಗೆ ಅಗತ್ಯವಿರುವ ಹಣ್ಣು-ಹಂಪಲು, ಹೂವು, ಪಂಚಕಜ್ಜಾಯ ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಸದಸ್ಯರೇ ವ್ಯವಸ್ಥೆ ಮಾಡಿಕೊಂಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನೆರವೇರಿಸಿದರು.

ಮಾಜಿ ಅಧ್ಯಕ್ಷ ರಮೇಶ್ ಪೂಜಾರಿ ಮುಜಲ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕ ಶ್ರೀಧರ ಪೂಜಾರಿ ಮುಜಲ, ಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಜನಾರ್ದನ ಪೂಜಾರಿ ಕೊಡಂಗೆ, ಯಶೋಧರ, ಬಾಲಕೃಷ್ಣ ಶೇರ, ಸುಜಿತ್ ಬಾಕಿಲ ಹಾಗೂ ಸಚಿನ್ ಅಮೀನ್ ಪೆರಾಜೆ ಸೇರಿದಂತೆ ಘಟಕದ ನಿರ್ದೇಶಕರು, ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು ಕುಟುಂಬದೊಂದಿಗೆ ಆತ್ಮೀಯವಾಗಿ ಬೆರೆತರು.

ಸಂಕಷ್ಟದಲ್ಲಿರುವ ಕುಟುಂಬದೊಂದಿಗೆ ನಿಂತು, ನಾರಾಯಣ ಗುರುಗಳ ತತ್ವವನ್ನು ಕೇವಲ ಮಾತಿನಲ್ಲಿ ಸೀಮಿತಗೊಳಿಸದೆ ಮಾನವೀಯ ಕಾಳಜಿ ಮತ್ತು ಸೇವೆಯ ಮೂಲಕ ಅನುಷ್ಠಾನಗೊಳಿಸಿದ ಈ ಕಾರ್ಯಕ್ರಮವು ಗುರುತತ್ತ್ವದ ನೈಜ ಅರ್ಥವನ್ನು ಸಾರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!