ಮೂಡುಬಿದಿರೆ ಅ. 04 : ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ಸಂಸ್ಕೃತಿ, ವೈದ್ಯಕೀಯ, ಆಡಳಿತ, ಉದ್ಯಮ ಹಾಗೂ ದೇಶಪ್ರೇಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಆಧುನಿಕ ಮೂಡುಬಿದಿರೆಯ ನಿರ್ಮಾತೃ ಎಂದೇ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು.

2026ರ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವದ ಸಂದರ್ಭದಲ್ಲಿ ಡಾ. ಮೋಹನ ಆಳ್ವರಿಗೆ ಅಭಿನಂದನೆ ಸಲ್ಲಿಸಿ, ಅವರ ಬಹುಮುಖಿ ಸೇವೆ, ಸಾಧನೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಆತಿಥಿಗಳು ಶ್ಲಾಘಿಸಿದರು.
ಶಿಕ್ಷಣ, ಕ್ರೀಡೆ, ಕಲೆ ಮತ್ತು ಸಂಸ್ಕೃತಿಯ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಕೊಡುಗೆಗಳು ಸಮಾಜದ ಪ್ರಗತಿಗೆ ಮಹತ್ವದ ಪೂರಕವಾಗಿವೆ. ವಿಶೇಷವಾಗಿ ಯುವಜನತೆಯ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಯುವಪೀಳಿಗೆಯ ಬೆಳವಣಿಗೆಗೆ ನೀಡುತ್ತಿರುವ ಪ್ರೋತ್ಸಾಹ ಅನುಕರಣೀಯವಾಗಿದೆ. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಸದಾ ಪ್ರೇರಣೆಯಾಗಲಿ ಎಂದು ಯುವವಾಹಿನಿ ಸಂಸ್ಥೆ ಹಾರೈಸಿತು.

ಈ ಸಂದರ್ಭದಲ್ಲಿ ಶಾಸಕರಾದ ಉಮನಾಥ ಕೋಟ್ಯಾನ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಯುವವಾಹಿನಿ ಕೇಂದ್ರ ಸಮಿತಿ ಗೌರವ ಸಲಹೆಗಾರರಾದ ಡಾ.ಎನ್ ಟಿ ಅಂಚನ್, ಕಾರವಾರ ನೌಕಾ ನೆಲೆಯ ಸರ್ಜನ್ ಕಮಾಂಡರ್ ಡಾ. ಅರ್ಜುನ್ ಅಂಚನ್ , ಕಾರ್ಕಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಪ್ರಮಲ್ ಕುಮಾರ್, ನಿಶ್ಮಿತಾ ಸಮೂಹ ಸಂಸ್ಥೆಗಳ ಮಾಲಕರಾದ ನಾರಾಯಣ ಪಿ.ಎಂ , ಮೂಡಬಿದಿರೆ ಬಿಲ್ಲವ ಸಂಘದ ಅಧ್ಯಕ್ಷರಾದ ನವೀನ್ ಚಂದ್ರ ಕರ್ಕೆರ, ಕೇಂದ್ರ ಸಮಿತಿಯ ಪ್ರದಾನ ಕಾರ್ಯದರ್ಶಿ ರೇಖಾ ಗೋಪಾಲ್, ಕ್ರೀಡಾ ನಿರ್ದೇಶಕರಾದ ಶಂಕರ್ ಎ ಕೋಟ್ಯಾನ್, ಮೂಡಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ , ಘಟಕದ ಕ್ರೀಡಾ ನಿರ್ದೇಶಕರಾದ ಪ್ರಸಾದ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.







