Yuvavahini

OCT 01, 2026 8.30 PM IST

ಯುವವಾಹಿನಿ (ರಿ) ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 80

ಜ್ಞಾನ ಮತ್ತು ವಿವೇಕದಿಂದ ಸಮಾಜ ಪರಿವರ್ತನೆ – ಲೋಹಿತ್ ಕನಪಾದೆ

ತೆಂಕ ಕಜೆಕಾರು ಅ 01 : ಸಮಾಜದ ಪ್ರಗತಿಗೆ ಜ್ಞಾನ ಮತ್ತು ವಿವೇಕ ಅತ್ಯಂತ ಅಗತ್ಯ. ಅಂಧಶ್ರದ್ಧೆ ಹಾಗೂ ಮೂಢನಂಬಿಕೆಗಳಿಂದ ದೂರವಾಗಿ ವಿಚಾರಶೀಲತೆಯನ್ನು ಬೆಳೆಸಿಕೊಂಡಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಲೋಹಿತ್ ಕನಪಾದೆ (ಆಪ್ತ ಸಮಾಲೋಚಕರು ಮನೋರೋಗ ವಿಭಾಗ ಆಳ್ವಾಸ್ ಮೂಡಬಿದ್ರೆ )ತಿಳಿಸಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿದ್ದ ಅಜ್ಞಾನ, ಅಸಮಾನತೆ ಹಾಗೂ ಅನಿಷ್ಟ ಆಚರಣೆಗಳ ವಿರುದ್ಧ ಜಾಗೃತಿ ಮೂಡಿಸಿ, ಶಿಕ್ಷಣ ಮತ್ತು ಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಅವರ ಚಿಂತನೆ ಮನುಷ್ಯನನ್ನು ವಿಚಾರಶೀಲನನ್ನಾಗಿ ಮಾಡುವುದರ ಜೊತೆಗೆ ಮಾನವೀಯತೆ, ಸಮಾನತೆ ಮತ್ತು ಸಹೋದರತ್ವದ ಬದುಕಿಗೆ ದಾರಿ ತೋರಿಸುತ್ತದೆ ಎಂದು ಅವರು ಹೇಳಿದರು.

ಅಂಧಶ್ರದ್ಧೆಯ ಹೆಸರಿನಲ್ಲಿ ನಡೆಯುವ ಆಚರಣೆಗಳನ್ನು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಯಾವುದೇ ವಿಚಾರವನ್ನು ಕೇವಲ ನಂಬಿಕೆಯ ಆಧಾರದಲ್ಲಿ ಸ್ವೀಕರಿಸುವ ಬದಲು ಅದರ ಸತ್ಯಾಸತ್ಯತೆಯನ್ನು ಅರಿತು, ವಿವೇಕದಿಂದ ನಿರ್ಧರಿಸುವುದು ಅಗತ್ಯ. ಯುವಜನತೆ ವೈಜ್ಞಾನಿಕ ಮನೋಭಾವದೊಂದಿಗೆ ಮುನ್ನಡೆಯುವ ಮೂಲಕ ಸಮಾಜದಲ್ಲಿ ಉತ್ತಮ ಬದಲಾವಣೆಗೆ ಕಾರಣರಾಗಬೇಕು ಎಂದರು.

ಯುವವಾಹಿನಿ (ರಿ ) ಬಂಟ್ವಾಳ ಘಟಕ ಇದರ ಆಶ್ರಯದಲ್ಲಿ ಗುರುತತ್ವವಾಹಿನಿ -80ನೇ ಮಾಲಿಕೆ ಪೂಂಜಾಲಕಟ್ಟೆ ತೆಂಕಕಜೆಕಾರು ಅಶ್ವಿನ್ ಅಮೀನ್ ಇವರ ನಿವಾಸದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ , ನಿರ್ದೇಶಕರಾದ ನವೀನ್ ಕುಡುಮೇರ್, ಶೇಖರ್ ಅಗಲ್ದೋಡಿ . ಸಂಘಟನಾ ಕಾರ್ಯದರ್ಶಿಯಾದ ಚಿಂತನ್ ರಾಜ್ , ಸರಿತಾ ಮೂರ್ಜೆ. ಸದಸ್ಯರಾದ ಯಶೋಧರ ಕಡಂಬಳಿಕೆ ಯತೀಶ್ ಬೊಳ್ಳಾಯಿ , ಮಧುಸೂದನ್ ಮಧ್ವ, ಸದಾನಂದ ವಾಮದಪದವು, ಲಿತೀಶ್ ವಾಮದಪದವು , ತ್ರಿವೇಣಿ ರಾಜೇಶ್ , ಭವ್ಯಶ್ರೀ ಪ್ರಜಿತ್ , ನಾರಾಯಣ ಪಲ್ಲಿಕಂಡ, ಸೌಮ್ಯ ಹಾಗೂ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ, ನಾಗೇಶ್ ಪೊನ್ನೋಡಿ, ಶಿವಾನಂದ ಎಂ., ಅರುಣ್ ಮಹಾಕಾಳಿಬೆಟ್ಟು , ಹರೀಶ್ ಕೋಟ್ಯಾನ್ ಕುದನೆ ಭಾಗವಹಿಸಿದ್ದರು. ಕಾರ್ಯಕ್ರಮದ ಭಜನಾ ಸಂಕೀರ್ತನೆಯಲ್ಲಿ ಸಾತ್ವಿಕ್ ದೇರಾಜೆ ಸಂಗೀತ ಸೇವೆ ನೀಡಿದರು. ಆತಿಥ್ಯ ವಹಿಸಿದ ಅಶ್ವಿನ್ ಅಮೀನ್ ಬಂಟ್ವಾಳ ಇವರು ಆಗಮಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಧನ್ಯವಾದ ಅರ್ಪಿಸಿದರು. ಘಟಕದ ಅಧ್ಯಕ್ಷರಾದ ಕಿರಣ್‌ರಾಜ್ ಪೂಂಜಾರೆಕೊಡಿ
ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!