Yuvavahini

SEP 29, 2026 8.00 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ಹದಿಹರೆಯದವರ ಮಾನಸಿಕ ಸಮಸ್ಯೆಗಳನ್ನು ನಿರ್ಲಕ್ಷಿಸಬಾರದು – ಮಮತಾ ಸುವರ್ಣ

ಮಂಗಳೂರು ಸೆ 29 : ಹದಿಹರೆಯದವರ ಮನಸ್ಸು ಸೂಕ್ಷ್ಮವಾಗಿದ್ದು, ಈ ವಯಸ್ಸಿನಲ್ಲಿ ಉಂಟಾಗುವ ದೈಹಿಕ, ಭಾವನಾತ್ಮಕ ಹಾಗೂ ಸಾಮಾಜಿಕ ಬದಲಾವಣೆಗಳು ಅವರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಮಕ್ಕಳಲ್ಲಿ ಕಂಡುಬರುವ ಮಾನಸಿಕ ಸಮಸ್ಯೆಗಳನ್ನು ಪೋಷಕರು ನಿರ್ಲಕ್ಷಿಸದೆ, ಆರಂಭದಲ್ಲಿಯೇ ಗುರುತಿಸಿ ಸೂಕ್ತ ಸಲಹೆ ಹಾಗೂ ಚಿಕಿತ್ಸೆಯನ್ನು ಕೊಡಿಸುವುದು ಅಗತ್ಯ ಎಂದು ಕೆ.ಎಂ.ಸಿ. ಆಸ್ಪತ್ರೆಯ ಆರೋಗ್ಯ ಸಲಹೆಗಾರರಾದ ಮಮತಾ ಸುವರ್ಣ ಹೇಳಿದರು.

ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ 29-09-2026-ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ‘ಹದಿಹರೆಯದವರಲ್ಲಿ ಮಾನಸಿಕ ಸಮಸ್ಯೆಗಳು ಮತ್ತು ಪರಿಹಾರ’ ವಿಷಯದ ಕುರಿತು ಅವರು ಮಾಹಿತಿ ನೀಡಿದರು.

ಹದಿಹರೆಯದವರಲ್ಲಿ ಆತಂಕ, ಖಿನ್ನತೆ, ಒತ್ತಡ, ಗಮನ ಕೊರತೆ ಮತ್ತು ಅತಿಚಟುವಟಿಕೆ, ತಿನ್ನುವ ಅಸ್ವಸ್ಥತೆಗಳು, ಮೊಬೈಲ್ ಹಾಗೂ ಗೇಮಿಂಗ್ ವ್ಯಸನ, ಆತ್ಮವಿಶ್ವಾಸದ ಕೊರತೆ, ದೇಹದ ಬಗ್ಗೆ ನಕಾರಾತ್ಮಕ ಭಾವನೆ, ಕೋಪ ಹಾಗೂ ವರ್ತನೆಯ ಸಮಸ್ಯೆಗಳು ಸೇರಿದಂತೆ ವಿವಿಧ ರೀತಿಯ ಮಾನಸಿಕ ತೊಂದರೆಗಳು ಕಂಡುಬರಬಹುದು. ಇಂತಹ ಲಕ್ಷಣಗಳು ನಿರಂತರವಾಗಿ ಕಂಡುಬಂದಲ್ಲಿ ಅವುಗಳನ್ನು ಕಡೆಗಣಿಸದೆ ಕೌನ್ಸಿಲರ್ ಅಥವಾ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸುವುದು ಉತ್ತಮ ಎಂದರು.

ಮಕ್ಕಳ ಬೆಳವಣಿಗೆಯ ವಾತಾವರಣ ಸ್ನೇಹಪೂರ್ಣವಾಗಿರಬೇಕು. ಮಕ್ಕಳ ಮುಂದೆ ಪೋಷಕರು ಜಗಳವಾಡುವುದನ್ನು ತಪ್ಪಿಸಿ, ಅವರೊಂದಿಗೆ ಸ್ನೇಹದಿಂದ ಮಾತನಾಡಬೇಕು. ಇತರ ಮಕ್ಕಳೊಂದಿಗೆ ಹೋಲಿಕೆ ಮಾಡದೆ, ಜೀವನದ ಕಷ್ಟಗಳನ್ನು ಧೈರ್ಯದಿಂದ ಎದುರಿಸುವ ಆತ್ಮವಿಶ್ವಾಸವನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಅವರು ಸಲಹೆ ನೀಡಿದರು.

ಗುರುಪೂಜೆ, ಸಭಾ ಕಾರ್ಯಕ್ರಮ ಸಂಜೆ 5.30ರಿಂದ 6.30ರವರೆಗೆ ಭಜನೆ ನಡೆಯಿತು. ಬಳಿಕ ಘಟಕದ ಗೌರವ ಸದಸ್ಯರಾದ ಭಾಸ್ಕರ ಪೂಜಾರಿ ಗುರುಪೂಜೆ ನೆರವೇರಿಸಿದರು. ಘಟಕದ ಸದಸ್ಯರಾದ ದೀಕ್ಷಿತ್ ಪಿ. ಕುಕ್ಯಾನ್ ಗುರುಪೂಜೆಯ ಸೇವೆ ಸಲ್ಲಿಸಿದರು.

ಸಂಜೆ 7 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಆರಂಭವಾಯಿತು. ಅಧ್ಯಕ್ಷರು ಸರ್ವಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯದರ್ಶಿ ಉಷಾ ಗತಸಭೆಯ ವರದಿ ವಾಚಿಸಿ ಅನುಮೋದನೆ ಪಡೆದರು. ಮಾನಸಿಕ ಆರೋಗ್ಯದ ಕುರಿತು ಮಾಹಿತಿ ನೀಡಿದ ಮಮತಾ ಸುವರ್ಣ ಅವರನ್ನು ಘಟಕದ ಪರವಾಗಿ ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಮಹಿಳಾ ಸಂಘಟನಾ ನಿರ್ದೇಶಕಿ ಜಯಂತಿ ಕೋಟ್ಯಾನ್ ಗುರುಸಂದೇಶ ವಾಚಿಸಿದರು. ಘಟಕದ ಸದಸ್ಯೆ ಕಾವ್ಯಶ್ರೀ ಟಿ. ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!