Yuvavahini

SEP 29, 2026 6.00 PM IST

ಯುವವಾಹಿನಿ (ರಿ.) ಕೇಂದ್ರ ಸಮಿತಿ ಆಶ್ರಯದಲ್ಲಿ ಹಾಗೂ ಪಣಂಬೂರ ಕುಳಾಯಿ ಘಟಕದ ಆತಿಥ್ಯದಲ್ಲಿ

IBPS ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ‘ಯುವ ದಿಕ್ಸೂಚಿ–2026’

ಮಂಗಳೂರು, ಸೆ. 29: ಯುವವಾಹಿನಿ (ರಿ.) ಕೇಂದ್ರ ಸಮಿತಿ ಆಶ್ರಯದಲ್ಲಿ ಹಾಗೂ ಪಣಂಬೂರ ಕುಳಾಯಿ ಘಟಕದ ಆತಿಥ್ಯದಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ ‘ಯುವ ದಿಕ್ಸೂಚಿ–2026’ರ ಮುಂದುವರಿದ ಭಾಗವಾಗಿ IBPS ಪರೀಕ್ಷೆಯ ಇಂಗ್ಲಿಷ್ ವಿಷಯಕ್ಕೆ ಪೂರಕವಾದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಮಂಗಳೂರಿನ ಸ್ಕೌಟ್ ಭವನದ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಬ್ಯಾಂಕ್ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿರುವ 17 ಉದ್ಯೋಗಾಕಾಂಕ್ಷಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡರು. ಕೆನರಾ ಬ್ಯಾಂಕ್‌ನ ಹಿರಿಯ ಪ್ರಬಂಧಕಿ ಶಾಂಭವಿ ಪ್ರಭು ಅವರು ತರಬೇತಿ ನೀಡಿದರು.

ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಅನುಭವ ಹಾಗೂ ಅನಿಸಿಕೆಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಯಿತು. IBPS ಪರೀಕ್ಷೆಯ ಕುರಿತಿದ್ದ ಭಯ ದೂರವಾಗಿ ಆತ್ಮವಿಶ್ವಾಸ ಹೆಚ್ಚಾಗಿದ್ದು, ಬ್ಯಾಂಕಿಂಗ್ ಕ್ಷೇತ್ರಕ್ಕೆ ಪ್ರವೇಶಿಸಲು ಅಗತ್ಯವಾದ ನಿಖರ ಮಾರ್ಗದರ್ಶನ ದೊರೆಯಿತು. ಪರೀಕ್ಷೆಯನ್ನು ಎದುರಿಸುವ ತಂತ್ರಗಳನ್ನು ತಿಳಿದುಕೊಳ್ಳಲು ಕಾರ್ಯಾಗಾರ ಸಹಕಾರಿಯಾಯಿತು ಎಂದು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ BSRB ಬೆಂಗಳೂರಿನ ಮಾಜಿ ನಿರ್ದೇಶಕ ಹಾಗೂ ಕೆನರಾ ಬ್ಯಾಂಕ್‌ನ ನಿವೃತ್ತ ಸೀನಿಯರ್ ಮ್ಯಾನೇಜರ್ ಎಂ.ಕೆ. ಸುಬ್ರಾಯ ಪ್ರಭು ಅವರು IBPS ಪರೀಕ್ಷೆಗೆ ಪೂರಕವಾದ ಹಲವು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು. ಯುವ ಸಮುದಾಯದಲ್ಲಿ ಸರ್ಕಾರಿ ಉದ್ಯೋಗದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯುವವಾಹಿನಿ ಸಂಸ್ಥೆ ಕೈಗೊಳ್ಳುತ್ತಿರುವ ಕಾರ್ಯಕ್ರಮಗಳನ್ನು ಅವರು ಶ್ಲಾಘಿಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಲತಾ, ಮಂಗಳೂರು ಘಟಕದ ಸದಸ್ಯೆ ಹಾಗೂ ಶಿಕ್ಷಕಿ ಪೂರ್ಣಿಮಾ ಯು.ಆರ್. ಮತ್ತು ಸ್ಕೌಟ್ ಭವನದ ಅಧಿಕಾರಿಗಳು ಸಹಕರಿಸಿದರು. ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷ ಸುರೇಶ್ ಪೂಜಾರಿ ಅವರು ಕಾರ್ಯಾಗಾರವನ್ನು ಸಂಯೋಜಿಸಿದರು. ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಹರೀಶ್ ಬಾಕಿಲ ಅವರ ಸಹಕಾರದೊಂದಿಗೆ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ಒಳಗೊಂಡಂತೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!