Yuvavahini

SEP 27, 2026 2.00 PM IST

ಯುವವಾಹಿನಿ ಕಂಕನಾಡಿ ಘಟಕದ ಪದಗ್ರಹಣ ಸಮಾರಂಭ

ಯುವವಾಹಿನಿ ರಾಷ್ಟ್ರ ಪ್ರಶಸ್ತಿ ಪಡೆಯುವವರೆಗೂ ಸಮಾಜಮುಖಿ ಕಾರ್ಯ ಮುಂದುವರಿಯಲಿ – ಚಂದ್ರಶೇಖರ್ ಕುಮಾರ್

ಮಂಗಳೂರು ಸೆ 27: ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಗಳು ರಾಜ್ಯ ಪ್ರಶಸ್ತಿಗೆ ಸೀಮಿತವಾಗದೆ, ರಾಷ್ಟ್ರ ಪ್ರಶಸ್ತಿ ಪಡೆಯುವ ಮಟ್ಟಕ್ಕೆ ಮುಂದುವರಿಯಬೇಕು ಎಂದು ಶ್ರೀ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕ್, ಕುದ್ರೋಳಿ ಇದರ ಅಧ್ಯಕ್ಷ ಚಂದ್ರಶೇಖರ್ ಕುಮಾರ್ ಹೇಳಿದರು.
ಅವರು ಸೆ. 27ರಂದು ಕಂಕನಾಡಿ ಗರೋಡಿ ಬಳಿಯ ಸಮೃದ್ಧಿ ಭವನದಲ್ಲಿ ನಡೆದ ಯುವವಾಹಿನಿ (ರಿ.) ಕಂಕನಾಡಿ ಘಟಕದ 2026–27ನೇ ಸಾಲಿನ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.


ಯುವವಾಹಿನಿಯಿಂದ ಹಲವಾರು ಉತ್ತಮ ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕ್ ಮತ್ತು ಯುವವಾಹಿನಿಯ ನಡುವಿನ ಸಂಬಂಧ ಗಟ್ಟಿಯಾಗಿದ್ದು, ಬ್ಯಾಂಕಿನ ನಿರ್ದೇಶಕರ ಪೈಕಿ ಹಲವರು ಯುವವಾಹಿನಿಯ ಸದಸ್ಯರಾಗಿರುವುದು ಸಂತಸದ ಸಂಗತಿ ಎಂದರು.
ಘಟಕದ ನಿಕಟಪೂರ್ವ ಅಧ್ಯಕ್ಷರಾದ ರಾಹುಲ್ ಸನಿಲ್ ಅವರು 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ್ ಕುಮಾರ್ ಪಡ್ಪು, ಯುವವಾಹಿನಿ ಕೇಂದ್ರ ಸಮಿತಿಯು ಹಲವು ಹೊಸ ಜನಪರ ಯೋಜನೆಗಳನ್ನು ಕಾರ್ಯಗತಗೊಳಿಸಲು ಚಿಂತನೆ ನಡೆಸುತ್ತಿದೆ. ನೂತನ ತಂಡವು ಇನ್ನಷ್ಟು ಉತ್ತಮ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯುವವಾಹಿನಿಯ ಘನತೆಯನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಆಶಿಸಿದರು.


ಆಕಾಶವಾಣಿ ನಿವೃತ್ತ ಉದ್ಘೋಷಕಿ ರೇಖಾ ನಾಗೇಶ್ ಕೋಟ್ಯಾನ್ ಅವರು ಯುವವಾಹಿನಿ ಸದಸ್ಯರ ಶಿಸ್ತು ಹಾಗೂ ಸಂಸ್ಥೆಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು. ಶ್ರೀ ಮಹಾಂಕಾಳಿ ದೈವಸ್ಥಾನ, ಉಜ್ಜೋಡಿ ಇದರ ಅಧ್ಯಕ್ಷ ಉಮಾನಾಥ್ ಕೋಟ್ಯಾನ್ ಮಾತನಾಡಿ, ಯುವವಾಹಿನಿಯು ಉಜ್ಜೋಡಿ ಪರಿಸರದಲ್ಲಿ ಉತ್ತಮ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದು, ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೂ ದೊಡ್ಡ ಮಟ್ಟದ ಸಹಕಾರ ನೀಡುತ್ತಿದೆ ಎಂದರು.
ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಇಂದಿರಾ ಬಿ. ಮಾತನಾಡಿ, ಕಂಕನಾಡಿ ಘಟಕಕ್ಕೆ ತಮ್ಮನ್ನು ಆಯ್ಕೆ ಮಾಡಿದ ಕೇಂದ್ರ ಸಮಿತಿಗೆ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿ ತಮ್ಮ ಪಾಲಿಗೆ ಮತ್ತೊಂದು ಕುಟುಂಬವಾಗಿದ್ದು, ಘಟಕದೊಂದಿಗೆ ಕಾರ್ಯನಿರ್ವಹಿಸುವುದು ಸಂತಸ ತಂದಿದೆ ಎಂದರು. ಕಳೆದ ಒಂದು ವರ್ಷದ ಅವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಿದ ಅಧ್ಯಕ್ಷೆ ಸುರೇಖಾ ಮೋಹನ್ ಹಾಗೂ ಅವರ ತಂಡವನ್ನು ಅಭಿನಂದಿಸಿ, ನೂತನ ತಂಡಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುರೇಖಾ ಮೋಹನ್ ಅವರು ತಮ್ಮ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಧನುಷ್ ಕುಮಾರ್ ವಾರ್ಷಿಕ ವರದಿ ವಾಚಿಸಿದರು. ಮಾಜಿ ಅಧ್ಯಕ್ಷೆ ಸುಮ ವಸಂತ್ ಪ್ರಸ್ತಾವನೆ ಮಂಡಿಸಿದರು.
‘ಡೆನ್ನಾನ ಡೆನ್ನಾನ’ ತರಬೇತಿಗಾಗಿ ತಮ್ಮ ಮನೆಯ ಪ್ರಾಂಗಣವನ್ನು ಬಳಸಲು ಅವಕಾಶ ನೀಡಿದ ಯಕ್ಷಗಾನ ಕಲಾವಿದೆ ನಿರಂಜಯ ನಾರಾಯಣ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ನೂತನ ಅಧ್ಯಕ್ಷ ಧನುಷ್ ಕುಮಾರ್ ಮಾತನಾಡಿ, ಮುಂದಿನ ಒಂದು ವರ್ಷದ ಕಾರ್ಯಕ್ರಮಗಳನ್ನು ವಿಭಿನ್ನ ರೀತಿಯಲ್ಲಿ ಆಯೋಜಿಸಲು ಮಾಜಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಹಕಾರ ಕೋರಿದರು.
ಅಪೂರ್ವ ಮತ್ತು ತಜ್ಞಾ ಪ್ರಾರ್ಥಿಸಿದರು. ನಿಯೋಜಿತ ಕಾರ್ಯದರ್ಶಿ ವನಮಾಲ ವಂದಿಸಿದರು. ಮೇಘಾ ಮತ್ತು ವೀಣಾ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು, ಕಂಕನಾಡಿ ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!