ಮೂಲ್ಕಿ, ಸೆ. 26: ಯುವವಾಹಿನಿ (ರಿ.) ಮೂಲ್ಕಿ ಘಟಕದ ಸದಸ್ಯರ ನಡುವಿನ ಸಂಪರ್ಕದ ಕೊಂಡಿಯನ್ನು ಮತ್ತಷ್ಟು ಗಟ್ಟಿಗೊಳಿಸುವ ಹಾಗೂ ಸದಸ್ಯರ ಕುಟುಂಬದೊಂದಿಗೆ ಆತ್ಮೀಯವಾಗಿ ಬೆರೆಯುವ ಉದ್ದೇಶದಿಂದ ಮನೆಮನೆ ಭಜನಾ ಕಾರ್ಯಕ್ರಮ ಆಯೋಜಿಸಲಾಯಿತು.

ಸೆ. 26ರಂದು ಸಂಜೆ 6ರಿಂದ 7ರವರೆಗೆ ಘಟಕದ ಉಪಾಧ್ಯಕ್ಷ ವರುಣ್ ಚಿತಾಪು ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಭಜನಾ ಸಂಕೀರ್ತನೆ ನಡೆಸಿದರು.
ಬಳಿಕ ಮಹಾಪೂಜೆ ನೆರವೇರಿಸಿ, ಸದಸ್ಯರು ಹಾಗೂ ಕುಟುಂಬಸ್ಥರಿಗೆ ಪ್ರಸಾದ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.








