ಮಾಣಿ, ಸೆ. 25: “ಸಮಾಜದಲ್ಲಿ ನೆಲೆಸಿದ್ದ ಅನಕ್ಷರತೆ, ಅಜ್ಞಾನ, ಮೌಢ್ಯ ಹಾಗೂ ಅಸಮಾನತೆಯನ್ನು ದೂರಗೊಳಿಸಿ, ಶಿಕ್ಷಣ ಮತ್ತು ಜ್ಞಾನದ ಮೂಲಕ ಸಮಾಜಕ್ಕೆ ಹೊಸ ದಿಕ್ಕನ್ನು ತೋರಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು” ಎಂದು ಯುವವಾಹಿನಿ (ರಿ.) ಮಾಣಿ ಘಟಕದ ಮಾಜಿ ಕಾರ್ಯದರ್ಶಿ ರಾಜೇಶ್ ಬಲ್ಯ ಹೇಳಿದರು.

ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮದ ಅಂಗವಾಗಿ ಸೆ. 25ರಂದು ಧರ್ಮಣ ಪೂಜಾರಿ ಕನಪಾದೆ, ಬಿ.ಸಿ.ರೋಡು ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ತ್ವ–ಸಂದೇಶಗಳನ್ನು ಮನೆಮನೆಗೆ ತಲುಪಿಸುವ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮವು ಭಕ್ತಿಭಾವದ ಭಜನಾ ಸಂಕೀರ್ತನೆಯೊಂದಿಗೆ ನಡೆಯುತ್ತಿರುವುದು ಸಮಾಜದಲ್ಲಿ ಜಾಗೃತಿ ಮೂಡಿಸುವ ಸಾರ್ಥಕ ಪ್ರಯತ್ನವಾಗಿದೆ. ಗುರುಗಳ ತತ್ತ್ವಗಳನ್ನು ಅರಿತು, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ಬದಲಾವಣೆಗೆ ನಾವೆಲ್ಲರೂ ಕೈಜೋಡಿಸಬೇಕು” ಎಂದು ಧರ್ಮಣ ಪೂಜಾರಿ ಕನಪಾದೆ ಹೇಳಿದರು.
ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ ಕೊಡಾಜೆ, ಮಾಜಿ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ರಮೇಶ್ ಪೂಜಾರಿ ಮುಜಲ, ಜನಾರ್ದನ ಕೊಡಂಗೆ, ಯಶೋಧರ, ಬಾಲಕೃಷ್ಣ ಶೇರಾ ಬರಿಮಾರು, ಸುಜಿತ್ ಬಾಕಿಲ, ದಿನೇಶ್, ಲೋಕೇಶ್, ಸಚಿನ್ ಪೆರಾಜೆ ಹಾಗೂ ಮೋಹನ್ ಪೂಜಾರಿ ಮುಜಲ ಸೇರಿದಂತೆ ಯುವವಾಹಿನಿ ಸದಸ್ಯರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.
ಘಟಕದ ಕಾರ್ಯದರ್ಶಿ ವಿಶ್ವನಾಥ ಪೂಜಾರಿ ಸ್ವಾಗತಿಸಿದರು. ಶ್ರೀಧರ ಪೂಜಾರಿ ವಂದಿಸಿದರು. ತ್ರಿವೇಣಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು.








