Yuvavahini

OCT 04, 2026 10.00 AM IST

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಚಾಲನೆ

ಯುವಶಕ್ತಿ ದೇಶದ ದೊಡ್ಡ ಮಾನವ ಸಂಪತ್ತು: ಡಾ. ಮೋಹನ್ ಆಳ್ವ

ಮೂಡುಬಿದಿರೆ ಅ 4: ಯುವಜನತೆಯೇ ದೇಶದ ನಿಜವಾದ ಸಂಪತ್ತು. ಈ ಯುವಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬೆಳೆಸಿದರೆ ದೇಶದ ಭವಿಷ್ಯ ಮತ್ತಷ್ಟು ಬಲಿಷ್ಠಗೊಳ್ಳುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.

ಯುವವಾಹಿನಿ ಕ್ರೀಡೋತ್ಸವ 2026 : ಉದ್ಘಾಟನೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ಅಕ್ಟೋಬರ್ 4 ಭಾನುವಾರ ನಡೆದ *‘ಯುವವಾಹಿನಿ ಕ್ರೀಡೋತ್ಸವ–2026’*ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಯ ಪ್ರಮುಖ ಸಂದೇಶವೇ ಕ್ರೀಡಾ ಸ್ಫೂರ್ತಿ. ಗೆಲುವು ಮತ್ತು ಸೋಲು ಕ್ರೀಡೆಯಲ್ಲಿ ಸಹಜ. ಗೆದ್ದಾಗ ಅಹಂಕಾರಪಡದೆ, ಸೋತಾಗ ಕುಗ್ಗದೆ, ಎದುರಾಳಿಯನ್ನು ಗೌರವಿಸಿ ಮತ್ತೆ ಪ್ರಯತ್ನಿಸುವ ಮನೋಭಾವವೇ ನಿಜವಾದ ಕ್ರೀಡಾ ಸ್ಫೂರ್ತಿ. ಈ ಮನೋಭಾವವನ್ನು ಜೀವನದಲ್ಲಿಯೂ ಅಳವಡಿಸಿಕೊಂಡು ಗೆಲುವು–ಸೋಲನ್ನು ಸಮಾನವಾಗಿ ಸ್ವೀಕರಿಸುತ್ತಾ ಮುನ್ನಡೆಯಬೇಕು ಎಂದರು.

ಕ್ರೀಡೋತ್ಸವಕ್ಕೆ ಚಾಲನೆ ನೀಡಿದ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷರಾದ ಡಾ ಎಮ್ ಮೋಹನ್ ಆಳ್ವ

ಬಂಟರು, ಬಿಲ್ಲವರು, ಮೊಗವೀರರು ಒಂದೇ ತಾಯಿಯ ಮಕ್ಕಳು : ಬಂಟರು, ಬಿಲ್ಲವರು ಹಾಗೂ ಮೊಗವೀರರು ಒಂದೇ ತಾಯಿಯ ಮಕ್ಕಳೆಂಬ ಪ್ರತೀತಿ ಇದೆ. ಈ ಬಾಂಧವ್ಯವನ್ನು ಕಾಪಾಡಿಕೊಂಡು, ಪರಸ್ಪರ ಗೌರವ, ಪ್ರೀತಿ ಮತ್ತು ಸೌಹಾರ್ದದಿಂದ ಬದುಕಬೇಕು ಎಂದು ಡಾ. ಮೋಹನ್ ಆಳ್ವ ಕರೆ ನೀಡಿದರು.

ಜಾರೋಹಣ ನೆರವೇರಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು

ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ: ಉಮಾನಾಥ ಕೋಟ್ಯಾನ್ : ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಶಾಸಕ ಉಮಾನಾಥ ಕೋಟ್ಯಾನ್, ಯುವಜನರಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದಕ್ಕೆ ಸೂಕ್ತ ವೇದಿಕೆ ಕಲ್ಪಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಯುವಕರು ತಮ್ಮ ಪ್ರತಿಭೆಯನ್ನು ಮುಕ್ತವಾಗಿ ಪ್ರದರ್ಶಿಸಲು ಕ್ರೀಡೋತ್ಸವದಂತಹ ಕಾರ್ಯಕ್ರಮಗಳು ಉತ್ತಮ ಅವಕಾಶ ಕಲ್ಪಿಸುತ್ತವೆ ಎಂದರು. ಪ್ರತಿಯೊಬ್ಬರ ಜೀವನದಲ್ಲೂ ಗೆಲುವು ಮತ್ತು ಸೋಲು ಎದುರಾಗುತ್ತವೆ. ಒಬ್ಬರು ಗೆಲ್ಲಬೇಕಾದರೆ ಮತ್ತೊಬ್ಬರು ಸೋಲಲೇಬೇಕು. ಆದ್ದರಿಂದ ಗೆಲುವು ಮತ್ತು ಸೋಲು ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಜಾರೋಹಣ ನೆರವೇರಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು

ಯುವವಾಹಿನಿಗೆ ಉತ್ತಮ ಭವಿಷ್ಯವಿದ್ದು, ಯುವಕರನ್ನು ಸಂಘಟಿಸಿ ಅವರ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸಿಕೊಳ್ಳುವ ಮೂಲಕ ಸಂಘಟನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬೆಳೆಸಬಹುದು ಎಂದರು.

