ಅಡ್ವೆ, ಸೆ. 14: ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ಪ್ರತಿವರ್ಷದಂತೆ ಈ ಬಾರಿಯೂ ಗಣೇಶ ಚತುರ್ಥಿ ಕ್ರೀಡಾಕೂಟವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಅಡ್ವೆ ಆವರಣದಲ್ಲಿ ಆಯೋಜಿಸಲಾಯಿತು.

ಮಧ್ಯಾಹ್ನ 2 ಗಂಟೆಗೆ ಆರಂಭಗೊಂಡ ಕ್ರೀಡಾಕೂಟದಲ್ಲಿ ಯುವವಾಹಿನಿ ಸದಸ್ಯರು ಹಾಗೂ ಗ್ರಾಮಸ್ಥರಿಗಾಗಿ ಮಕ್ಕಳ ವಿಭಾಗ, ಮಹಿಳಾ ವಿಭಾಗ ಮತ್ತು ಪುರುಷರ ವಿಭಾಗಗಳಲ್ಲಿ ವಿವಿಧ ಮನರಂಜನಾ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಉಪಾಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ಮಾಜಿ ಅಧ್ಯಕ್ಷರು, ಗೌರವ ಸಲಹೆಗಾರರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸಿ ಕ್ರೀಡಾಕೂಟಕ್ಕೆ ಮೆರುಗು ನೀಡಿದರು.
ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು







