Yuvavahini

SEP 27, 2026 1.00 PM IST

ಯುವವಾಹಿನಿ ಕೂಳೂರು ಘಟಕದಿಂದ ಸೇವಾಭಾವ ಚಾರಿಟೇಬಲ್ ಟ್ರಸ್ಟ್‌ ಆಶ್ರಮ ಬೇಟಿ

ಸೇವಾ ಕಾರ್ಯದ ಮೂಲಕ ನಾರಾಯಣ ಗುರು ತತ್ವಕ್ಕೆ ನಮನ

ಮಂಗಳೂರು, ಸೆ. 27: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುದೇವರ 172ನೇ ಜನ್ಮದಿನಾಚರಣೆಯ ಅಂಗವಾಗಿ ದೇರಳಕಟ್ಟೆಯ ಸೇವಾಭಾವ ಚಾರಿಟೇಬಲ್ ಟ್ರಸ್ಟ್‌ಗೆ ದ್ವಿತೀಯ ಬಾರಿಗೆ ಭೇಟಿ ನೀಡಿ, ಆಶ್ರಮದ ಹಿರಿಯರಿಗೆ ದಿನದ ಊಟದ ವ್ಯವಸ್ಥೆ ಕಲ್ಪಿಸಲಾಯಿತು.
ನಾರಾಯಣ ಗುರುದೇವರ ಸಮಾನತೆ, ಮಾನವೀಯತೆ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಒಳಗೊಂಡ ಸೇವಾ ತತ್ವವನ್ನು ಕಾರ್ಯರೂಪಕ್ಕೆ ತರುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಗುರುಚರಣಗಳಿಗೆ ಸಮರ್ಪಿಸಲಾಯಿತು.


ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷೆ ಗೀತಾ ವಸಂತ್, ಕಾರ್ಯದರ್ಶಿ ವಂದೀಪ್, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕಿ ಹಾಗೂ ಕಾರ್ಯಕ್ರಮ ಸಂಚಾಲಕಿ ಮಧುಶ್ರೀ ಪ್ರಶಾಂತ್, ಸೇವಾಭಾವ ಚಾರಿಟೇಬಲ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಆರ್. ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಲತೀಶ್ ಪೂಜಾರಿ, ದ್ವಿತೀಯ ಉಪಾಧ್ಯಕ್ಷೆ ತುಳಸಿ ಸುಜೀರ್, ಮಾಜಿ ಅಧ್ಯಕ್ಷ ಭಾಸ್ಕರ್ ಕೋಟ್ಯಾನ್, ದೀಕ್ಷಿತ್ ಸಿ.ಎಸ್., ಮಾರ್ಗದರ್ಶಕ ಚಂದಪ್ಪ ಸನಿಲ್, ನಿರ್ದೇಶಕರು ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು.
ಆಶ್ರಮದ ಹಿರಿಯ ಮಾತೆಯೊಬ್ಬರ ಆಶೀರ್ವಾದದೊಂದಿಗೆ ಕಾರ್ಯಕ್ರಮವು ನೆರವೇರಿತು.
ಈ ಸಂದರ್ಭದಲ್ಲಿ ದರ್ಶನಮಾಲೆಯ ಎಂಟನೇ ಅಧ್ಯಾಯದ ನಿಷ್ಕಾಮ ಸ್ಥಿತಿಯನ್ನು ಸಾರುವ ಶ್ಲೋಕವನ್ನು ಸ್ಮರಿಸಲಾಯಿತು:
“ಸರ್ವಾಣೀಂದ್ರಿಯಕರ್ಮಾಣಿ ಕರೋಮಿ ನ ಇತಿ ಭಾವಯನ್ ।
ಯೋಗೀ ಸಾಂಖ್ಯೇ ಸ್ಥಿತೋ ನೈವ ಕರೋತಿ ನ ಲಿಪ್ಯತೇ ॥”
ಇಂದ್ರಿಯಗಳ ಕ್ರಿಯೆಗಳು ನಡೆಯುತ್ತಿದ್ದರೂ ‘ನಾನು ಯಾವುದನ್ನೂ ಮಾಡುತ್ತಿಲ್ಲ’ ಎಂಬ ದೃಢಭಾವದಲ್ಲಿ ಆತ್ಮಜ್ಞಾನದಲ್ಲಿ ನೆಲೆನಿಂತ ಯೋಗಿಯು ಯಾವುದೇ ಕರ್ಮಬಂಧನಕ್ಕೆ ಒಳಗಾಗುವುದಿಲ್ಲ ಎಂಬ ಈ ತಾತ್ಪರ್ಯವು, ನಿಸ್ವಾರ್ಥ ಸೇವೆಯ ಮೂಲಕ ಸಮಾಜಕ್ಕೆ ಸ್ಪಂದಿಸುವ ಕೂಳೂರು ಘಟಕದ ಸದಸ್ಯರಿಗೆ ಸಾರ್ಥಕ ಸಂದೇಶವಾಯಿತು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!