ಯುವ ಪ್ರತಿಭೆಗಳಿಗೆ ಉತ್ತಮ ವೇದಿಕೆ: ಡಾ. ಎನ್.ಟಿ. ಅಂಚನ್ : ಸಮಾರಂಭ ಉದ್ಘಾಟನೆ ಮಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಡಾ. ಎನ್.ಟಿ. ಅಂಚನ್ ಮಾತನಾಡಿ, ಯುವಕರಲ್ಲಿ ಶಿಸ್ತು, ಸಂಯಮ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಾದರಿ ಸಂಘಟನೆಯಾಗಿ ಯುವವಾಹಿನಿ ಕಾರ್ಯನಿರ್ವಹಿಸುತ್ತಿದೆ ಎಂದರು. ನಮ್ಮ ಸಮಾಜದಲ್ಲಿ ಸಾಕಷ್ಟು ಕ್ರೀಡಾ ಪ್ರತಿಭೆಗಳಿದ್ದು, ಅವರಿಗೆ ಆಳ್ವಾಸ್‌ನಂತಹ ಉತ್ತಮ ವೇದಿಕೆ ದೊರೆತರೆ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ. ಅಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹೇಳಿದರು.

ಆಕರ್ಷಕ ಪಥ ಸಂಕಲನದಲ್ಲಿ ಪ್ರಥಮ ಬಹುಮಾನ ಪಡೆದ ಯುವವಾಹಿನಿ ಕಾರ್ಕಳ ಘಟಕ
ಆಕರ್ಷಕ ಪಥ ಸಂಕಲನದಲ್ಲಿ ದ್ವಿತೀಯ ಬಹುಮಾನ ಪಡೆದ ಯುವವಾಹಿನಿ ಬಂಟ್ವಾಳ ಘಟಕ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಧ್ವಜಾರೋಹಣ ನೆರವೇರಿಸಿದರು ಕಾರ್ಯಕ್ರಮದ ಆರಂಭದಲ್ಲಿ ಯುವವಾಹಿನಿಯ 35 ಘಟಕಗಳ ಭವ್ಯ ಪಥಸಂಚಲನ ನಡೆಯಿತು. ಡಾ. ಮೋಹನ್ ಆಳ್ವ ಅವರನ್ನು ಗೌರವಿಸಿ ಅಭಿನಂದಿಸಲಾಯಿತು

ಪಥಸಂಚಲನದಲ್ಲಿ ಧ್ವಜವಂದನೆ ಸ್ವೀಕರಿಸಿದ ಕಾರವಾರ ನೌಕಾನೆಲೆಯ ಐಎನ್‌ಎಸ್ ವಿಕ್ರಮಾದಿತ್ಯದ ಮುಖ್ಯ ವೈದ್ಯಾಧಿಕಾರಿ ಸರ್ಜನ್ ಕಮಾಂಡರ್ ಡಾ. ಅರ್ಜುನ್ ಅಂಚನ್ ಹಾಗೂ ಮಹಿಳಾ ವಿಶ್ವಕಪ್ ಕಬಡ್ಡಿ ವಿಜೇತ ತಂಡದ ಸದಸ್ಯೆ ಧನಲಕ್ಷ್ಮಿ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಪಥಸಂಚಲನದಲ್ಲಿ ಧ್ವಜವಂದನೆ ಸ್ವೀಕರಿಸಿದ ಕಾರವಾರ ನೌಕಾನೆಲೆಯ ಐಎನ್‌ಎಸ್ ವಿಕ್ರಮಾದಿತ್ಯದ ಮುಖ್ಯ ವೈದ್ಯಾಧಿಕಾರಿ ಸರ್ಜನ್ ಕಮಾಂಡರ್ ಡಾ. ಅರ್ಜುನ್ ಅಂಚನ್

ಕ್ರೀಡೋತ್ಸವದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಯುವಕರು ಉತ್ಸಾಹದಿಂದ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಕಾರ್ಕಾಳ ಬಿಲ್ಲವ ಸಂಘದ ಅಧ್ಯಕ್ಷರಾದ
ಪ್ರಮಲ್ ಕುಮಾರ್, ಮೂಡುಬಿದಿರೆ ಬಿಲ್ಲವ ಸಂಘದ ಅದ್ಯಕ್ಷರಾದ ನವೀನ್‌ಚಂದ್ರ ಕರ್ಕೇರ, ಉದ್ಯಮಿ ನಾರಾಯಣ ಪಿ.ಎಂ., ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಡಾ. ಅಮರಶ್ರೀ, ಮುಖ್ಯ ಅತಿಥಿಯಾಗಿ ಭಾಗವಹಿಸಿದರು ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಕ್ರೀಡಾ ನಿರ್ದೇಶಕರಾದ ಶಂಕರ್ ಎ ಕೋಟ್ಯಾನ್, ಯುವವಾಹಿನಿ ಮೂಡುಬಿದಿರೆ ಘಟಕದ ಕ್ರೀಡಾ ನಿರ್ದೇಶಕರಾದ ಪ್ರಸಾದ್ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರುಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಸ್ವಾಗತಿಸಿದರು ಕ್ರೀಡಾ ನಿರ್ದೇಶಕ ಶಂಕರ್ ಕೋಟ್ಯಾನ್ ವಂದಿಸಿದರು. ದಿನೇಶ್ ಸುವರ್ಣ ರಾಯಿ ಹಾಗೂ ರಕ್ಷಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!