Yuvavahini

SEP 24, 2026 2.00 PM IST

ಯುವವಾಹಿನಿ (ರಿ) ಮೂಡುಬಿದಿರೆ ಘಟಕ

ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮ

ಮೂಡಬಿದಿರೆ ಸೆ 24 : ಯುವವಾಹಿನಿ (ರಿ.) ಮೂಡಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ, ಮೂಡಬಿದಿರೆ ಇವರ ಸಹಯೋಗದಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮವನ್ನು ಮೂಡಬಿದಿರೆಯ ಬಿಲ್ಲವ ಸಂಘದಲ್ಲಿ ಆಯೋಜಿಸಲಾಯಿತು.

ಯುವವಾಹಿನಿ (ರಿ.) ಮೂಡಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರು, ಹಣಕಾಸು ಸೇರ್ಪಡೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಮಹಾ ಪ್ರಬಂಧಕ ಅರುಣ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.

ದಕ್ಷಿಣ ಕನ್ನಡ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಗೀತಾ ಯಶೋಧರ್, ನಬಾರ್ಡ್ ಡಿಡಿಎಂ ಸಂಗೀತಾ ಎಸ್. ಕರ್ತಾ ಹಾಗೂ ರುಡ್‌ಸೆಟ್ ಉಜಿರೆಯ ನಿರ್ದೇಶಕ ಸುನೀಲ್ ನಾಯ್ಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯುವವಾಹಿನಿ ಮೂಡಬಿದಿರೆ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ವಿಭಾಗದ ನಿರ್ದೇಶಕಿ ಶುಭಲಕ್ಷ್ಮಿ ಹಾಗೂ ಬಿಲ್ಲವ ಸಂಘದ ಅಧ್ಯಕ್ಷ ನವೀನ್ ಚಂದ್ರ ಕರ್ಕೇರ ಉಪಸ್ಥಿತರಿದ್ದರು.

ರುಡ್‌ಸೆಟ್ ನಿರ್ದೇಶಕ ಸುನೀಲ್ ನಾಯ್ಕ್ ಅವರು ಸಂಸ್ಥೆಯಲ್ಲಿ ಲಭ್ಯವಿರುವ ಉಚಿತ ಸ್ವಯಂ ಉದ್ಯೋಗ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿಗಳ ಕುರಿತು ಮಾಹಿತಿ ನೀಡಿ, ಯುವಜನರು ತರಬೇತಿಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದತ್ತ ಮುನ್ನಡೆಯುವಂತೆ ಕರೆ ನೀಡಿದರು. ಗೀತಾ ಯಶೋಧರ್ ಅವರು ಕೌಶಲ್ಯಾಭಿವೃದ್ಧಿ ತರಬೇತಿ ಪಡೆದು ಉದ್ಯಮ ಆರಂಭಿಸುವಂತೆ ಸಲಹೆ ನೀಡಿದರು. ಅಲ್ಲದೆ, ಅರ್ಹ ಫಲಾನುಭವಿಗಳು ವಿವಿಧ ಸರ್ಕಾರಿ ಯೋಜನೆಗಳಡಿ ಬ್ಯಾಂಕ್ ಸಾಲ ಸೌಲಭ್ಯಗಳನ್ನು ಪಡೆಯುವ ಕುರಿತು ಮಾಹಿತಿ ನೀಡಿದರು.

ನಬಾರ್ಡ್ ಡಿಡಿಎಂ ಸಂಗೀತಾ ಎಸ್. ಕರ್ತಾ ಅವರು ಸ್ವಸಹಾಯ ಸಂಘಗಳ ಸಾಲ ಸೌಲಭ್ಯಗಳು ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಕುರಿತು ವಿವರಿಸಿದರು. ಆರ್‌ಬಿಐ ಸಹಾಯಕ ಮಹಾ ಪ್ರಬಂಧಕ ಅರುಣ್ ಕುಮಾರ್ ಅವರು ಭಾರತೀಯ ರಿಸರ್ವ್ ಬ್ಯಾಂಕಿನ ಕಾರ್ಯವೈಖರಿ, ಬ್ಯಾಂಕ್ ಗ್ರಾಹಕರ ಹಕ್ಕುಗಳು ಹಾಗೂ RBI Integrated Ombudsman Scheme ಕುರಿತು ಅರಿವು ಮೂಡಿಸಿದರು. ಪ್ರತಿ ಬ್ಯಾಂಕ್‌ನಲ್ಲಿ ಪ್ರತಿ ಠೇವಣಿದಾರರಿಗೆ ಗರಿಷ್ಠ ₹5 ಲಕ್ಷದವರೆಗೆ ಲಭ್ಯವಿರುವ ಠೇವಣಿ ವಿಮಾ ರಕ್ಷಣೆಯ ಕುರಿತು ಮಾಹಿತಿ ನೀಡಿದ ಅವರು, ನಿಯಂತ್ರಿತ ಬ್ಯಾಂಕಿಂಗ್ ವ್ಯವಸ್ಥೆಯ ಮೂಲಕವೇ ಉಳಿತಾಯ ಮತ್ತು ಸಾಲ ವ್ಯವಹಾರಗಳನ್ನು ನಡೆಸುವಂತೆ ಸಲಹೆ ನೀಡಿದರು.

ಆರ್ಥಿಕ ಸಾಕ್ಷರತಾ ಕೇಂದ್ರ (AFLC), ಅಮೂಲ್ಯ, ಮಂಗಳೂರು ಇದರ ಸಮಾಲೋಚಕ ಲತೇಶ್ ಬಿ. ಅವರು ಹಣಕಾಸು ಸಾಕ್ಷರತೆ, ಉಳಿತಾಯ, ಡಿಜಿಟಲ್ ಬ್ಯಾಂಕಿಂಗ್, ಸುರಕ್ಷಿತ ಡಿಜಿಟಲ್ ವ್ಯವಹಾರಗಳು ಹಾಗೂ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆಸಕ್ತ ಫಲಾನುಭವಿಗಳಿಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಸಹಾಯ ಮಾಡಲಾಯಿತು.

ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳು, ಬ್ಯಾಂಕಿಂಗ್ ಸೌಲಭ್ಯಗಳು, ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಹಣಕಾಸು ಸಾಕ್ಷರತಾ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಜೀವನಮಟ್ಟವನ್ನು ಸುಧಾರಿಸಿಕೊಳ್ಳುವಂತೆ ಕರೆ ನೀಡಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಸದಸ್ಯರಿಗೆ ಅನುಕೂಲವಾಗುವಂತೆ ಇಂತಹ ಹಣಕಾಸು ಸಾಕ್ಷರತಾ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಶ್ವೇತ ಜೈನ್, ಮೂಡಬಿದಿರೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!