Yuvavahini

OCT 01, 2026 3.00 PM IST

ಯುವವಾಹಿನಿ ಶಕ್ತಿನಗರ ಘಟಕ

ಮಹಿಳೆಯರ ಸ್ವಾವಲಂಬನೆಗೆ ಸೀರೆ ಕುಚ್ಚು ಕೌಶಲ್ಯ ತರಬೇತಿ

ಮಂಗಳೂರು, ಅ. 1: ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಇವರ ಜಂಟಿ ಆಶ್ರಯದಲ್ಲಿ ಐದು ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಆಂಜನೇಯ ಭವನದ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್‌ನ ಅಧ್ಯಕ್ಷ ತುಕಾರಾಂ ಪೂಜಾರಿ ಅವರು ತರಬೇತಿಯನ್ನು ಉದ್ಘಾಟಿಸಿ, ಇಂತಹ ಕೌಶಲ್ಯ ತರಬೇತಿಗಳು ಮಹಿಳೆಯರ ಸ್ವಾವಲಂಬನೆಯ ಕನಸಿಗೆ ಸಹಕಾರಿಯಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಅಧ್ಯಕ್ಷ ತೇಜಸ್ ಮಾತನಾಡಿ, ಹೊಲಿಗೆ ಕಲಿತ ಮಹಿಳೆಯರು ಸೀರೆಗೆ ಗೊಂಡೆ ಹಾಕುವಂತಹ ಹೆಚ್ಚುವರಿ ಕೌಶಲ್ಯವನ್ನು ರೂಢಿಸಿಕೊಂಡು ಸ್ವಉದ್ಯೋಗ ಕೈಗೊಂಡರೆ ಆರ್ಥಿಕವಾಗಿ ಸಬಲರಾಗಲು ಸಾಧ್ಯ. ಕುಟುಂಬದ ಆರ್ಥಿಕ ನಿರ್ವಹಣೆಗೆ ಇದರಿಂದ ನೆರವಾಗಲಿದ್ದು, ಮಹಿಳೆಯರ ಸ್ವಉದ್ಯೋಗ ತರಬೇತಿಗೆ ಯುವವಾಹಿನಿ ಸದಾ ಸಹಕಾರ ನೀಡಲಿದೆ ಎಂದರು.

ಭಾರತೀಯ ವಿಕಾಸ ಟ್ರಸ್ಟ್‌ನ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಅವರು ತರಬೇತಿಯ ನಿಯಮಗಳ ಕುರಿತು ಮಾಹಿತಿ ನೀಡಿ, ಕೌಶಲ್ಯ ತರಬೇತಿ ಮಹಿಳೆಯರಿಗೆ ಸ್ವಉದ್ಯೋಗದ ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಆರ್ಥಿಕ ಸಬಲೀಕರಣಕ್ಕೆ ನೆರವಾಗುತ್ತದೆ. ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಶಕ್ತಿನಗರ ಮೊಸರು ಕುಡಿಕೆ ಸಮಿತಿ ಅಧ್ಯಕ್ಷ ಪ್ರಾಣೇಶ್ ಅವರು ತರಬೇತಿಯಲ್ಲಿ ಭಾಗವಹಿಸುತ್ತಿರುವ ಮಹಿಳೆಯರು ಉತ್ತಮ ಕೌಶಲ್ಯವನ್ನು ಪಡೆದು ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದರು. ದಯಾನಂದ ಕತ್ತಲ್ ಸಾರ್ ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಅಂಚೆ ಇಲಾಖೆಯ ವಿವಿಧ ಸೌಲಭ್ಯಗಳ ಕುರಿತು ಸಭಿಕರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಗಣೇಶ್ ಮಹಾಕಾಳಿ, ಸಹೋದಯ ಸಂಸ್ಥೆಯ ಭಗಿನಿ ಸಿಂಥಿಯಾ ಸಿಕ್ವೇರಾ, ಆಂಜನೇಯ ಸಭಾ ಭವನದ ಅಧ್ಯಕ್ಷ ಶೇಖರ್, ಸಂಪನ್ಮೂಲ ವ್ಯಕ್ತಿ ಗೌತಮ್, ಯುವವಾಹಿನಿ ಶಕ್ತಿನಗರ ಘಟಕದ ಮಾಜಿ ಅಧ್ಯಕ್ಷೆ ಭಾರತೀ ಜಿ. ಅಮೀನ್, ನಿಕಟಪೂರ್ವ ಅಧ್ಯಕ್ಷೆ ಸುಜಾತಾ ನವೀನ್ ಹಾಗೂ ಮಮತಾ ಸುದರ್ಶನ್ ಆಚಾರ್ಯ ಉಪಸ್ಥಿತರಿದ್ದರು. ಸಹೋದಯ ಸಂಸ್ಥೆಯ ವಾಣಿ ನಾಯಕ್ ಸ್ವಾಗತಿಸಿದರು. ಕುಮಾರಿ ಚಂದ್ರಕಲಾ ವಂದಿಸಿದರು. ಶಕ್ತಿನಗರ ವ್ಯಾಪ್ತಿಯ 40 ಮಹಿಳೆಯರು ಐದು ದಿನಗಳ ತರಬೇತಿಯಲ್ಲಿ ಭಾಗವಹಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!