Yuvavahini

SEP 26, 2026 11.00 AM IST

ಯುವವಾಹಿನಿ (ರಿ) ಬಜಪೆ ಘಟಕದಿಂದ ಪರಿಸರ ಜಾಗೃತಿ

ಮನೆಯ ಸ್ವಚ್ಛತೆಯಿಂದಲೇ ಸ್ವಚ್ಛ ಸಮಾಜದ ನಿರ್ಮಾಣ – ರಂಜನ್ ಬೆಳ್ಳಿಪಾಡಿ

ಬಜಪೆ, ಸೆ. 26: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ವತಿಯಿಂದ ಯುವವಾಹಿನಿ (ರಿ.) ಬಜಪೆ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ–ಕರಂಬಾರು ಇವರ ಸಹಯೋಗದಲ್ಲಿ ರಾಮಕೃಷ್ಣ ಮಿಷನ್, ಮಂಗಳೂರು ಪ್ರತಿನಿಧಿಗಳಿಂದ ವಿಶೇಷವಾಗಿ ಮಹಿಳೆಯರಿಗಾಗಿ “ಪರಿಸರ ಹಾನಿ ಕುರಿತು ಜಾಗೃತಿ ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಬಜಪೆಯಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ರಂಜನ್ ಬೆಳ್ಳಿಪಾಡಿ ಮಾತನಾಡಿ, ದೈನಂದಿನ ಬದುಕಿನಲ್ಲಿ ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ವಿವರಿಸಿದರು. ಅಡುಗೆಮನೆಯ ತ್ಯಾಜ್ಯ ನಿರ್ವಹಣೆ ಹಾಗೂ ಏಕಬಳಕೆಯ ಪ್ಲಾಸ್ಟಿಕ್‌ನಿಂದ ಉಂಟಾಗುವ ಪರಿಸರ ಹಾನಿಯ ಕುರಿತು ಮಾಹಿತಿ ನೀಡಿದ ಅವರು, “ನಮ್ಮ ಮನೆ ಹಾಗೂ ಮನೆಯ ಸುತ್ತಮುತ್ತಲಿನ ಪರಿಸರವನ್ನು ಮೊದಲು ನಾವು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಸ್ವಚ್ಛ ಹಾಗೂ ಹಸಿರು ಸಮಾಜ ನಿರ್ಮಾಣದತ್ತ ಅರ್ಥಪೂರ್ಣ ಹೆಜ್ಜೆ ಇಡಲು ಸಾಧ್ಯ” ಎಂದರು.

MRPLನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ವಿಭಾಗದ ಪ್ರಬಂಧಕ ಕೇಶವ ಪಟಾಲಿ ಅವರು ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ 75ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲರಿಗೂ ಜ್ಯೂಟ್ ಬ್ಯಾಗ್‌ಗಳನ್ನು ವಿತರಿಸಲಾಯಿತು. ಪರಿಸರ ಸ್ವಚ್ಛತೆ ಹಾಗೂ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಮೂಲಕ ಬ್ರಹ್ಮಶ್ರೀ ನಾರಾಯಣ ಗುರುಗಳ ಮಾನವೀಯತೆ, ಸಮಾನತೆ, ಸ್ವಚ್ಛತೆ ಹಾಗೂ ಒಳಿತಿನ ಚಿಂತನೆಗಳನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಬಜಪೆಯ ಅಧ್ಯಕ್ಷ ಶಿವರಾಮ ಪೂಜಾರಿ, ಯುವವಾಹಿನಿ (ರಿ.) ಬಜಪೆ ಘಟಕದ ಅಧ್ಯಕ್ಷ ರೋಹಿತ್ ಪೂಜಾರಿ ಹಾಗೂ ಪಟ್ಟಣ ಪಂಚಾಯತ್ ಕೌನ್ಸಿಲರ್ ಪದ್ಮನಾಭ ಪೂಜಾರಿ ಉಪಸ್ಥಿತರಿದ್ದರು.

ಚಂದ್ರಶೇಖರ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಶೋಭಾ ಜಗನ್ನಾಥ್ ಪ್ರಾರ್ಥಿಸಿದರು. ರೋಹಿತ್ ಪೂಜಾರಿ ಸ್ವಾಗತಿಸಿದರು. ಸುಚಿತ ದೇವರಾಜ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!